ಮುಂಬರುವ ದಿನಗಳಲ್ಲಿ ರಾಜ್ಯದಲ್ಲೂ ಬಿಜೆಪಿ ಆಡಳಿತ: ಡಾ. ಚಂದ್ರು ಲಮಾಣಿ

KannadaprabhaNewsNetwork |  
Published : Nov 16, 2025, 02:30 AM IST
ಬಿಹಾರದಲ್ಲಿ ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಿದ ಪ್ರಯುಕ್ತ ಮುಂಡರಗಿ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರು ಶನಿವಾರ ಸಂಭ್ರಮಾಚರಣೆ ಮಾಡಿದರು. | Kannada Prabha

ಸಾರಾಂಶ

ಬಿಹಾರದಲ್ಲಿ ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಮುಂಡರಗಿ ಪಟ್ಟಣದ ಹೇಮರಡ್ಡಿ ಮಲ್ಲಮ್ಮ ವೃತ್ತದಲ್ಲಿ ಶನಿವಾರ ಸಂಭ್ರಮಾಚರಣೆ ನಡೆಯಿತು.

ಮುಂಡರಗಿ: ರಾಹುಲ್ ಗಾಂಧಿ ಅವರು ಬಿಹಾರದಲ್ಲಿ ಪ್ರಚಾರ ಕೈಗೊಂಡಿದ್ದ ನೂರು ಕ್ಷೇತ್ರಗಳಲ್ಲಿಯು ಕಾಂಗ್ರೆಸ್ ಹೀನಾಯ ಸೋಲು ಕಂಡಿದೆ. ವೋಟ್ ಚೋರಿ ಆಗಿದೆ ಎನ್ನುತ್ತಿದ್ದ ರಾಹುಲ್ ಗಾಂಧಿ ಈಗೇನೆನ್ನುತ್ತಾರೆ ಎಂದು ಶಾಸಕ ಡಾ. ಚಂದ್ರು ಲಮಾಣಿ ಪ್ರಶ್ನಿಸಿದರು.

ಬಿಹಾರದಲ್ಲಿ ಎನ್‌ಡಿಎ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಪಟ್ಟಣದ ಹೇಮರಡ್ಡಿ ಮಲ್ಲಮ್ಮ ವೃತ್ತದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ಅವರು ಮಾಡಿದರು. ಸದ್ಯ ನಮ್ಮ ದೇಶದಲ್ಲಿ ಕೇವಲ ಎರಡು ರಾಜ್ಯಗಳಲ್ಲಿ ಮಾತ್ರ ಕಾಂಗ್ರೆಸ್ ಆಡಳಿತವಿದೆ. ಮುಂಬರುವ ದಿನಗಳಲ್ಲಿ ಕರ್ನಾಟಕವೂ ಸೇರಿದಂತೆ ಇನ್ನುಳಿದ ಎಲ್ಲ ರಾಜ್ಯಗಳಲ್ಲೂ ಬಿಜೆಪಿ ಆಡಳಿತಕ್ಕೆ ಬರುವುದು ನಿಶ್ಚಿತ. ರಾಜ್ಯದ ರೈತರು ಮೆಕ್ಕೆಜೋಳ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದು ಕೇಳುತ್ತಿದ್ದಾರೆ. ಕೇಂದ್ರ ಸರ್ಕಾರ ನಿಗದಿ ಮಾಡಿದ ಬೆಲೆಯಲ್ಲಿ ರಾಜ್ಯ ಸರ್ಕಾರ ಶೀಘ್ರ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎಂದರು.

ಕರಬಸಪ್ಪ ಹಂಚಿನಾಳ, ಆನಂದಗೌಡ ಪಾಟೀಲ, ಎಸ್.ವಿ. ಪಾಟೀಲ, ನಾಗೇಶ ಹುಬ್ಬಳ್ಳಿ, ಕುಮಾರಸ್ವಾಮಿ ಹಿರೇಮಠ, ಮುದ್ಲಿಂಗಪ್ಪ ಕೊರ್ಲಹಳ್ಳಿ, ಎಸ್.ಎಸ್. ಗಡ್ಡದ, ಚಿನ್ನಪ್ಪ ವಡ್ಡಟ್ಟಿ, ಮಲ್ಲಿಕಾರ್ಜುನ ಹಣಜಿ, ಆನಂದ ನಾಡಗೌಡ್ರ, ರವಿ ಲಮಾಣಿ, ಯಲ್ಲಪ್ಪ ಗಣಾಚಾರಿ, ಸೋಮು ಹಕ್ಕಂಡಿ, ದೇವು ಹಡಪದ, ಪವನ್ ಲೇಡ್ವೆ, ಅಶೋಕ ಚೂರಿ, ಪಾಲಾಕ್ಷಗೌಡ ಪಾಟೀಲ, ದೇವಪ್ಪ ಇಟಗಿ, ಎಚ್. ವಿರೂಪಾಕ್ಷಗೌಡ್ರ, ಪವಿತ್ರಾ ಕಲ್ಲಕುಟಗರ, ಅರುಣಾ ಪಾಟೀಲ, ಪುಷ್ಪಾ ಉಕ್ಕಲಿ, ಮಂಜುನಾಥ ಮುಧೋಳ, ವೀರಣ್ಣ ತುಪ್ಪದ ಉಪಸ್ಥಿತರಿದ್ದರು.

