ದೇಶದಲ್ಲಿ ಕಾಂಗ್ರೆಸ್ ಪಕ್ಷ ಮುಗಿಸಲು ಬಿಜೆಪಿ ಷಡ್ಯಂತ್ರ

KannadaprabhaNewsNetwork |  
Published : Jun 27, 2026, 12:15 AM IST
ಚಿತ್ರ ಶೀರ್ಷಿಕೆ.ಮೊಳಕಾಲ್ಮೂರು ಪಟ್ಟಣದ ಸ್ಕೈ ಪಂಕ್ಷನ್  ಸಭಾ ಭವನದಲ್ಲಿ ಆಯೋಜಿಸಲಾಗಿದ್ದ ಮತದಾರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಸಭೆಯನ್ನು  ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಉದ್ಘಾಟಿಸಿದರು. | Kannada Prabha

ಸಾರಾಂಶ

‘ನಮ್ಮ ಮತ ನಮ್ಮಹಕ್ಕು ಸಭೆ’ಯಲ್ಲಿ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಆರೋಪ

ಕನ್ನಡಪ್ರಭ ವಾರ್ತೆ ಮೊಳಕಾಲ್ಮೂರು

ಎಸ್ಐಆರ್ ಮೂಲಕ ದೇಶದಲ್ಲಿ ಕಾಂಗ್ರೆಸ್ ಪಕ್ಷವನ್ನು ಮುಗಿಸಲು ಬಿಜೆಪಿ ಷಡ್ಯಂತ್ರ ನಡೆಸುತ್ತಿದೆ ಎಂದು ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ ಹೇಳಿದರು.

ಪಟ್ಟಣದ ಸ್ಕೈ ಪಂಕ್ಷನ್ ಸಭಾ ಭವನದಲ್ಲಿ ಶುಕ್ರವಾರ ಬ್ಲಾಕ್ ಕಾಂಗ್ರೆಸ್ ನಿಂದ ಆಯೋಜಿಸಲಾಗಿದ್ದ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಯ ನಮ್ಮ ಮತ ನಮ್ಮಹಕ್ಕು ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ಚುನಾವಣಾ ಆಯೋಗವನ್ನು ಕೈಗೊಂಬೆ ಮಾಡಿಕೊಂಡು ಜನಸಾಮಾನ್ಯರ ಸಂವಿಧಾನ ಬದ್ಧ ಹಕ್ಕುಗಳನ್ನು ಕಸಿಯಲು ಮತದಾನ ಪರಿಷ್ಕರಣೆಗೆ ಮುಂದಾಗಿದೆ.

ಎಸ್ಐಆರ್ ಮೂಲಕ ದೇಶದಲ್ಲಿ ಕಾಂಗ್ರೆಸ್ ಮುಗಿಸುವ ತಂತ್ರ ಮಾಡುತ್ತಿದ್ದಾರೆ. ಸಂವಿಧಾನಕ್ಕೆ ದಕ್ಕೆ ತರುವ ಪ್ರಯತ್ನ ಸದ್ದಿಲ್ಲದೆ ನಡೆಸುತ್ತಿದೆ. ಬಿಜೆಪಿ ರೂಪಿಸಿರುವ ಪ್ಲಾನ್ ಇದಾಗಿದ್ದು ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಎಸ್‌ಐಆರ್ ಹಿಂದಿನ ಮಾಸ್ಟರ್ ಮೈಂಡ್ ಆಗಿದ್ದು ಕಾಂಗ್ರೆಸ್ ಪಕ್ಷವನ್ನು ಮುಗಿಸುವ ಅವರ ತಂತ್ರ ಪಾಲಿಸಲ್ಲ ಎಂದರು.

ಎಸ್‌ಐಆರ್ ಪ್ರಕಾರ ನಿಜವಾದ ಭಾರತೀಯ ಕೂಡ ಮತದಾರನಾಗುವುದಿಲ್ಲ. ನರೇಂದ್ರ ಮೋದಿ, ಅಮಿತ್ ಶಾ ಹೇಳಿದ ರೀತಿ ಎಸ್‌ಐಆರ್ ನಡೆಯುತ್ತಿದೆ. ಬಿಜೆಪಿ, ಆರ್‌ಎಸ್ಎಸ್ ಸೇರಿ ಜನಸಾಮಾನ್ಯರ ಮತ ತೆಗೆಯಲು ಹುನ್ನಾರ ಮಾಡುತ್ತಿದ್ದಾರೆ. ಪಶ್ಚಿಮ ಬಂಗಾಳ, ಬಿಹಾರ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮತ ಪರಿಷ್ಕರಣೆ ಮೂಲಕ ಆದಿಕಾರಕ್ಕೆ ಬಂದ ಬಿಜೆಪಿ ರಾಜ್ಯದಲ್ಲಿಯೂ ಬರುವ ಚುನಾವಣೆಗಳನ್ನು ಗೆಲ್ಲಲು ಮಾಡಿರುವ ಬಹುದೊಡ್ಡ ತಂತ್ರ. ಕಾರ್ಯಕರ್ತರು ಜಾಗೃತರಾಗಬೇಕು. ಜೂ.30 ರಿಂದ ಜು.29ರವರೆಗೆ ನಡೆಯುವ ಮತ ಪರಿಷ್ಕರಣೆ ವೇಳೆ ಮತಗಟ್ಟೆ ಅಧಿಕಾರಿಗಳ ಜೊತೆಗಿದ್ದು ಮತಗಳವು ಆಗದಂತೆ ಎಚ್ಚರಿಕೆಯಿಂದ ಇರಬೇಕು ಎಂದರು.

