ಕನ್ನಡಪ್ರಭ ವಾರ್ತೆ ಮಂಗಳೂರು
ಮಂಗಳೂರಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ದ.ಕ. ಲೋಕಸಭಾ ಕ್ಷೇತ್ರದ ‘ನವಯುಗ ನವಪಥ’ 9 ಅಂಶಗಳ ಪ್ರಣಾಳಿಕೆ ಬಿಡುಗಡೆ ವೇಳೆ ಅವರು ಮಾತನಾಡಿದರು.
ಪ್ರಣಾಳಿಕೆ ಬಿಡುಗಡೆಗೊಳಿಸಿದ ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಮಾತನಾಡಿದರು.
1-ಸಂಪರ್ಕ, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ದಾಪುಗಾಲು:
-ಮಂಗಳೂರು-ಬೆಂಗಳೂರು ನಡುವಿನ ಪ್ರಯಾಣದ ಸಮಯವನ್ನು ಕಡಿಮೆ ಮಾಡುವ ಹಾಗೂ ಸರಕು ಸಾಗಣಿಕೆಯನ್ನು ಸುಗಮಗೊಳಿಸಲು ಹೊಸ ಹೈಸ್ಪೀಡ್ ರೈಲು ಸಂಪರ್ಕಕ್ಕಾಗಿ ನೂತನ ಮಾರ್ಗದ ಸಾಧ್ಯತೆಗಳ ಪರಿಶೀಲನೆ.
2-ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ:-ದಕ್ಷಿಣ ಕನ್ನಡ ಜಿಲ್ಲೆಯ ಸಾಮರ್ಥ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಉತ್ತಮ ಆಡಳಿತ ಹಾಗೂ ಪೂರಕ ವ್ಯವಸ್ಥೆಗಳನ್ನು ಒದಗಿಸಿ ವಿವಿಧ ಕ್ಷೇತ್ರಗಳಲ್ಲಿ ಬಂಡವಾಳ ಹೂಡಿಕೆಗೆ ಉತ್ತೇಜನ.
-ವಿವಿಧ ಕ್ಷೇತ್ರಗಳ ಸಂಶೋಧನೆ ಹಾಗೂ ಅಭಿವೃದ್ಧಿ ಘಟಕಗಳನ್ನು ದಕ್ಷಿಣ ಕನ್ನಡದಲ್ಲಿ ಸ್ಥಾಪಿಸಲು ಪ್ರಮುಖ ಜಾಗತಿಕ ಕಂಪನಿಗಳಿಗೆ ಆಹ್ವಾನ
3-ಸ್ಟಾರ್ಟ್ ಅಪ್ ಮತ್ತು ಉದ್ಯಮಶೀಲತೆ: -ಜಿಲ್ಲೆಯಲ್ಲಿ ಉದ್ಯಮಶೀಲತೆಗೆ ಉತ್ತೇಜನ ನೀಡುವ ಸಲುವಾಗಿ ಉದಯೋನ್ಮುಖ ಉದ್ಯಮಿಗಳಿಗೆ ಬೆಂಬಲ ಮತ್ತು ಮಾರ್ಗದರ್ಶನ ಒದಗಿಸಿ ಹೊಸ ಸ್ಮಾರ್ಟ್ ಅಪ್‌ಗಳ ಸ್ಥಾಪನೆಗೆ ಪೂರಕ ಸೌಲಭ್ಯಗಳೊಂದಿಗೆ ವಾತಾವರಣ ನಿರ್ಮಾಣ. ---#Back To Ooru ಕಳೆದ ಕೆಲವು ದಶಕಗಳಲ್ಲಿ ದೇಶದ ವಿವಿಧೆಡೆ ಉದ್ಯಮ ಸ್ಥಾಪಿಸಿ ಯಶಸ್ವಿಯಾಗಿರುವ ದಕ್ಷಿಣಕನ್ನಡದವರನ್ನು ಮತ್ತೆ ಊರಿಗೆ ಕರೆತಂದು ಸ್ಥಳೀಯವಾಗಿ ಉದ್ಯಮ ಆರಂಭಿಸಿ ಉದ್ಯೋಗ ಸೃಷ್ಟಿಸಲು ಪ್ರೇರೇಪಣೆ.
