ಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಲೋಕಸಭಾ ಚುನಾವಣೆ ಕಾರ್ಯಾಲಯ ಪ್ರಾರಂಭವಾಗುವುದರ ಮೂಲಕ ಚುನಾವಣೆ ಕೆಲಸಗಳು ಇಂದಿನಿಂದ ಅಧಿಕೃತವಾಗಿ ಚಾಲನೆ ನೀಡಿದಂತೆ ಆಗಿದೆ. 10 ದಿನಗಳಲ್ಲಿ ಚುನಾವಣೆ ನೀತಿಸಂಹಿತೆ ಜಾರಿಯಾಗಲಿದೆ. ಏಪ್ರಿಲ್ 3ನೇ ಅಥವಾ 4ನೇ ವಾರದಲ್ಲಿ ರಾಜ್ಯದಲ್ಲಿ ಚುನಾವಣೆ ನಡೆಯಬಹುದು. ಇನ್ನು 60 ರಿಂದ 70 ದಿನ ನಾವೆಲ್ಲ ಸಂಘಟನೆಯಲ್ಲಿ ತೊಡಗಬೇಕಾಗಿದೆ ಎಂದರು.
ಬಿಜೆಪಿ ಗೆಲುವು ಸಾಧಿಸಬೇಕಾದರೆ ಹಿಂದಿನ ಚುನಾವಣೆಯಲ್ಲಿ ತೆಗೆದುಕೊಂಡ ಮತಗಳಿಗಿಂತ ಶೇ 10ರಷ್ಟು ಹೆಚ್ಚು ಮಾಡಿಕೊಳ್ಳಬೇಕಾಗಿದೆ. ರಾಮಮಂದಿರ ಕೇವಲ ಮಂದಿರ ಅಲ್ಲ ಅದು ಪ್ರತಿಯೊಬ್ಬ ಹಿಂದೂವಿನ ಆತ್ಮ ಗೌರವ. ವಿಶ್ವ ನಾಯಕ ನರೇಂದ್ರ ಮೋದಿ, ಅಮಿತ್ ಶಾ, ಜೆ.ಪಿ ನಡ್ದಾರವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿಯ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಿಸುವುದರ ಎನ್‍ಡಿಎ ಜಯ ಸಾಧಿಸಬೇಕು ಎಂಬ ಅಂಶವನ್ನು ದೇಶದ ಕಾರ್ಯಕರ್ತರಿಗೆ ಸೂಚಿಸಿದ್ದಾರೆ.ಆ ನಿಟ್ಟಿನಲ್ಲಿ ಜನರ ಆಶೀರ್ವಾದವನ್ನು ಪಡೆಯಬೇಕು ಎಂದರು.ಮಾಜಿ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ಮಾತನಾಡಿ, ಇನ್ನು ನೂರು ದಿನ ಸಂಪೂರ್ಣ ಶ್ರಮ ಹಾಕಿ ಬಿಜೆಪಿ ಪಕ್ಷ ಮಾಡಿರುವಂತ ಎಲ್ಲಾ ಕೆಲಸಗಳನ್ನು ಮನೆ ಮನೆಗೆ ಹೋಗಿ ಸಾಮಾನ್ಯ ಜನರಿಗೆ ತಿಳಿಸಬೇಕು. 3ನೇ ಬಾರಿ ಮತ್ತೊಮ್ಮೆ ಮೋದಿ ಎಂಬ ಅಂಶವನ್ನು ಇಟ್ಟುಕೊಂಡು ಚುನಾವಣೆಯನ್ನು ಗೆಲ್ಲಬೇಕು. ದೇಶದಲ್ಲಿ ಒಂದು ರೀತಿಯ ವಿಶೇಷವಾದ ವಾತಾವರಣ ಭಾರತೀಯ ಜನತಾ ಪಾರ್ಟಿ ಪರವಿದೆ. ದೇಶದ ಬಡವರು, ರೈತರು, ಯುವಕರು, ವಿಶೇಷವಾಗಿ ಮಹಿಳೆಯರ ಬಗ್ಗೆ ಹೆಚ್ಚಿನ ಒತ್ತು ನೀಡಿ ಕೇಂದ್ರ ಸರ್ಕಾರ ಮಾಡಿರುವ ಸಾಧನೆಗಳು ಬಿಜೆಪಿಗೆ ಹೆಚ್ಚಿನ ಲಾಭವಾಗಲಿವೆ. ಇಡೀ ದೇಶವ ಒಗ್ಗೂಡಿಸಿದಂತಹ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಭಾರತೀಯ ಜನತಾ ಪಾರ್ಟಿಗೆ ಹೆಚ್ಚಿನ ಲಾಭವಾಗುವುದಿದೆ. ಎಲ್ಲಾ ಅಂಶಗಳನ್ನು ಗಮನಿಸಿ ಬಿಜೆಪಿ 400 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ ಎಂದರು.
ಮಾಜಿ ಶಾಸಕ ತಿಪ್ಪೇಸ್ವಾಮಿ ಮಾತನಾಡಿ, ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಬಂದ ಮೇಲೆ ರಾಜ್ಯದಲ್ಲಿ ಸಂಚಲನ ಉಂಟಾಗಿದೆ. ಪ್ರಧಾನಿ ಮೋದಿಯವರ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಗೌರವ ತೋರಿಸುತ್ತಿದ್ದಾರೆ. ಇದರ ಬಗ್ಗೆ ಜನಜಾಗೃತಿ ಆಗಬೇಕಿದೆ. ರಾಜ್ಯದಲ್ಲಿ ಆಡಳಿತ ಸಂಪೂರ್ಣ ವಿಪಲವಾಗಿದೆ.ಯಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ರಾಮನ ಅಸ್ತಿತ್ವವನ್ನೇ ಮುಖ್ಯಮಂತ್ರಿಗಳು ಪ್ರಶ್ನಿಸಿಸುತ್ತಾರೆ. ಕಳೆದ ಬಾರಿ ನಾವು ರಾಜ್ಯದಲ್ಲಿ 25 ಸ್ಥಾನ ಪಡೆದಿದ್ದೆವು. ಈಗ 28ಕ್ಕೆ 28 ಗೆಲ್ಲಬೇಕೆಂದರು.