ಕನ್ನಡಪ್ರಭ ವಾರ್ತೆ ಬಾಗಲಕೋಟೆ
ಪ್ರತಿಭಟನೆಯ ನಂತರ ಜಿಲ್ಲಾಡಳಿತ ಭವನದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಬಿಜೆಪಿಯ ಕಾರ್ಯಕರ್ತರನ್ನು ಜಿಲ್ಲಾಡಳಿತ ಭವನದ ಗೇಟ್ ಮುಂದೆ ಪೊಲೀಸರು ತಡೆದು ವಶಕ್ಕೆ ಪಡೆದರು.
ಪ್ರತಿಭಟನಾ ಸಭೆ ಉದ್ದೇಶಿಸಿ ಮಾತನಾಡಿದ ಜಿಲ್ಲಾ ಉಪಾಧ್ಯಕ್ಷ ಅಶೋಕ ಲಿಂಬಾವಳಿ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದವರನ್ನು ಕೂಡಲೇ ಸರ್ಕಾರ ಬಂಧಿಸಿ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಉಪಾಧ್ಯಕ್ಷ ರಾಜು ರೇವಣಕರ, ಸತ್ಯನಾರಾಯಣ ಹೇಮಾದ್ರಿ, ಉಮೇಶ ಹಂಚಿನಾಳ, ಬಸವರಾಜ ಹುನಗುಂದ, ಸಂಗಪ್ಪ ಗಾಣಿಗೇರ, ಶ್ರೀನಾಥ ಸಜ್ಜನ್, ರಾಜಶೇಖರ ಮುದೇನೂರ, ಪ್ರಭು ಹಡಗಲಿ, ವಿಜಯಲಕ್ಷ್ಮೀ ಇನ್ನಿತರರು ಇದ್ದರು.