ಕನ್ನಡಪ್ರಭ ವಾರ್ತೆ ಮಡಿಕೇರಿ
ನಗರದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವಂತೆ ಒತ್ತಾಯಿಸಿ ಜನಪರವಾಗಿ ಇತ್ತೀಚೆಗೆ ರಾಜ್ಯವ್ಯಾಪಿ ತೀವ್ರ ಹೋರಾಟ ನಡೆಸಲಾಗಿದೆ. ಆದರೆ ಸರ್ಕಾರ ಇದಕ್ಕೆ ಸ್ಪಂದನೆ ನೀಡದೆ ನಿರ್ಲಕ್ಷ್ಯ ತೋರಿದೆ. ಎರಡನೇ ಹಂತದ ಪ್ರತಿಭಟನೆಗೂ ಸ್ಪಂದನೆ ದೊರೆಯದಿದ್ದಲ್ಲಿ ಗ್ರಾಮ ಮಟ್ಟದಿಂದ ವಿಧಾನಸೌಧಕ್ಕೆ ಮುತ್ತಿಗೆ ಹಾಕುವಲ್ಲಿ ವರೆಗೆ ಹೋರಾಟ ರೂಪಿಸಲಾಗುವುದು ಎಂದು ಎಚ್ಚರಿಸಿದರು.
ಜನಪರ ಕಾಳಜಿಯಿಂದ ವಿರಾಜಪೇಟೆ ಮತ್ತು ಸೋಮವಾರಪೇಟೆಯಲ್ಲಿ ಗುರುವಾರ ನಡೆಸುತ್ತಿರುವ ಪ್ರತಿಭಟನೆಗೆ ಸಾರ್ವಜನಿಕರು, ಆಟೋ, ಟ್ಯಾಕ್ಸಿ ಮತ್ತಿತರ ವಾಹನ ಚಾಲಕರು ಕೂಡ ಬೆಂಬಲ ನೀಡಬೇಕೆಂದು ಮನವಿ ಮಾಡಿದರು.ಗುರುವಾರ 10.30 ಗಂಟೆಗೆ ವಿರಾಜಪೇಟೆ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ತೆರಳಿ ಪಟ್ಟಣದ ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಲಾಗುವುದು. ಸಾರ್ವಜನಿಕರು ಸಂಪೂರ್ಣ ಸಹಕಾರ ನೀಡಬೇಕೇಂದರು.
ಸೋಮವಾರಪೇಟೆ ಮಂಡಲದ ಅಧ್ಯಕ್ಷ ಗೌತಮ್ ಗೌಡ ಮಾತನಾಡಿ, ಬೆಳಗ್ಗೆ 10.30ಕ್ಕೆ ಬಿಜೆಪಿ ಕಚೇರಿಯಿಂದ ಮೆರವಣಿಗೆಯಲ್ಲಿ ಪುಟ್ಟಪ್ಪ ವೃತ್ತಕ್ಕೆ ತೆರಳಿ ಮೂರು ಮುಖ್ಯ ರಸ್ತೆಗಳನ್ನು ಬಂದ್ ಮಾಡಿ ಪ್ರತಿಭಟನೆ ನಡೆಸಲಿರುವುದಾಗಿ ತಿಳಿಸಿದರು.ಬಿಜೆಪಿ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ ಮಹಿಳೆಯರಿಗೆ ರು.2 ಸಾವಿರ ನೀಡಿದಂತೆ ಮಾಡಿ ತೆರಿಗೆ ಹೊರೆ ಮತ್ತು ಬೆಲೆ ಏರಿಕೆ ಮೂಲಕ ಮತ್ತೆ ಕಸಿದುಕೊಳ್ಳುತ್ತಿದೆ ಎಂದು ಟೀಕಿಸಿದರು.ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ಮಡಿಕೇರಿ ಮಂಡಲ ಅಧ್ಯಕ್ಷ ನಾಗೇಶ್ ಕುಂದಲ್ಪಾಡಿ, ನಗರ ಮಂಡಲ ಅಧ್ಯಕ್ಷ ಉಮೇಶ್ ಸುಬ್ರಮಣಿ ಸುದ್ದಿಗೋಷ್ಠಿಯಲ್ಲಿದ್ದರು.