4-ಪ್ರವಾಸೋದ್ಯಮ:
-ಸಾಹಸ ಕ್ರೀಡೆಗಳಿಗೆ ಪೂರಕವಾದ ಸಸಿಹಿತ್ತು ಬೀಚ್‌ನ ಅಭಿವೃದ್ಧಿಗೆ ಒತ್ತು, ಪ್ರವಾಸೋದ್ಯಮದ ಪ್ರಗತಿಗೆ ಕಡಲತೀರದ ಮೂಲಸೌಕರ್ಯಕ್ಕೆ ಆದ್ಯತೆ.-ದೇಗುಲ ಪ್ರವಾಸೋದ್ಯಮ, ಜಾನಪದ ಮತ್ತು ಆಹಾರ ಪ್ರವಾಸೋದ್ಯಮ, ಪರಿಸರ ಪ್ರವಾಸೋದ್ಯಮದ ಉತ್ತೇಜನಕ್ಕೆ ಆದ್ಯತೆ.
-ನಮ್ಮ ಜಿಲ್ಲೆಯ ಮಹಿಳೆಯರು ಆತಿಥ್ಯ, ಜವಳಿ, ಆಹಾರ, ಪ್ರವಾಸ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯವಾಗಿ ಕೊಡುಗೆ ನೀಡಿ ಆರ್ಥಿಕ ಪ್ರಗತಿಗೆ ಬೆನ್ನೆಲುಬಾಗಿದ್ದಾರೆ.
-ಆರ್ಥಿಕ ಪ್ರಗತಿಯಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಜಿಲ್ಲೆಯ ಪ್ರಮುಖ ಮಹಿಳಾ ಉದ್ಯಮಿಗಳ ಜೊತೆಗೆ ಚರ್ಚೆ.6-ಸಂಸ್ಕೃತಿ ಹಾಗೂ ಪರಂಪರೆ:
-ನಮ್ಮ ನೆಲದ ಕಲೆ, ಸಂಸ್ಕೃತಿ ಮತ್ತು ಪರಂಪರೆಯ ಸಂರಕ್ಷಣೆ ಹಾಗೂ ಪ್ರಚಾರ-ತುಳುನಾಡು ಹೆರಿಟೇಜ್ ಎಕ್ಸ್ಪೀರಿಯನ್ಸ್ ಸೆಂಟರ್ ಸ್ಥಾಪನೆ, ತುಳು ಭಾಷೆಗೆ ಸೂಕ್ತ ಸ್ಥಾನಮಾನ ದೊರೆಕಿಸುವ ದಿಕ್ಕಿನಲ್ಲಿ ವಿಶೇಷ ಪ್ರಯತ್ನ.
-ದೇಯಿ ಬೈದೇತಿ ಹೆಸರಿನಲ್ಲಿ ಸಾಂಪ್ರದಾಯಿಕ ಔಷಧ ಕೇಂದ್ರ ಸ್ಥಾಪನೆ.7-ಕೃಷಿ, ಪಶು ಸಂಗೋಪನೆ ಮತ್ತು ಮೀನುಗಾರಿಕೆ:
-ಕೃಷಿಕರಿಗೆ ಸುಸ್ಥಿರಾಭಿವೃದ್ಧಿ ಮತ್ತು ತಾಂತ್ರಿಕ ಸಹಕಾರ, ಸಹಜ ಕೃಷಿ ಪದ್ಧತಿ ಬಳಕೆಗೆ ಉತ್ತೇಜನ, ದೇಶಿ ಜಾನುವಾರು ತಳಿಗಳ ರಕ್ಷಣೆ, ಅಡಿಕೆ ಬೆಳೆಗಾರರ ಸಮಸ್ಯೆಗಳನ್ನು ಪರಿಹರಿಸುವ ಪ್ರಾಮಾಣಿಕ ಪ್ರಯತ್ನ.-ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಮೀನುಗಾರಿಕೆ ಕಾಲೇಜನ್ನು ವಿಶ್ವವಿದ್ಯಾಲಯವಾಗಿ ಉನ್ನತೀಕರಿಸುವ ಪ್ರಯತ್ನ.
