ದಲಿತರ ಹಣ ದುರುಪಯೋಗ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork | Published : Mar 7, 2025 12:45 AM

ಸಾರಾಂಶ

ಬಡವರಿಗೆ ಆಸೆ ಆಕಾಂಕ್ಷೆಗಳನ್ನು ತೋರಿಸಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಾಂಪಿಯನ್ ನಾವೇ ಎಂದು ಕಾಂಗ್ರೆಸ್ ಸರ್ಕಾರ ಎಂದು ಹೇಳಿಕೊಳ್ಳುತ್ತಿದೆ. ಆದ್ರೆ ಎಸ್ಸಿ ಎಸ್ಟಿ ಅವರಿಗೆ ಏನು ಮಾಡುತ್ತಿದೆ. ಎಸ್ಸಿ, ಎಸ್ಟಿಗಳಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ವಾಲ್ಮಿಕಿ ನಿಗಮದಲ್ಲಿ ಎಸ್‌ಟಿಗಳಿಗೆ ಮೀಸಲಿಟ್ಟ ಹಣವನ್ನು ಲೋಕಸಭಾ ಚುನಾವಣೆಗೆ ಮತ್ತು ಲಿಕ್ಕರ್ ಮಾಫೀಯಾಗಳಿಗೆ ಬಳಕೆ ಮಾಡಿದೆ.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ರಾಜ್ಯ ಸರ್ಕಾರ ಎಸ್‍ಸಿಪಿ-ಟಿಎಸ್‍ಪಿ ಹಣ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುವ ಮೂಲಕ ದಲಿತರ ಹಣ ದುರಪಯೋಗ ಮಾಡಿಕೊಂಡಿದೆ ಎಂದು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸಂಸದ ಡಾ.ಕೆ.ಸುಧಾಕರ್ ಮತ್ತು ಕೇಂದ್ರದ ಮಾಜಿ ಸಚಿವ ಎ.ನಾರಾಯಾಣಸ್ವಾಮಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಅಂಬೇಡ್ಕರ್ ಭವನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೂ ಕಾಲ್ನಡಿಗೆ ಮೂಲಕ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

ದಲಿತರ ಹಣ ದುರುಪಯೋಗ

ಈವೇಳೆ ಸಂಸದ ಡಾ.ಕೆ.ಸುಧಾಕರ್ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ದಲಿತರ ಮತಗಳನ್ನ ಪಡೆದು ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇಂದು ದಲಿತರ ಹಣವನ್ನೇ ದುರಪಯೋಗ ಮಾಡಿಕೊಳ್ಳುತ್ತಿದೆ. ಅಹಿಂದ ಚಾಂಪಿಯನ್ ಅಂತ ಕರೆದುಕೊಳ್ಳೋ ಸಿದ್ದರಾಮಯ್ಯನವರೇ ನೀವು ದಲಿತರಿಗೆ ಮಾಡಿರೋದು ಏನು, ಬಡವರಿಗೆ ಮನೆ ಕೊಟ್ಟಿದ್ದೀರಾ, ಕಾಂಕ್ರೀಟ್ ರಸ್ತೆ ಇದ್ಯಾ. ದಲಿತರ ಅಭಿವೃದ್ದಿಗೆ ಮೀಸಲಿಟ್ಟ ಹಣವನ್ನು ಗ್ಯಾರಂಟಿ ಯೋಜನೆಗಳನ್ನ ಬಳಸಿಕೊಳ್ತೀದ್ದೀರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು.

ನಮ್ಮ ಹೊಟ್ಟೆ ಮೇಲೆ ಕಾಂಗ್ರೆಸ್ ಸರ್ಕಾರ ಹೊಡೆಯುತ್ತಿದೆ. ಎಸ್ಸಿ,ಎಸ್ಟಿ, ಬಡವರಿಗೆ ಆಸೆ ಆಕಾಂಕ್ಷೆಗಳನ್ನು ತೋರಿಸಿ ಸರ್ಕಾರ ಅಧಿಕಾರಕ್ಕೆ ಬಂದಿದೆ. ಚಾಂಪಿಯನ್ ನಾವೇ ಎಂದು ಕಾಂಗ್ರೆಸ್ ಸರ್ಕಾರ ಎಂದು ಹೇಳಿಕೊಳ್ಳುತ್ತಿದೆ. ಆದ್ರೆ ಎಸ್ಸಿ ಎಸ್ಟಿ ಅವರಿಗೆ ಏನು ಮಾಡುತ್ತಿದೆ. ಎಸ್ಸಿ, ಎಸ್ಟಿಗಳಿಗೆ ಹಣವನ್ನು ಕಾಂಗ್ರೆಸ್ ಸರ್ಕಾರ ದುರುಪಯೋಗ ಮಾಡಿಕೊಳ್ಳುತ್ತಿದೆ. ವಾಲ್ಮಿಕಿ ನಿಗಮದಲ್ಲಿ ಎಸ್‌ಟಿಗಳಿಗೆ ಮೀಸಲಿಟ್ಟ ಹಣವನ್ನು ಲೋಕಸಭಾ ಚುನಾವಣೆಗೆ ಮತ್ತು ಲಿಕ್ಕರ್ ಮಾಫೀಯಾಗಳಿಗೆ ಬಳಕೆ ಮಾಡಿದೆ. ನಾಚಿಕೆಯಾಗಬೇಕಾಗಿದೆ ಈ ಕಾಂಗ್ರೆಸ್ ಸರ್ಕಾರಕ್ಕೆ ಎಂದರು.

