ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ
ಕನ್ನಡಪ್ರಭ ವಾರ್ತೆ, ಚಿಕ್ಕಮಗಳೂರುಅಧಿವೇಶನದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಆಕ್ಷೇಪದ ಪದ ಬಳಕೆ ಮಾಡಿರುವ ಆರೋಪದ ಮೇಲೆ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರನ್ನು ಬಂಧಿಸಿರುವುದನ್ನು ಖಂಡಿಸಿ ಶುಕ್ರವಾರ ಜಿಲ್ಲೆಯಾದ್ಯಂತ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಹಾಕುವ ಜತೆಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕೆಲವೆಡೆ ಮಾನವ ಸರಪಳಿ ನಿರ್ಮಾಣ ಮಾಡಿ ರಸ್ತೆ ತಡೆ ನಡೆಸಿದರು.ಜಿಲ್ಲಾ ಕೇಂದ್ರದಲ್ಲಿ ಬೆಳಿಗ್ಗೆಯಿಂದ ಮಧ್ಯಾಹ್ನದವರೆಗೆ ವಿವಿಧ ಹಂತಗಳಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ, ಚಿಕ್ಕಮಗಳೂರು ನಗರ ಬಂದ್, ರಸ್ತೆ ತಡೆ, ಮಾನವ ಸರಪಳಿ ನಿರ್ಮಾಣ, ಟೈಯರ್‌ಗಳಿಗೆ ಬೆಂಕಿ ಹಚ್ಚಿದರು.
ತರೀಕೆರೆ ಪಟ್ಟಣದ ಮಹಾತ್ಮಗಾಂಧಿ ವೃತ್ತದಲ್ಲಿ ಮಾಜಿ ಶಾಸಕ ಡಿ.ಎಸ್. ಸುರೇಶ್ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಇದೇ ವೇಳೆ ಮಾನವ ಸರಪಳಿ ನಿರ್ಮಿಸಿ, ಟೈಯರ್‌ಗಳಿಗೆ ಬೆಂಕಿ ಹಚ್ಚಿದರು. ಮೂಡಿಗೆರೆ ಲಯನ್ಸ್ ವೃತ್ತದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಗಜೇಂದ್ರ ಅವರ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.ಕೊಪ್ಪದ ಬಸ್ ನಿಲ್ದಾಣದಲ್ಲಿ ಬಿಜೆಪಿ ಕಾರ್ಯಕರ್ತರು ಕೆಲ ಸಮಯ ಪ್ರತಿಭಟನೆ ನಡೆಸಿದರು. ಶೃಂಗೇರಿ ಕೆವಿಆರ್ ವೃತ್ತದಲ್ಲಿ ತಾಲೂಕು ಬಿಜೆಪಿ ಅಧ್ಯಕ್ಷ ತಲಗಾರು ಉಮೇಶ್ ಮುಂದಾಳತ್ವದಲ್ಲಿ ರಸ್ತೆ ತಡೆ ನಡೆಸಲಾಯಿತು.
ಎನ್.ಆರ್.ಪುರ ಪಟ್ಟಣದ ಅಂಬೇಡ್ಕರ್ ವೃತ್ತದಲ್ಲಿ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ನೇತೃತ್ವದಲ್ಲಿ ಸಿ.ಟಿ. ರವಿ ಪರವಾಗಿ ಪ್ರತಿಭಟನೆ ನಡೆಯಿತು. ಕಳಸದಲ್ಲೂ ಸಿ.ಟಿ. ರವಿ ಬಂಧನ ಖಂಡಿಸಿ ಪ್ರತಿಭಟನೆ ನಡೆಯಿತು.ಕಡೂರು ಹಾಗೂ ಅಜ್ಜಂಪುರ ಹೊರತುಪಡಿಸಿ ಇನ್ನುಳಿದ ಎಲ್ಲಾ ತಾಲೂಕು ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಿತು.20 ಕೆಸಿಕೆಎಂ 3ಚಿಕ್ಕಮಗಳೂರು ನಗರದ ಎಂ.ಜಿ. ರಸ್ತೆಯಲ್ಲಿ ಟೈಯರ್‌ಗೆ ಬೆಂಕಿ ಹಚ್ಚಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.