ಬಿಹಾರದಲ್ಲಿ ಮತ್ತೆ ಎನ್‌ಡಿಎ ಗೆಲುವು- ಬಿಜೆಪಿ ವಿಜಯೋತ್ಸವ:

ರಾಷ್ಟ್ರ ರಾಜಕಾರಣಕ್ಕೆ ಹೊಸ ದಿಕ್ಸೂಚಿ ಎಂದೇ ಹೇಳಲಾಗಿದ್ದ ಪ್ರತಿಷ್ಠಿತ ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಆಡಳಿತ ವಿರೋಧಿ ಅಲೆಯನ್ನು ಹಿಂದಿಕ್ಕಿ ಎನ್‌ಡಿಎ ಅಭೂತಪೂರ್ವ ಜನಾದೇಶ ಪಡೆದು ಮತ್ತೆ ಅಧಿಕಾರಕ್ಕೆ ಬಂದಿದೆ ಎಂದು ಶಾಸಕ ಡಾ. ಚಂದ್ರು ಕೆ. ಲಮಾಣಿ ಹೇಳಿದರು.

ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಐತಿಹಾಸಿಕ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಸಂಜೆ ಶಿರಹಟ್ಟಿಯ ಬಸವೇಶ್ವರ ವೃತ್ತದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಪಟಾಕಿ ಸಿಡಿಸಿ, ಸಿಹಿ ಹಂಚಿ ವಿಜಯೋತ್ಸವ ಆಚರಿಸಿ ಅವರು ಮಾತನಾಡಿದರು. ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತ ಮೆಚ್ಚಿ ಬಿಹಾರದ ಜನತೆ ಐತಿಹಾಸಿಕ ಗೆಲುವು ತಂದು ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿಯೂ ಇದೇ ರೀತಿಯಲ್ಲಿ ಪಕ್ಷ ಗೆಲುವು ಸಾಧಿಸಲಿದೆ ಎಂದರು.೨೪೩ ವಿಧಾನಸಭಾ ಕ್ಷೇತ್ರಗಳ ಪೈಕಿ ಎನ್‌ಡಿಎ ಮೈತ್ರಿಕೂಟ ೨೦೦ ಸ್ಥಾನಗಳನ್ನು ಪಡೆದು ಈ ಬಾರಿ ಭಾರೀ ಜನಾದೇಶದೊಂದಿಗೆ ಅಧಿಕಾರ ಗದ್ದುಗೆ ಹಿಡಿದಿದೆ. ಎನ್‌ಡಿಎ ಅಬ್ಬರಕ್ಕೆ ಪ್ರತಿಪಕ್ಷಗಳು ಧೂಳಿಪಟವಾಗಿದ್ದು, ಅಧಿಕೃತ ವಿರೋಧ ಪಕ್ಷದ ಸ್ಥಾನಕ್ಕೆ ಬೇಕಾದ ಸ್ಥಾನಗಳನ್ನು ಪಡೆಯಲು ವಿಫಲವಾಗಿದೆ. ಈ ಹಿಂದೆಯೂ ೧೯೯೯ರಲ್ಲಿ ಎನ್‌ಡಿಎ ಮೈತ್ರಿಕೂಟ ದ್ವಿಶತಕ ಬಾರಿಸಿ ದಾಖಲೆ ಬರೆದಿತ್ತು ಎಂದರು.

ಬಿಜೆಪಿ ನಗರ ಘಟಕದ ಅಧ್ಯಕ್ಷ ನಾಗರಾಜ ಲಕ್ಕುಂಡಿ, ಫಕ್ಕೀರೇಶ ರಟ್ಟಿಹಳ್ಳಿ, ಬಸವರಾಜ ಪಲ್ಲೇದ, ಜಿಪಂ ಮಾಜಿ ಸದಸ್ಯ ಶಿವಪ್ರಕಾಶ ಮಹಾಜನಶೆಟ್ಟರ, ಶಂಕರ ಮರಾಠೆ, ರಾಮಣ್ಣ ಕಂಬಳಿ, ತಿಮ್ಮರಡ್ಡಿ ಮರಡ್ಡಿ, ಜಾನು ಲಮಾಣಿ, ಸಂದೀಪ ಕಪ್ಪತ್ತನವರ, ಗೂಳಪ್ಪ ಕರಿಗಾರ ಉಪಸ್ಥಿತರಿದ್ದರು.ಫೋಟೋ-೧೪-ಎಸ್‌ಎಚ್‌ಟಿ:೩ಕೆ- ಬಿಹಾರ ವಿಧಾನಸಭೆ ಚುನಾವಣೆಯಲ್ಲಿ ಎನ್‌ಡಿಎ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಶುಕ್ರವಾರ ಶಿರಹಟ್ಟಿಯ ಬಸವೇಶ್ವರ ವೃತ್ತದಲ್ಲಿ ಶಾಸಕ ಡಾ. ಚಂದ್ರು ಲಮಾಣಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಾಳಿಪಟ ದಾರ ಕುತ್ತಿಗೆ ಸೀಳಿ ಮಗಳನ್ನು ಹಾಸ್ಟೆಲ್‌ನಿಂದ ಕರೆತರಲು ಹೊರಟಿದ್ದ ಅಪ್ಪ ದಾರುಣ ಸಾವು
ಪೌರಾಯುಕ್ತೆಗೆ ಬೆಂಕಿ: ಕಾಂಗ್ರೆಸ್ಸಿಗನಿಂದ ಧಮ್ಕಿ