ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುವುದಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಸಮರ್ಪಕವಾಗಿ ಹಾಗೂ ನಿಗದಿತ ಸಮಯಕ್ಕೆ ಫಲಾನುಭವಿಗಳಿಗೆ ತಲುಪಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣ ನಿಯಮಿತವಾಗಿ ಖಾತೆಗೆ ಜಮೆಯಾಗುತ್ತಿಲ್ಲ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗೌರವಧನಕ್ಕಾಗಿ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಿಂಚಣಿ ಹಾಗೂ ಅಂಗವಿಕಲರ ಮಾಸಾಶನ ಕೂಡ ಸಕಾಲದಲ್ಲಿ ಪಾವತಿಯಾಗುತ್ತಿಲ್ಲ ಎಂದು ಟೀಕಿಸಿದರು. ಹಾಲಿನ ದರವನ್ನು ಏಕಾಏಕಿ ಹೆಚ್ಚಿಸಲಾಗಿದ್ದು, ಮೊಸರಿನ ದರ ಇಳಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರೂ ಈವರೆಗೆ ಸಮರ್ಪಕವಾಗಿ ಜಾರಿಯಾಗಿಲ್ಲ ಎಂದರು.
ಕನ್ನಡಪ್ರಭ ವಾರ್ತೆ ಆಲೂರು
ರಾಜ್ಯ ಕಾಂಗ್ರೆಸ್ ಸರ್ಕಾರ ದಿನನಿತ್ಯ ಅಗತ್ಯ ವಸ್ತುಗಳು ಹಾಗೂ ವಿವಿಧ ಸೇವೆಗಳ ದರ ಏರಿಕೆ ಮಾಡುವ ಮೂಲಕ ಬಡವರು ಮತ್ತು ಮಧ್ಯಮ ವರ್ಗದ ಜನರ ಬದುಕಿಗೆ ಹೊರೆಯಾಗುತ್ತಿದೆ ಎಂದು ಶಾಸಕ ಸಿಮೆಂಟ್ ಮಂಜು ಆರೋಪಿಸಿದರು.ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ತಾಲೂಕು ಬಿಜೆಪಿ ವತಿಯಿಂದ ಬುಧವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿ, ಜನನ ಮತ್ತು ಮರಣ ಪ್ರಮಾಣಪತ್ರದಿಂದ ಹಿಡಿದು ಕುಡಿಯುವ ನೀರಿನ ತೆರಿಗೆ, ಪೆಟ್ರೋಲ್, ಹಾಲು, ಮೊಸರು ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ. ಬಸ್ ಪ್ರಯಾಣ ದರವನ್ನೂ ಶೇ. ೪೦ರಷ್ಟು ಹೆಚ್ಚಿಸುವ ಮೂಲಕ ಜನಸಾಮಾನ್ಯರ ಮೇಲೆ ಆರ್ಥಿಕ ಹೊರೆ ಹಾಕಲಾಗಿದೆ. ಇದರಿಂದ ಸಾಮಾನ್ಯ ಕುಟುಂಬಗಳು ಜೀವನ ನಿರ್ವಹಣೆ ಮಾಡಲು ಪರದಾಡುವಂತಾಗಿದೆ ಎಂದು ದೂರಿದರು.ಗ್ಯಾರಂಟಿ ಯೋಜನೆಗಳಿಗೆ ಬಿಜೆಪಿ ವಿರೋಧ ವ್ಯಕ್ತಪಡಿಸುವುದಿಲ್ಲ. ಆದರೆ ಚುನಾವಣೆ ಸಂದರ್ಭದಲ್ಲಿ ನೀಡಿದ ಭರವಸೆಗಳನ್ನು ಸಮರ್ಪಕವಾಗಿ ಹಾಗೂ ನಿಗದಿತ ಸಮಯಕ್ಕೆ ಫಲಾನುಭವಿಗಳಿಗೆ ತಲುಪಿಸಬೇಕು. ಗೃಹಲಕ್ಷ್ಮಿ ಯೋಜನೆಯ ಹಣ ನಿಯಮಿತವಾಗಿ ಖಾತೆಗೆ ಜಮೆಯಾಗುತ್ತಿಲ್ಲ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಗೌರವಧನಕ್ಕಾಗಿ ಪ್ರತಿಭಟನೆ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಪಿಂಚಣಿ ಹಾಗೂ ಅಂಗವಿಕಲರ ಮಾಸಾಶನ ಕೂಡ ಸಕಾಲದಲ್ಲಿ ಪಾವತಿಯಾಗುತ್ತಿಲ್ಲ ಎಂದು ಟೀಕಿಸಿದರು. ಹಾಲಿನ ದರವನ್ನು ಏಕಾಏಕಿ ಹೆಚ್ಚಿಸಲಾಗಿದ್ದು, ಮೊಸರಿನ ದರ ಇಳಿಸುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದರೂ ಈವರೆಗೆ ಸಮರ್ಪಕವಾಗಿ ಜಾರಿಯಾಗಿಲ್ಲ. ರೈತರು ಬರಗಾಲದಿಂದ ಸಂಕಷ್ಟದಲ್ಲಿದ್ದರೂ ಪರಿಹಾರ ನೀಡುವಲ್ಲಿ ಸರ್ಕಾರ ನಿರ್ಲಕ್ಷ್ಯ ವಹಿಸಿದೆ. ಅಗತ್ಯ ವಸ್ತುಗಳ ಬೆಲೆ ಇಳಿಕೆ ಮಾಡಿ ಜನಸಾಮಾನ್ಯರ ಬದುಕಿಗೆ ಅನುಕೂಲ ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ರಾಜ್ಯದಾದ್ಯಂತ ಪ್ರತಿ ಜಿಲ್ಲೆ ಹಾಗೂ ಮಂಡಲ ಮಟ್ಟದಲ್ಲಿ ಬೆಲೆ ಏರಿಕೆ ಮತ್ತು ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಾಲಿನ ದರ ಏರಿಕೆ, ಪಿಂಚಣಿ ಪಾವತಿಯಲ್ಲಿ ವಿಳಂಬ ಹಾಗೂ ಗೃಹಲಕ್ಷ್ಮಿ ಯೋಜನೆಯ ಹಣ ಸಮರ್ಪಕವಾಗಿ ತಲುಪದಿರುವುದು ಸೇರಿದಂತೆ ಹಲವು ಸಮಸ್ಯೆಗಳಿಂದ ಜನರು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದರು. ಆಶಾ ಕಾರ್ಯಕರ್ತೆಯರು ₹೧೫ ಸಾವಿರ ಗೌರವಧನ ಹಾಗೂ ಮರಣೋತ್ತರ ಸಂದರ್ಭದಲ್ಲಿ ಕುಟುಂಬಕ್ಕೆ ನೆರವಾಗುವಂತೆ ₹ ೫ ಲಕ್ಷ ಠೇವಣಿ ಸೌಲಭ್ಯ ಒದಗಿಸುವಂತೆ ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಎಸ್ಸಿಪಿ-ಟಿಎಸ್ಪಿ ಅನುದಾನದ ಬಳಕೆ, ರೈತರ ಸಮಸ್ಯೆಗಳು ಹಾಗೂ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿಯೂ ಸರ್ಕಾರದ ಕಾರ್ಯವೈಖರಿ ಪ್ರಶ್ನಾರ್ಹವಾಗಿದೆ ಎಂದು ಆರೋಪಿಸಿದರು. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಹಾಗೂ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಅವರ ನೇತೃತ್ವದಲ್ಲಿ ಮುಂಬರುವ ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರದ ವೈಫಲ್ಯಗಳನ್ನು ಪ್ರಸ್ತಾಪಿಸಿ ಹೋರಾಟ ನಡೆಸಲಾಗುವುದು ಎಂದು ತಿಳಿಸಿದರು.ಪಟ್ಟಣದ ವೀರಶೈವ ಕಲ್ಯಾಣ ಮಂಟಪದಿಂದ ತಾಲೂಕು ಕಚೇರಿವರೆಗೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪಾದಯಾತ್ರೆ ನಡೆಸಿ, ತಹಶೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ರಮೇಶ್,ತಾಲೂಕು ಬಿಜೆಪಿ ಮಂಡಲ ಅಧ್ಯಕ್ಷೆ ಉಮಾ ರವಿ ಪ್ರಕಾಶ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೇತ್ರಾವತಿ ಮಂಜುನಾಥ್, ಜಿಲ್ಲಾ ಪ್ರ. ಕಾರ್ಯದರ್ಶಿ ರಾಜಕುಮಾರ್,ತಾಲ್ಲೂಕು ಪ್ರ. ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ, ಧ್ರುವ ಬಿಜೆಪಿ ಮುಖಂಡರಾದ ಕಟ್ಟೆಗದ್ದೆ ನಾಗರಾಜ್,ಸ್ನೇಹ ಜೀವಿ ಗಣೇಶ್, ನಿತಿನ್, ನಾಗೇಶ್ ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.