ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಗಣಪಾಲ್ ಐನಾಥ ರೆಡ್ಡಿ ಪದಗ್ರಹಣ

KannadaprabhaNewsNetwork |  
Published : Mar 05, 2024, 01:31 AM IST
ಬಳ್ಳಾರಿಯ ಬಿಜೆಪಿ ಕಚೇರಿಯಲ್ಲಿ ಜರುಗಿದ ಪದಗ್ರಹಣ ಸಮಾರಂಭದಲ್ಲಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನೇಮಕಗೊಂಡಿರುವ ಗಣಪಾಲ್ ಐನಾಥ ರೆಡ್ಡಿ ಅವರು ಅಧಿಕಾರ ವಹಿಸಿಕೊಂಡರು.  | Kannada Prabha

ಸಾರಾಂಶ

ಜಿಲ್ಲೆಯಲ್ಲಿ ಪಕ್ಷ ಅತ್ಯಂತ ಬಲಿಷ್ಠವಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಇದ್ದಾರೆ.

ಬಳ್ಳಾರಿ: ನಗರದ ಬಿಜೆಪಿ ಜಿಲ್ಲಾ ಕಚೇರಿ ಸಭಾಂಗಣದಲ್ಲಿ ಪಕ್ಷದ ರೈತ ಮೋರ್ಚಾ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಹಿರಿಯ ಮುಖಂಡ ಗಣಪಾಲ್ ಐನಾಥ ರೆಡ್ಡಿ ಅವರ ಪದಗ್ರಹಣ ಸಮಾರಂಭ ಸೋಮವಾರ ಜರುಗಿತು.

ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕಾ ಅವರಿಂದ ಪಕ್ಷದ ಧ್ವಜ ಸ್ವೀಕರಿಸುವ ಮೂಲಕ ಐನಾಥ ರೆಡ್ಡಿ ಅವರು ಪಕ್ಷದ ರೈತ ಸಂಘಟನೆಯ ಜವಾಬ್ದಾರಿ ವಹಿಸಿಕೊಂಡರು.

ಇದೇ ವೇಳೆ ಮಾತನಾಡಿದ ಐನಾಥ ರೆಡ್ಡಿ, ಜಿಲ್ಲೆಯಲ್ಲಿ ಪಕ್ಷ ಅತ್ಯಂತ ಬಲಿಷ್ಠವಾಗಿದೆ. ನಗರ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಪಕ್ಷದ ಸಾವಿರಾರು ಕಾರ್ಯಕರ್ತರು ಇದ್ದಾರೆ. ರೈತ ಸಮೂಹದ ನಡುವೆ ಪಕ್ಷದ ಸಿದ್ಧಾಂತ ಹಾಗೂ ಕೇಂದ್ರ ಸರ್ಕಾರ ಕೈಗೊಂಡಿರುವ ಅನೇಕ ಜನಪರ ಯೋಜನೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಮೂಲಕ ಸಂಘಟನೆಯನ್ನು ಮತ್ತಷ್ಟೂ ಗಟ್ಟಿಗೊಳಿಸಬೇಕಾದ ಅಗತ್ಯವಿದ್ದು, ಪಕ್ಷ ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಲಾಗುವುದು. ರೈತ ಸಮುದಾಯವನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಬೆಳವಣಿಗೆಗೆ ಶ್ರಮಿಸಲಾಗುವುದು ಎಂದರು.

ಪಕ್ಷದ ಜಿಲ್ಲಾಧ್ಯಕ್ಷ ಅನಿಲ್‌ ಕುಮಾರ್ ಮೋಕಾ ಮಾತನಾಡಿ, ಶೀಘ್ರದಲ್ಲಿಯೇ ಲೋಕಸಭಾ ಚುನಾವಣೆ ಘೋಷಣೆಯಾಗುತ್ತಿರುವುದರಿಂದ ಪಕ್ಷವನ್ನು ಮತ್ತಷ್ಟೂ ಗಟ್ಟಿಗೊಳಿಸಬೇಕಾದ ಅಗತ್ಯವಿದೆ. ಕೇಂದ್ರ ಸರ್ಕಾರ ರೈತ ಸಮುದಾಯದ ಹಿತ ಕಾಯಲು ಅನೇಕ ಯೋಜನೆಗಳನ್ನು ಜಾರಿಗೊಳಿಸಿದೆ. ಆ ಎಲ್ಲ ಯೋಜನೆಗಳ ಕುರಿತು ರೈತರಿಗೆ ತಿಳಿಸಿಕೊಡಬೇಕು ಎಂದರು.

ಪಕ್ಷದ ಜಿಲ್ಲಾ ಹಿರಿಯ ಉಪಾಧ್ಯಕ್ಷ ಗಾಳಿ ಶಂಕ್ರಪ್ಪ, ರೈತ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಸೋಮಶೇಖರಗೌಡ, ಸಹ ಪ್ರಭಾರಿ ಸುಮಾರೆಡ್ಡಿ, ವಿ.ಎಸ್. ಶಂಕರ್, ಶರಣಗೌಡ ಸೇರಿದಂತೆ ಮೋರ್ಚಾದ ಪದಾಧಿಕಾರಿಗಳು ಹಾಗೂ ಪಕ್ಷದ ವಿವಿಧ ಮೋರ್ಚಾಗಳ ಮುಖಂಡರು ಸಮಾರಂಭದಲ್ಲಿ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆರ್ಥಿಕ ಪ್ರಗತೀಲಿ ರಾಜ್ಯ ಸರ್ಕಾರ ಕೇಂದ್ರಕ್ಕಿಂತ ಬೆಸ್ಟ್‌
ಕೊಳಗೇರಿಗಳಲ್ಲಿ ದತ್ತಿಗೋಷ್ಠಿಗಳ ಆಯೋಜನೆ ಉತ್ತಮ ಪ್ರಯತ್ನ