ಕನ್ನಡಪ್ರಭ ವಾರ್ತೆ ಬಾಗಲಕೋಟೆ
ನಗರದ ಬಸವೇಶ್ವರ ವೃತ್ತದಲ್ಲಿ ಪ್ರತಿಭಟಿಸಿದ ಬಿಜೆಪಿ ಕಾರ್ಯಕರ್ತರು, ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಸಚಿವ ಆರ್.ಬಿ. ತಿಮ್ಮಾಪುರ ಅವರ ಪ್ರತಿಕೃತಿ ದಹಿಸಿ ರಾಜೀನಾಮೆಗೆ ಆಗ್ರಹಿಸಿದರು.
ಭ್ರಷ್ಟಾಚಾರದಲ್ಲಿ ನಿಸ್ಸೀಮರಾದ ತಿಮ್ಮಾಪುರ ಅವರು ಹಗರಣ ಮುಚ್ಚಿ ಹಾಕಲು ಹೊರಟಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇದರಲ್ಲಿ ಪಾಲುದಾರರಾಗಿದ್ದಾರೆಂದು ಮುಖಂಡರು ಆರೋಪಿಸಿದರು.ರಾಜ್ಯಾದ್ಯಂತ ಪ್ರತಿ ಗ್ರಾಮಗಳಲ್ಲಿ ಮದ್ಯ ಮಾರಾಟ ಜೋರಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಿಸಿರುವ 5 ಗ್ಯಾರಂಟಿಗಳಲ್ಲಿ 6ನೇ ಗ್ಯಾರಂಟಿ ಮದ್ಯ ಮಾರಾಟ ಎಂಬಂತಾಗಿದೆ. ರಾಜ್ಯದ ಇತಿಹಾಸದಲ್ಲಿ ಅಬಕಾರಿ ಹಗರಣ ದೊಡ್ಡದಾಗಿದೆ ಎಂದು ಹೇಳಿದರು.
ಸಂಸದ ಪಿ.ಸಿ.ಗದ್ದಿಗೌಡರ, ಬಿಜೆಪಿ ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ, ಶಾಸಕರಾದ ಜಗದೀಶ ಗುಡಗುಂಟಿ, ಸಿದ್ದು ಸವದಿ, ವಿಧಾನ ಪರಿಷತ್ ಶಾಸಕ ಹಣಮಂತ ನಿರಾಣಿ, ಚುನಾವಣೆ ಉಸ್ತುವಾರಿ ಅರುಣ ಶಹಾಪುರ, ಮಾಜಿ ಶಾಸಕರಾದ ದೊಡ್ಡನಗೌಡ ಪಾಟೀಲ, ವೀರಣ್ಣ ಚರಂತಿಮಠ, ರಾಜಶೇಖರ ಶೀಲವಂತ, ಎಂ.ಕೆ.ಪಟ್ಟಣಶೆಟ್ಟಿ, ಅರುಣ ಕಾರಜೋಳ, ಬಸವರಾಜ ಹುನಗುಂದ, ರಾಜು ನಾಯ್ಕರ, ಸವಿತಾ ಲೆಂಕಣ್ಣವರ್, ಶಶಿಕಲಾ ಮಜ್ಜಗಿ, ಶೋಭಾ ರಾವ್, ಶ್ರೀನಾಥ ಸಜ್ಜನ, ಸುರೇಶ ಕೊಣ್ಣೂರ, ಮುತ್ತಣ್ಣ ಬೆಣ್ಣೂರ, ಶಿವಾನಂದ ಟವಳಿ, ಶಿವಾನಂದ ಸುರಪುರ, ವೀರಣ್ಣ ಹಳೇಗೌಡರ, ಹೂವಪ್ಪ ರಾಠೋಡ, ಗಿರೀಶ ಭಾಂಡಗೆ ಸೇರಿದಂತೆ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.