ಬೆಲೆ ಏರಿಕೆಯ ಕ್ರಮದ ವಿರುದ್ಧ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Nov 08, 2026, 01:30 AM IST
07ಕೆಪಿಆರ್ಸಿಆರ್ 02ಮತ್ತು03  | Kannada Prabha

ಸಾರಾಂಶ

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಹಾಲು, ಮೊಸರು ಹಾಗೂ ಬಸ್ ದರ ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವುದನ್ನು ಖಂಡಿಸಿ, ಆಡಳಿತ ವರ್ಗದ ಜನವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ)ಯಿಂದ ಶನಿವಾರ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ರಾಯಚೂರು

ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ಹಾಲು, ಮೊಸರು ಹಾಗೂ ಬಸ್ ದರ ಭಾರಿ ಪ್ರಮಾಣದಲ್ಲಿ ಹೆಚ್ಚಳ ಮಾಡಿರುವುದನ್ನು ಖಂಡಿಸಿ, ಆಡಳಿತ ವರ್ಗದ ಜನವಿರೋಧಿ ನೀತಿಗಳ ವಿರುದ್ಧ ಭಾರತೀಯ ಜನತಾ ಪಕ್ಷ (ಬಿಜೆಪಿ)ಯಿಂದ ಶನಿವಾರ ಬೃಹತ್ ಪ್ರತಿಭಟನೆಯನ್ನು ನಡೆಸಲಾಯಿತು.

ಸ್ಥಳೀಯ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ನೇತೃತ್ವದಲ್ಲಿ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಸೇರಿದ ಪಕ್ಷದ ಮುಖಂಡರು,ಕಾರ್ಯಕರ್ತರು ಸಂಚಾರ ತಡೆ ನಡೆಸಿ ಘೋಷಣೆ ಕೂಗಿದರು ನಂತರ ಸಮೀಪದ ಕೇಂದ್ರ ಬಸ್ ನಿಲ್ದಾಣಕ್ಕೆ ತೆರಳಿ ಖಾಲಿ ತಟ್ಟೆಯನ್ನು ಪ್ರದರ್ಶಿಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಶಾಸಕ ಡಾ.ಎಸ್.ಶಿವರಾಜ ಪಾಟೀಲ್ ಅವರು ಕರ್ನಾಟಕ ರಾಜ್ಯ ಎಂದೂ ಕಂಡರಿಯದ ತೀವ್ರ ಬರಗಾಲವನ್ನು ಎದುರಿಸುತ್ತಿದೆ, ಇಂತಹ ಸಮಯದಲ್ಲಿ ಬರ ಪರಿಹಾರ, ಕುಡಿಯುವ ನೀರು, ಗ್ರಾಮೀಣ ಭಾಗದ ಜನರಿಗೆ ಕೆಲಸ ಸೇರಿ ಇತರೆ ಅಭಿವೃದ್ಧಿ ಕಾರ್ಯಗಳನ್ನು ಮಾಡಬೇಕಾದಂತಹ ಕಾಂಗ್ರೆಸ್ ಸರ್ಕಾರವು ಅದನ್ನು ಮರೆದು ಅಗತ್ಯ ವಸ್ತುಗಳ ಬೆಲೆಗಳನ್ನು ಭಾರಿ ಪ್ರಮಾಣದಲ್ಲಿ ಜಾಸ್ತಿ ಮಾಡುವುದರ ಮುಖಾಂತರ ಮೊದಲೇ ಕಷ್ಟದಲ್ಲಿರುವ ಬಡ ಮತ್ತು ಮಧ್ಯಮ ವರ್ಗದ ಜನರಿಗೆ ಆರ್ಥಿಕ ಹೊರೆ ಹೆಚ್ಚಿಸಿರುವುದು ಖಂಡನೀಯ ವಿಷಯವಾಗಿದೆ.

ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಪದೇಪದೇ ಬೆಲೆ ಏರಿಕೆ ಮಾಡುವ ಮೂಲಕ ಜನರ ಜೇಬಿಗೆ ಕತ್ತರಿ ಹಾಕುತ್ತಿದೆ. ಈಗಾಗಲೇ ದಿನನಿತ್ಯದ ಜೀವನ ನಿರ್ವಹಣೆಗೆ ಪರದಾಡುತ್ತಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಮತ್ತಷ್ಟು ಆರ್ಥಿಕ ಹೊರೆ ಹೊರಿಸಲಾಗುತ್ತಿದೆ. ಸರ್ಕಾರದ ಇಂತಹ ನಿರ್ಧಾರಗಳಿಂದ ಜನಸಾಮಾನ್ಯರ ಜೀವನ ದುಸ್ತರವಾಗುತ್ತಿದೆ ಎಂದು ಆರೋಪಿಸಿದರು.

ಬರದಿಂದ ಸಂಕಷ್ಟದಲ್ಲಿರುವ ಜನರ ಕೈ ಹಿಡುವ ಕೆಲಸವನ್ನು ಸರ್ಕಾರ ಮಾಡಬೇಕು, ಕೂಡಲೇ ಬೆಲೆ ಏರಿಕೆ ನಿಯಂತ್ರಿಸಬೇಕು, ಹಾಲು, ಬಸ್ ಪ್ರಯಾಣ ದರ ಸೇರಿದಂತೆ ಅಗತ್ಯ ವಸ್ತುಗಳ ಬೆಲೆಗಳನ್ನು ಇಳಿಸಲು ಕ್ರಮ ವಹಿಸಬೇಕು, ಸಾಮಾನ್ಯ ಜನರ ನೆಮ್ಮದಿಯಿಂದ ಜೀವನ ನಡೆಸಲು ಅನುವು ಮಾಡಿಕೊಡಬೇಕು ಇಲ್ಲವಾದಲ್ಲಿ ಪಕ್ಷದ ಜೊತೆಗೆ ಜನರೊಂದಿಗೆ ಸೇರಿ ಹೋರಾಟವನ್ನು ತೀವ್ರಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ರವೀಂದ್ರ ಜಲ್ದಾರ್, ಸಂತೋಷ ರಾಜಗುರು, ವೈ.ಗೋಪಾಲರೆಡ್ಡಿ,ಗಿರೀಶ್ ಕನಕವೀಡು, ವೆಂಕಟೇಶ ಮಡಿವಾಳ, ನಾಗರಾಜ ಪಲಗುಲ, ಎ.ಚಂದ್ರಶೇಖರ, ಸೇರಿ ವಿವಿಧ ಮೋರ್ಚಾಗಳ ಪ್ರಮುಖರು, ಕಾರ್ಯಕರ್ತರು, ಮಹಿಳಾ ಸದಸ್ಯರು ಸೇರಿ ಅನೇಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕವಿ ಹೃದಯದ ಡಾ.ಚೆನ್ನಬಸವ ಶ್ರೀಗಳು: ತೋಂಟದಾರ್ಯ ಶ್ರೀ
ಶಿರಗುಪ್ಪಿ ಕಾರ್ಖಾನೆಯಿಂದ ₹4,000 ದರ ಘೋಷಣೆ