8-ಯುವಜನತೆ ಮತ್ತು ಸಂವಹನ: -ನಮ್ಮ ಯುವಶಕ್ತಿ ನಮ್ಮ ಅತ್ಯಮೂಲ್ಯ ಸಂಪನ್ಮೂಲ-ಯುವಕ-ಯುವತಿಯರಿಗೆ ಉದ್ಯೋಗಾವಕಾಶ ಹೆಚ್ಚಿಸಲು ಕೌಶಲ ಆಧಾರಿತ ತರಬೇತಿ
-ಯುವಜನತೆಯಲ್ಲಿ ಮಾದಕದ್ರವ್ಯದ ವ್ಯಸನ ಹಾಗೂ ಮಾನಸಿಕ ಆರೋಗ್ಯ ಸಮಸ್ಯೆಗಳ ನಿವಾರಣೆಗೆ ಪ್ರಯತ್ನ.-ಕ್ರೀಡಾ ಕ್ಷೇತ್ರದಲ್ಲಿ ಜಾಗತಿಕ ಮಟ್ಟದ ಸಾಧನೆಗೆ ಪೂರಕವಾಗುವಂತಹ ಕ್ರೀಡಾ ಮೂಲಸೌಕರ್ಯ ಹಾಗೂ ವಿಶೇಷ ತರಬೇತಿಗೆ ಆದ್ಯತೆ.
-ರಾಣಿ ಅಬ್ಬಕ್ಕ ಹೆಸರಿನಲ್ಲಿ ಸೈನಿಕ ಶಾಲೆ ಸ್ಥಾಪನೆ.9-ಕರಾವಳಿ ಅಭಿವೃದ್ಧಿ ಮತ್ತು ಭದ್ರತೆ:
-ಅಂತಾರಾಷ್ಟ್ರೀಯ ವ್ಯಾಪಾರ ಮತ್ತು ವಾಣಿಜ್ಯದ ಪ್ರಗತಿಗೆ ಇರುವ ವಿಫುಲ ಅವಕಾಶಗಳನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಕರಾವಳಿ ತೀರದಲ್ಲಿ ಮೂಲಸೌಕರ್ಯ ಅಭಿವೃದ್ಧಿ.- ಪ್ರಮುಖ ಕರಾವಳಿ ನಗರಗಳ ನಡುವೆ ಜಲಮಾರ್ಗದ ಸಾಧ್ಯತೆಗಳ ಅನ್ವೇಷಣೆ.
- ಭಾರತದ ಮೊದಲ ಕರಾವಳಿ ರಕ್ಷಣಾ ಅಕಾಡೆಮಿಯ ಸಮಯೋಚಿತ ಸ್ಥಾಪನೆ ಹಾಗೂ ಕಾರ್ಯಾರಂಭ.- ಭಯೋತ್ಪಾದಕ ಚಟುವಟಿಕೆ ನಿಗ್ರಹಿಸುವ ಹಾಗೂ ಜಾಲವನ್ನು ಕಿತ್ತುಹಾಕುವ ಉದ್ದೇಶದೊ೦ದಿಗೆ ಎನ್‌ಐಎ ಮತ್ತು ವಿಧಿವಿಜ್ಞಾನ ಸಂಶೋಧನಾ ಕೇಂದ್ರ ಸ್ಥಾಪನೆ.