ಜನರ ಭಾವನೆಯಂತೆ ಬಿಜೆಪಿ ಹೋರಾಟ: ಬೊಮ್ಮಾಯಿ

KannadaprabhaNewsNetwork | Published : Apr 11, 2025 12:32 AM

ಸಾರಾಂಶ

ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ.

ಹಾವೇರಿ: ಹಾಲಿನಿಂದ ಹಿಡಿದು ಅಲ್ಕೋಹಾಲಿನವರೆಗೆ, ವಿದ್ಯುತ್, ದಿನಬಳಕೆ ಸಾಮಗ್ರಿ ಸೇರಿದಂತೆ ಎಲ್ಲದರ ಬೆಲೆ ಹೆಚ್ಚಳ ಮಾಡಿರುವ ಕಾಂಗ್ರೆಸ್ ಸರ್ಕಾರ ಯಾವಾಗ ತೊಲಗುತ್ತೋ ಎಂಬ ಭಾವನೆ ಜನರಲ್ಲಿ ಬಂದಿದೆ. ಅವರ ಭಾವನೆಯಂತೆ ನಾವು ಹೋರಾಟ ಮಾಡುತ್ತಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.ಗುರುವಾರ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ. ಜಿಲ್ಲೆಯಲ್ಲಿ ಅಹೋರಾತ್ರಿ ಹೋರಾಟ ಆರಂಭ ಮಾಡಿದ್ದೇವೆ. ