ಪೊಲೀಸ್ ಇಲಾಖೆ ದುರ್ಬಳಕೆ ವಿರುದ್ಧ ಬಿಜೆಪಿ ಹೋರಾಟ

KannadaprabhaNewsNetwork |  
Published : Oct 09, 2026, 03:00 AM IST
೭ತಾಂಬಾ2 | Kannada Prabha

ಸಾರಾಂಶ

ಎಸ್‌ಐಆರ್ ಪ್ರಕ್ರಿಯೆ ಹಾಗೂ ಫಾರಂ-೭ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಗೊಂದಲ ಸೃಷ್ಟಿಸಿದ್ದು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರ ವಿರುದ್ಧ ಅನ್ಯಾಯವಾಗಿ ಎಫ್‌ಐಆರ್ ದಾಖಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಕನ್ನಡಪ್ರಭ ವಾರ್ತೆ ಲೋಕಾಪುರ

ಎಸ್‌ಐಆರ್ ಪ್ರಕ್ರಿಯೆ ಹಾಗೂ ಫಾರಂ-೭ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಗೊಂದಲ ಸೃಷ್ಟಿಸಿದ್ದು ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಂಡು ಬಿಜೆಪಿ ಕಾರ್ಯಕರ್ತರ ವಿರುದ್ಧ ಅನ್ಯಾಯವಾಗಿ ಎಫ್‌ಐಆರ್ ದಾಖಲಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಾಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದರು.

ಮುಧೋಳದಲ್ಲಿ ನಡೆಯುವ ವಿಜಯ ಸಂಕಲ್ಪ ಯಾತ್ರೆಗೆ ಹೊರಡುವ ಮುನ್ನ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಬಸವೇಶ್ವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಮೊಕದ್ದಮೆ ದಾಖಲು ಮುಂದುವರಿಸಿದರೆ ಪಕ್ಷದ ವತಿಯಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕೇರಳದಲ್ಲಿ ಎಸ್‌ಐಆರ್ ಬಳಿಕ ಕಾಂಗ್ರೆಸ್‌ ಗೆಲವು ಸಾಧಿಸಿದೆ ಎಂದು ಕಾಂಗ್ರೆಸ್ ನಾಯಕರೇ ಹೇಳಿದ್ದಾರೆ. ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಯಾವುದೇ ಸಮಸ್ಯೆ ಇಲ್ಲ, ಮಹಾರಾಷ್ಟ್ರ, ಹರಿಯಾಣದಲ್ಲಿ ಅಧಿಕಾರ ಕಳೆದುಕೊಂಡ ಕಡೆ ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಟೀಕಿಸಿದರು.

ಈ ವೇಳೆ ಮಾಜಿ ಉಪಮುಖ್ಯಮಂತ್ರಿ ಹಾಗೂ ಸಂಸದರಾದ ಗೋವಿಂದ ಕಾರಜೋಳ, ಪಿ.ಸಿ.ಗದ್ದಿಗೌಡರ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಮಾಜಿ ಶಾಸಕ ದೊಡ್ಡನಗೌಡ ಪಾಟೀಲ, ಸ್ಥಳೀಯ ಮುಖಂಡರಾದ ಯಮನಪ್ಪ ಹೊರಟ್ಟಿ, ಬಾಳಾಸಾಹೇಬ ದೇಸಾಯಿ, ವಿನೋದ ಘೋರ್ಪಡೆ, ಸಿದ್ರಾಮಪ್ಪ ದೇಸಾಯಿ, ಸುರೇಶ ಹುಗ್ಗಿ, ರಾಮಣ್ಣಾ ಕಿಲಾರಿ, ಅರುಣ ನರಗುಂದ, ಈಶ್ವರ ಹವಳಖೋಡ, ರಾಜು ಹುಬ್ಬಳ್ಳಿ, ಅನೀಲ ಹಂಚಾಟೆ, ಸ್ಥಳೀಯ ಬಿಜೆಪಿ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವನ್ಯಜೀವಿ ಸಪ್ತಾಹ: ಪ್ರಬಂಧ, ಚಿತ್ರಕಲೆ ಸ್ಪರ್ಧೆ
ಸಮುದಾಯ ಆರೋಗ್ಯ ಕೇಂದ್ರಕ್ಕೆ ಬೇಕಿದೆ ಚಿಕಿತ್ಸೆ