ರಾಹುಲ್‌ಗಾಂಧಿ ಹೇಳಿಕೆ ಖಂಡಿಸಿ ಸಕಲೇಶಪುರದಲ್ಲಿ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Sep 12, 2024, 01:52 AM IST
11ಎಚ್ಎಸ್ಎನ್5 : ಸಕಲೇಶಪುರ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ದಲಿತರ ಮೀಸಲಾತಿ ಕುರಿತು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿರುವ ಹೇಳಿಕೆ ವಿರುದ್ದ  ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ಪ್ರತಿ‘ಟನೆ ಮಾಡಲಾಯಿತು. | Kannada Prabha

ಸಾರಾಂಶ

ಕಳೆದ ಲೋಕಭಾ ಚುನಾವಣೆ ಸಂರ್ಧಭದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದುಪಡಿಸುತ್ತಾರೆ ಎಂದು ಅಪಪ್ರಚಾರ ಮಾಡಿದ ರಾಹುಲ್ ಗಾಂಧಿರವರು, ಇದೀಗ ದಲಿತರ ಮೀಸಲಾತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ವಿದೇಶದಲ್ಲಿ ಮಾತನಾಡಿರುವುದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಇದಲ್ಲದೆ ವಿದೇಶಗಳಿಗೆ ಅವರು ಹೋದಾಗ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದು ಸಾಮಾನ್ಯವಾಗಿದೆ. ಇದನ್ನು ಭಾರತೀಯ ಜನತಾ ಪಕ್ಷ ಉಗ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಕೂಡಲೆ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಸಕಲೇಶಪುರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಸಕಲೇಶಪುರ

ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿದೇಶದಲ್ಲಿ ದೇಶ ವಿರೋಧಿ ಹೇಳಿಕೆ ನೀಡಿರುವುದು ಖಂಡನೀಯ ಎಂದು ಶಾಸಕ ಸಿಮೆಂಟ್ ಮಂಜು ಹೇಳಿದರು.

ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಬಿಜೆಪಿ ಎಸ್.ಸಿ ಮೋರ್ಚಾದ ವತಿಯಿಂದ ರಾಹುಲ್ ಗಾಂಧಿ ವಿರುದ್ಧ ಬುಧವಾರ ಆಯೋಜಿಸಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು. ಕಳೆದ ಲೋಕಭಾ ಚುನಾವಣೆ ಸಂರ್ಧಭದಲ್ಲಿ ಬಿಜೆಪಿ ಪಕ್ಷ ಅಧಿಕಾರಕ್ಕೆ ಬಂದರೆ ಮೀಸಲಾತಿಯನ್ನು ರದ್ದುಪಡಿಸುತ್ತಾರೆ ಎಂದು ಅಪಪ್ರಚಾರ ಮಾಡಿದ ರಾಹುಲ್ ಗಾಂಧಿರವರು, ಇದೀಗ ದಲಿತರ ಮೀಸಲಾತಿಯನ್ನು ರದ್ದುಪಡಿಸಬೇಕೆಂದು ಆಗ್ರಹಿಸಿ ವಿದೇಶದಲ್ಲಿ ಮಾತನಾಡಿರುವುದು ಸಂವಿಧಾನ ವಿರೋಧಿ ಹೇಳಿಕೆಯಾಗಿದೆ. ಇದಲ್ಲದೆ ವಿದೇಶಗಳಿಗೆ ಅವರು ಹೋದಾಗ ಭಾರತ ವಿರೋಧಿ ಹೇಳಿಕೆಗಳನ್ನು ನೀಡುವುದು ಸಾಮಾನ್ಯವಾಗಿದೆ. ಇದನ್ನು ಭಾರತೀಯ ಜನತಾ ಪಕ್ಷ ಉಗ್ರವಾಗಿ ಖಂಡಿಸುತ್ತದೆ. ಈ ಹಿನ್ನೆಲೆಯಲ್ಲಿ ಲೋಕಸಭಾ ಸ್ಪೀಕರ್ ಕೂಡಲೆ ರಾಹುಲ್ ಗಾಂಧಿಯವರ ಸಂಸದ ಸ್ಥಾನವನ್ನು ರದ್ದುಪಡಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಬಿಜೆಪಿ ಜಿಲ್ಲಾ ದಲಿತ ಮುಖಂಡ ಸ್ಟೀವನ್ ಪ್ರಕಾಶ್ ಮಾತನಾಡಿ, ರಾಹುಲ್ ಗಾಂಧಿರವರ ಮೀಸಲಾತಿ ವಿರೋಧಿ ಹೇಳಿಕೆ ಕೇವಲ ಸಂವಿಧಾನ ವಿರೋಧಿ ಹೇಳಿಕೆ ಮಾತ್ರವಲ್ಲ ದಲಿತ ಸಮುದಾಯದ ವಿರೋಧಿ ಹೇಳಿಕೆಯಾಗಿದೆ. ಇಲ್ಲಿ ಜಾತ್ಯತೀತತೆ ಬಗ್ಗೆ ಮಾತನಾಡುವ ರಾಹುಲ್ ಗಾಂಧಿ ವಿದೇಶದಲ್ಲಿ ಜಾತಿಯತೆ ಮಾಡುವುದು ಎಷ್ಟು ಸರಿ, ಒಟ್ಟಾರೆಯಾಗಿ ನಕಲಿ ಜಾತ್ಯತೀತತೆ ಹೆಸರಿನಲ್ಲಿ ರಾಜಕಾರಣ ಮಾಡುತ್ತಿರುವ ರಾಹುಲ್ ಗಾಂಧಿರವರನ್ನು ಕೂಡಲೆ ಸಂಸದ ಸ್ಥಾನದಿಂದ ವಜಾಗೊಳಿಸಲು ಮಾನ್ಯ ರಾಷ್ಟ್ರಪತಿಗಳು ಕ್ರಮ ಕೈಗೊಳ್ಳಬೇಕು ಎಂದರು. ಪ್ರತಿಭಟನೆ ಅಂಗವಾಗಿ ಪಟ್ಟಣದ ಹಳೇ ಬಸ್ ನಿಲ್ದಾಣದಲ್ಲಿ ಕೆಲ ನಿಮಿಷಗಳ ಕಾಲ ಮಾನವ ಸರಪಳಿ ಮಾಡಿ ರಾಹುಲ್ ಗಾಂಧಿ ವಿರುದ್ಧ ಘೋಷಣೆಯಾಗಿ ರಾಹುಲ್ ಗಾಂಧಿ ಭಾವಚಿತ್ರವನ್ನು ದಹಿಸಿ ಆಕ್ರೋಶ ವ್ಯಕ್ತಪಡಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ವಳಲಹಳ್ಳಿ ಅಶ್ವತ್ಥ್‌, ಬಿಜೆಪಿ ತಾಲೂಕು ಪ್ರಧಾನ ಕಾರ್ಯದರ್ಶಿಗಳಾದ ಅಗ್ನಿ ಸೋಮಶೇಖರ್, ಬೊಮ್ಮನಕೆರೆ ಮಧು, ಪುರಸಭಾ ಸದಸ್ಯರಾದ ಪ್ರದೀಪ್, ವನಜಾಕ್ಷಿ, ರೇಖಾ ರುದ್ರಕುಮಾರ್, ಬಿಜೆಪಿ ಮುಖಂಡರುಗಳಾದ ರಾಜ್‌ಕುಮಾರ್‌, ದೀಪಕ್, ನವೀನ್ ಶೆಟ್ಟಿ, ಸುಧೀಶ್,ಬಾಳ್ಳು ಶಿವಕುಮಾರ್, ಶೇಖರ್ ಕಬ್ಬಿನಗದ್ದೆ, ಮುಂತಾದವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ್ಯಸಿಡ್‌ ದಾಳಿ ಸಂತ್ರಸ್ತರಿಗೆ ಮಾಸಿಕ 50 ಸಾವಿರ ಪಿಂಚಣಿ : ಪರಂ ಭರವಸೆ
5 ಪಾಲಿಕೆಗೆ ಜಿಎಸ್‌ಟಿಯಲ್ಲಿ ಪಾಲು ಕೊಡಲು ಆಯೋಗ ಶಿಫಾರಸು