ಅಗತ್ಯ ವಸ್ತುಗಳ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Nov 04, 2026, 12:30 AM IST
೩ಕೆಎಂಎನ್‌ಡಿ-೬ಅಗತ್ಯ ವಸ್ತುಗಳ ದರ ಏರಿಕೆ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮಂಡ್ಯದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿತು. | Kannada Prabha

ಸಾರಾಂಶ

ಹಾಲು ಮತ್ತು ಮೊಸರು ಐಷಾರಾಮಿ ವಸ್ತುಗಳಲ್ಲ. ಮಕ್ಕಳು, ವೃದ್ಧರು ಸೇರಿದಂತೆ ಪ್ರತಿ ಮನೆಯ ನಿತ್ಯದ ಅಗತ್ಯ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಈ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ.

ಕನ್ನಡಪ್ರಭ ವಾರ್ತೆ ಮಂಡ್ಯ

ಅಗತ್ಯ ವಸ್ತುಗಳ ದರ ಏರಿಕೆ ಮಾಡುವ ಮೂಲಕ ರಾಜ್ಯ ಸರ್ಕಾರ ಜನವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ನಗರದಲ್ಲಿ ಮಂಗಳವಾರ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಡಾ.ಎನ್.ಎಸ್.ಇಂದ್ರೇಶ್ ನೇತೃತ್ವದಲ್ಲಿ ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಕಾಂಗ್ರೆಸ್ ಸರ್ಕಾರ ಎಲ್ಲ ವಸ್ತುಗಳ ದರ ಹೆಚ್ಚಿಸಿ ಕನ್ನಡಿಗರ ರಕ್ತ ಹೀರುತ್ತಿರುವ ಸುಲಿಗೆಕೋರ ಸರ್ಕಾರ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಹಾಲು ಮತ್ತು ಮೊಸರಿನ ಬೆಲೆ ಏರಿಕೆಯ ಮೂಲಕ ಜನಸಾಮಾನ್ಯರಿಗೆ ಕಾಂಗ್ರೆಸ್ ಸರ್ಕಾರ ಮತ್ತೊಂದು ದೊಡ್ಡ ಆಘಾತ ನೀಡಿದೆ. ಈ ಅವಧಿಯಲ್ಲಿ ನಾಲ್ಕನೇ ಬಾರಿಗೆ ಹಾಲಿನ ದರ ಏರಿಸಿದೆ. ಹಾಲಿನ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ೧೨ ರು. ಮೊಸರಿನ ಬೆಲೆಯಲ್ಲಿ ಪ್ರತಿ ಲೀಟರ್‌ಗೆ ೧೪ ರು. ಹೆಚ್ಚಳ ಮಾಡುವ ಮೂಲಕ ಪ್ರತಿ ಕುಟುಂಬದ ಮಾಸಿಕ ಖರ್ಚನ್ನು ಹೆಚ್ಚಿಸಿದೆ. ಹಾಲು ಮತ್ತು ಮೊಸರು ಐಷಾರಾಮಿ ವಸ್ತುಗಳಲ್ಲ. ಮಕ್ಕಳು, ವೃದ್ಧರು ಸೇರಿದಂತೆ ಪ್ರತಿ ಮನೆಯ ನಿತ್ಯದ ಅಗತ್ಯ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮೇಲೆ ಈ ನಿರ್ಧಾರ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಕಿಡಿಕಾರಿದರು.

ಮೆಟ್ರೋ ಪ್ರಯಾಣ ದರವನ್ನು ಕಳೆದ ಎರಡು ವರ್ಷದಲ್ಲಿ ಶೇ.೫೮ರಷ್ಟು ಏರಿಕೆ ಮಾಡಲಾಗಿದೆ. ಮದ್ಯದ ದರವನ್ನು ಶೇ.೨೦ರಿಂದ ೩೦ರವರೆಗೆ ಹೆಚ್ಚಿಸಲಾಗಿದೆ. ಬಸ್ ಪ್ರಯಾಣ ದರದಲ್ಲಿಯೂ ಸಾಕಷ್ಟು ಅಂದರೆ ಶೇ.೧೫ರಷ್ಟು ಏರಿಕೆ ಕಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಶೇ.೩ರಷ್ಟು ಹೆಚ್ಚು ಮಾಡಲಾಗಿದೆ. ಆಸ್ತಿಗಳ ಮಾರ್ಗಸೂಚಿ ಮೌಲ್ಯವೂ ಶೇ.೨೫ರಿಂದ ೩೦ರವರೆಗೆ ಹೆಚ್ಚಳ ಮಾಡಿದ್ದು, ಇದರಿಂದಾಗಿ ಆಸ್ತಿ ಖರೀದಿ, ನೋಂದಣಿ ಹಾಗೂ ಸಂಬಂಧಿಸಿತ ವೆಚ್ಚಗಳ ದುಬಾರಿಯಾಗಿದೆ. ಇದಲ್ಲದೆ, ವಾಹನಗಳ ನೋಂದಣಿಗೆ ಸಂಬಂಧಿಸಿದಂತೆ ಶುಲ್ಕವನ್ನು ಹೆಚ್ಚಿಸಲಾಗಿದೆ. ರಾಜ್ಯಸರ್ಕಾರ ದುರಾಡಳಿತಕ್ಕೆ ಜನರು ಬೇಸತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ರೈತ ಮೋರ್ಚಾ ರಾಜ್ಯ ಕಾರ್ಯದರ್ಶಿ ಅಶೋಕ್‌ಕುಮಾರ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಅಶೋಕ್, ಜಿಲ್ಲಾ ವಕ್ತಾರ ಸಿ.ಟಿ.ಮಂಜುನಾಥ್, ಸಿದ್ದರಾಜುಗೌಡ, ಹೊಸಹಳ್ಳಿ ಶಿವು, ಶಿವಕುಮಾರ್ ಆರಾಧ್ಯ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