ಡಿಕೆಶಿ ಪರ ಬ್ಯಾಟಿಂಗ್:

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಂಭ ಸ್ನಾನಕ್ಕೆ ತೆರಳಿದ ವಿಚಾರ ಕುರಿತ ಪ್ರ ಉತ್ತರಿಸಿ, ನಾನು ಹಿಂದು ಆಗಿ‌ ಹುಟ್ಟಿ ಹಿಂದು ಆಗಿ ಸಾಯುತ್ತೀನಿ ಎಂದು ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಕುಂಭ ಸ್ನಾನ,ಕಫಿಲ ಸ್ನಾನಕ್ಕೂ ಹೋಗತ್ತೇನೆ, ಈಶಾಗೂ ಹೋಗುತ್ತೇನೆ ಎಂದಿದ್ದಾರೆ. ಭಾಗಿಯಾಗುವುದರಲ್ಲಿ ತಪ್ಪೇನು ಇಲ್ಲಾ. ಭಾಗಿಯಾಗಿರುವುದಕ್ಕೆ ರಾಜಕೀಯ ಲೇಪನ ಮಾಡುವುದು ಸರಿಯಿಲ್ಲಾ ಎಂದರು.

ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಬರುತ್ತಿರುವ ವಿಚಾರವಾಗಿ ಮಾತನಾಡಿ,ಗೃಹ ಸಚಿವ ಅಮಿತ್ ಶಾರವರು ಖಾಸಗಿ ಆಸ್ಪತ್ರೆಗೆ ಉದ್ಘಾಟನೆಗೆ ಬರುತ್ತಿದ್ದಾರೆ. ಶ್ರೀ ವಿಶ್ವತೀರ್ಥ ಸ್ವಾಮಿಗಳ ವತಿಯಿಂದ ನಿರ್ಮಾಣವಾಗಿದೆ. ಹಿಂದೆ ಯಡಿಯೂರಪ್ಪ ನವರು ಮುಖ್ಯಮಂತ್ರಿ, ತಾವು ಸಚಿವರಾಗಿದ್ದಾಗ ಆಸ್ಪತ್ರೆ ನಿರ್ಮಾಣಕ್ಕೆ ಜಮೀನು ಮಂಜೂರು ಮಾಡಿದ್ದಾಗಿ ತಿಳಿಸಿದರು.

ಜಿಲ್ಲಾಧಿಕಾರಿಗೆ ಮನವಿ ಸಲ್ಲಿಕೆ

ಪ್ರತಿಭಟನೆಯ ನಂತರ ಪ್ರತಿಭಟನಾಕಾರರು ಸಂಸದ ಡಾ.ಕೆ.ಸುಧಾಕರ್ ನೇತೃತ್ವದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಮಾಜಿ ಕೇಂದ್ರ ಸಚಿವ ಎ.ನಾರಾಯಾಣಸ್ವಾಮಿ,ನಗರಸಭೆ ಅಧ್ಯಕ್ಷ ಎ.ಗಜೇಂದ್ರ, ಉಪಾಧ್ಯಕ್ಷ ಜೆ.ನಾಗರಾಜ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಮರಳಕುಂಟೆ ಕೃಷ್ಣಮೂರ್ತಿ, ಜೆಡಿಎಸ್ ಜಿಲ್ಲಾಧ್ಯಕ್ಷ ಮುಕ್ತ ಮುನಿಯಪ್ಪ, ಜೆಡಿಎಸ್ ಕಾರ್ಯಾಧ್ಯಕ್ಷ ಕೆ.ಆರ್.ರೆಡ್ಡಿ, ಜೆಡಿಎಸ್ ನ ನರಸಿಂಹಮೂರ್ತಿ, ಮಂಜು, ಚಿಕ್ಕಬಳ್ಳಾಪುರ ಅಭಿವೃದ್ದಿ ಪ್ರಾಧಿಕರದ ಮಾಜಿ ಅಧ್ಯಕ್ಷ ಕೃಷ್ಣಮೂರ್ತಿ,ಬಿಎಂಟಿಸಿ ಮಾಜಿ ಉಪಾಧ್ಯಕ್ಷ ಕೆ.ವಿ.ನವೀನ್ ಕಿರಣ್, ಮುಖಂಡರಾದ ಅಗಲಗುರ್ಕಿ ಚಂದ್ರಶೇಖರ್, ಬಿ.ವಿ.ಕೃಷ್ಣಪ್ಪ, ಮಂಚನಬಲೆ ಶ್ರೀನಿವಾಸ್, ಅವುಲಕೊಂಡರಾಯಪ್ಪ, ದಲಿತ ಮುಖಂಡರಾದ ಬಿ.ಎನ್.ಗಂಗಾಧರಪ್ಪ, ವೇಣು ಮತ್ತಿತರರು ಇದ್ದರು.

Share this article