ಕನ್ನಡಪ್ರಭ ವಾರ್ತೆ ಮಂಗಳೂರು
ಜಿಲ್ಲಾ ವಕ್ತಾರ ಅರುಣ್ ಜಿ.ಶೇಟ್ ವಂದೇಮಾತರಂ ಹಾಡಿದರು. ರಾಜ್ಯ ಶಿಕ್ಷಣ ಪ್ರಕೋಷ್ಠ ಸಮಿತಿ ಸದಸ್ಯರಾದ ಮುರಳಿ ಹೊಸಮಜಲು ಸ್ವಾಗತಿಸಿದರು. ಜಿಲ್ಲಾ ಪ್ರಕೋಷ್ಠ ಸಂಯೋಜಕ ಸುಧೀರ್ ಶೆಟ್ಟಿ ಕಣ್ಣೂರು ಪ್ರಸ್ತಾವಿಸಿದರು. ಕೈಗಾರಿಕಾ ಪ್ರಕೋಷ್ಠ ಜಿಲ್ಲಾ ಸಂಚಾಲಕ ಸತೀಶ್ ಕರ್ಕೇರ ವಂದಿಸಿದರು. ಜಿಲ್ಲಾ ಉಪಾಧ್ಯಕ್ಷೆ ಪೂಜಾ ಪ್ರಶಾಂತ್ ಪೈ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಭರತನಾಟ್ಯದಲ್ಲಿ ಗಿನ್ನೆಸ್ ದಾಖಲೆ ನಿರ್ಮಿಸಿದ ರೇಮೋನ ಪಿರೇರಾರನ್ನು ಸನ್ಮಾನಿಸಲಾಯಿತು.
ಜಿಲ್ಲಾ ಉಪಾಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು, ಪ್ರಧಾನ ಕಾರ್ಯದರ್ಶಿ ಪ್ರೇಮಾನಂದ ಶೆಟ್ಟಿ, ಯತೀಶ್ ಆರ್ವಾರ್, ರಾಜ್ಯ ಮಹಿಳಾ ಮೋರ್ಚಾ ಕಾರ್ಯದರ್ಶಿ ಶ್ವೇತಾ ಕುಮಾರಿ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಕಾರ್ಯದರ್ಶಿ ಜೆಸ್ಸಿಲ್ ಡಿ ಸೋಜಾ, ಜಿಲ್ಲಾ ವಕ್ತಾರ ರಾಜ್‌ಗೋಪಾಲ್ ರೈ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಹೇಶ್ ಜೋಗಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಡಾ. ಮಂಜುಳಾ ಅನಿಲ್ ರಾವ್, ಯುವ ಮೋರ್ಚಾ ಜಿಲ್ಲಾಧ್ಯಕ್ಷ ನಂದನ್ ಮಲ್ಯ, ಅಲ್ಪಸಂಖ್ಯಾತ ಮೋರ್ಚಾ ಜಿಲ್ಲಾಧ್ಯಕ್ಷ ಟಿ.ಎ.ಶಹನವಾಜ್, ಪ್ರಮುಖರಾದ ಹರಿಕೃಷ್ಣ ಬಂಟ್ವಾಳ, ಮಾಜಿ ಮಹಾನಗರ ಪಾಲಿಕೆ ಸದಸ್ಯರು, ಹಿರಿಯ ಕಾರ್ಯಕರ್ತರು, ಮಂಡಲ ಪದಾಧಿಕಾರಿಗಳು ಇದ್ದರು.