ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork | Published : Mar 11, 2024 1:17 AM

ಸಾರಾಂಶ

ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯುಸೆಕ್ ನೀರನ್ನು ಬಿಟ್ಟಿರುವುದು ಏಕೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡರು, ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದರು.

ನಗರದ ಬಿಜೆಪಿ ಕಚೇರಿಯಿಂದ ಭಾನುವಾರ ಮೆರವಣಿಗೆ ಹೊರಟ ಕಾರ್ಯಕರ್ತರು ಬೆಂಗಳೂರು - ಮೈಸೂರು ಹೆದ್ದಾರಿಗೆ ಬರುತ್ತಿದ್ದಂತೆ ಜಿಲ್ಲಾಧ್ಯಕ್ಷ ಡಾ.ಇಂದ್ರೇಶ್, ಮುಖಂಡರಾದ ವಿವೇಕ್, ಸಿ.ಟಿ.ಜುನಾಥ್, ಶಿವಕುಮಾರ್ ಆರಾಧ್ಯ ಹಾಗೂ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ ಕರೆದೊಯ್ದರು.

ಸ್ಥಳೀಯ ರೈತರಿಗೆ ಮೋಸ ಮಾಡಿ ಕಾವೇರಿ ನದಿಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿ ತಮಿಳುನಾಡಿಗೆ ಹರಿಸುವ ಮೂಲಕ ರಾಜ್ಯ ಸರ್ಕಾರ ರೈತರಿಗೆ ದ್ರೋಹ ಮಾಡಿದೆ. ರೈತರ ಹಿತ ಕಾಪಾಡುವುದಾಗಿ ಭರವಸೆ ನೀಡಿದ ಸರ್ಕಾರ ಬೆಳೆದು ನಿಂತಿರುವ ಬೆಳೆಗೆ ನೀರು ನೀಡದೆ ಜನಜಾನುವಾರುಗಳಿಗೂ ಕುಡಿಯುವ ನೀರು ಇಲ್ಲದಂತೆ ಮಾಡಿದೆ ಎಂದು ಖಂಡಿಸಿದರು.

ಕೆಆರ್‌ಎಸ್ ಅಣೆಕಟ್ಟೆಯಿಂದ ನಾಲ್ಕು ಸಾವಿರ ಕ್ಯುಸೆಕ್ ನೀರನ್ನು ಬಿಟ್ಟಿರುವುದು ಏಕೆ. ರೈತರ ಹಿತ ಕಾಪಾಡುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಬೆಳೆ ರಕ್ಷಣೆಗೆ ನೀರು ನೀಡದೆ ತಮಿಳುನಾಡಿಗೆ ನೀರು ಬಿಡುವ ಮೂಲಕ ವಚನ ಭ್ರಷ್ಟರಾಗಿದ್ದಾರೆ. ಕಾವೇರಿ ನದಿ ನೀರಿನ ವಿಚಾರದಲ್ಲಿ ನಿರಂತರ ಅನ್ಯಾಯ ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ಸರ್ಕಾರ ರೈತರಿಗೆ ದ್ರೋಹ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬೆಂಗಳೂರಿಗೆ ಕುಡಿಯುವ ನೀರಿಗಾಗಿ ಬಿಡಲಾಗಿದೆ ಎಂದು ಸುಳ್ಳು ಹೇಳಿ ಶನಿವಾರದಿಂದಲೇ ಕಾವೇರಿ ನದಿಗೆ 4 ಸಾವಿರ ಕ್ಯುಸೆಕ್ ನೀರು ಬಿಡಲಾಗಿದೆ. ಅಷ್ಟೊಂದು ಪ್ರಮಾಣದಲ್ಲಿ ನೀರು ನದಿಗೆ ಹರಿಸುವ ಮೂಲಕ ವಾಮ ಮಾರ್ಗದಲ್ಲಿ ತಮಿಳುನಾಡಿಗೆ ಹರಿಸುತ್ತಿದೆ ಎಂದು ದೂರಿದರು.

ಜಿಲ್ಲೆಯ ರೈತರ ಹಿತ ಕಾಪಾಡದೆ ಬರಗಾಲದ ಸಂಕಷ್ಟದಲ್ಲಿ ರೈತರ ನೆರವಿಗೂ ಬಾರದೆ ಕಾಂಗ್ರೆಸ್ ಸರ್ಕಾರ ದ್ರೋಹ ಮಾಡುತ್ತಿದೆ. ಇದ್ದ ನೀರನ್ನೆಲ್ಲ ನೆರೆ ರಾಜ್ಯಕ್ಕೆ ರೈತರ ಬದುಕನ್ನು ಸರ್ವನಾಶ ಮಾಡಿ ನೀಡು ಬಿಟ್ಟು, ಇದೀಗ ಕುಡಿಯಲು ಸಹ ನೀರು ಇಲ್ಲದಂತೆ ಮಾಡುತ್ತಿದೆ ಎಂದು ಆರೋಪಿಸಿದರು.

Share this article