ಹಿಂದೂ ಕಾರ್ಯಕರ್ತನ ಹತ್ಯೆ: ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : May 03, 2025, 12:15 AM IST
ಪ್ರತಿಭಟನೆ | Kannada Prabha

ಸಾರಾಂಶ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗಟ್ಟ ಪರಿಣಾಮ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ

ಹುಬ್ಬಳ್ಳಿ: ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ ಶೆಟ್ಟಿ ಹತ್ಯೆ ಖಂಡಿಸಿ ಹು-ಧಾ ಪೂರ್ವ ಮತ್ತು ಸೆಂಟ್ರಲ್ ಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು.

ಇಲ್ಲಿಯ ದುರ್ಗದ ಬೈಲ್ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಿದ ಬಿಜೆಪಿ ಕಾರ್ಯಕರ್ತರು,ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ನಂತರ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ, ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಗುರಿಪಡಿಸಬೇಕೆಂದು ಒತ್ತಾಯಿಸಿದರು. ಬಳಿಕ ಮೃತ ಸುಹಾಸ ಶೆಟ್ಟಿ ಆತ್ಮಕ್ಕೆ ಶಾಂತಿ ಕೋರಿ ಮೌನಾಚರಣೆ ನಡೆಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಶ ಟೆಂಗಿನಕಾಯಿ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದೆಗಟ್ಟ ಪರಿಣಾಮ ನಿರಂತರವಾಗಿ ಹಿಂದೂ ಕಾರ್ಯಕರ್ತರ ಹತ್ಯೆ ನಡೆಯುತ್ತಿವೆ.ಇವನ್ನು ತಡೆಯುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಹೀಗಾಗಿ ಮತಾಂಧ ಜಿಹಾದಿಗಳ ಅಟ್ಟಹಾಸ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಹು-ಧಾ ಮಹಾನಗರ ಜಿಲ್ಲಾಧ್ಯಕ್ಷ ತಿಪ್ಪಣ್ಣ ಮಜ್ಜಗಿ, ಪೂರ್ವ ಕ್ಷೇತ್ರದ ಅಧ್ಯಕ್ಷ ಮಂಜುನಾಥ ಕಾಟಕರ, ಸೆಂಟ್ರಲ್ ಕ್ಷೇತ್ರ ಅಧ್ಯಕ್ಷ ರಾಜು ಕಾಳೆ, ದತ್ತಮೂರ್ತಿ ಕುಲಕರ್ಣಿ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ, ಅನೂಪ ಬಿಜವಾಡ, ರವಿ ನಾಯಕ, ಲಕ್ಷ್ಮೀಕಾಂತ ಘೋಡಕೆ, ರಂಗಾ ಕಠಾರೆ, ಶಶಿಕಾಂತ ಬಿಜವಾಡ, ಬೀರಪ್ಪ ಖಂಡೆಕರ, ಉಮಾ ಮುಕುಂದ, ಪ್ರವೀಣ ಕುಬಸದ, ಅಶೋಕ ವಾಲ್ಮೀಕಿ, ಜಗದೀಶ ಬುಳ್ಳಾನವರ, ಪ್ರವೀಣ ಪವಾರ, ನಾಗರತ್ನಾ ಬಳ್ಳಾರಿ, ಶಶಿ ಡಂಗನವರ, ರಾಜು ಜರತಾರಘರ, ಪ್ರಕಾಶ ಬರಬುರೆ, ಮೇನಕಾ ಹುರಳಿ, ಶಿವಾನಂದ ಅಂಬಿಗೇರ, ಅಣ್ಣಪ್ಪ ಗೋಕಾಕ ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''