ಇದೇ ವೇಳೆ ಶಾಸಕ ಎನ್.ವೈ.ಗೋಪಾಲಕೃಷ್ಣ ಮಾತನಾಡಿ, ಡಾ.ಬಾಬಾ ಸಾಹೇಬರು ನೀಡಿದಂತ ಮತಗಳ ಹಕ್ಕನ್ನು ಕಸಿಯಲು ಬಿಜೆಪಿ ಎಸ್‌ಐಆರ್ ರೂಪಿಸಿದೆ. ಪಕ್ಷದಿಂದ ನೇಮಕಗೊಂಡಿರುವ ಬಿಎಲ್‌ಎಗಳು ಮತ ಪರಿಷ್ಕರಣೆ ವೇಳೆ ಸೂಕ್ಷ್ಮವಾಗಿ ಗಮನಿಸಬೇಕು. ಯಾವೊಬ್ಬ ಮತದಾರನ ಹಕ್ಕು ಹಾಳಾಗದಂತೆ ಎಚ್ಚರವಹಿಸಬೇಕು. ಅನುಮಾನ ಕಂಡುಬಂದಲ್ಲಿ ಮತಗಟ್ಟೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸಮಸ್ಯೆ ಪರಿಹರಿಸಿಕೊಳ್ಳಬೇಕು ಎಂದರು.

ದ್ರಾಕ್ಷಿ ಹಾಗೂ ವೈನ್ ಬೋರ್ಡ್ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು ಮಾತನಾಡಿ, ಬಿಜೆಪಿ ಅಧಿಕಾರಕ್ಕಾಗಿ ಮತಗಳ್ಳತನ ಮೂಲಕ ಅಧಿಕಾರ ಪಡೆಯುವ ಹುನ್ನಾರ ನಡೆಸುತ್ತಿದೆ. ಕಾಂಗ್ರೆಸ್‌ಗೆ ಬರಬಹುದಾದ ಮತಗಳ ಮೇಲೆ ಕಣ್ಣಿಟ್ಟಿರುವ ಬಿಜೆಪಿ ನಾಯಕರು ಮತದಾರ ಪಟ್ಟಿಯಿಂದ ಕೈಬಿಟ್ಟು ಮುಂಬರುವ ಚುನಾವಣೆಗಳಲ್ಲಿ ಅಧಿಕಾರ ಪಡೆಯಲು ಸದ್ದಿಲ್ಲದೆ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರು ಎಚ್ಚರವಾಗಿರಬೇಕು. ಮತಪಟ್ಟಿಯಲ್ಲಿ ಅರ್ಹ ಮತದಾರರು ಹೊರಗೆ ಉಳಿಯದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಸಭೆಯಲ್ಲಿ ಜಿಲ್ಲಾಧ್ಯಕ್ಷ ಎಂ.ಕೆ.ತಾಜ್ ಪೀರ್.ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಶಿವಣ್ಣ, ತಾಲೂಕು ಅಧ್ಯಕ್ಷ ಎನ್.ವೈ.ಚೇತನ್, ಪಕ್ಷದ ಪ್ರದಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಸಂಪತ್ ಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಕಲೀಮ್ ಉಲ್ಲಾ, ನಾಗೇಶ್ ರೆಡ್ಡಿ, ಜಿಪಂ ಮಾಜಿ ಸದಸ್ಯರಾದ ಎಚ್.ಟಿ.ನಗರೆಡ್ಡಿ, ಪಟೇಲ್ ಪಾಪನಾಯಕ, ಬಾಲರಾಜ್, ಹಿರೇಹಳ್ಳಿ ಮಲ್ಲೇಶ್, ಹಾಲಸ್ವಾಮಿ, ಜಿ.ಎನ್.ಜಗದೀಶ್, ಬಿ.ಟಿ.ನಾಗ ಭೂಷಣ, ಇಕ್ಬಾಲ್ ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ
ಪೊಲೀಸರಿಂದ ಅಕ್ರಮ ಕೈ ಕೋಳ: ಮಾನನಷ್ಟ ಮೊಕದ್ದಮೆ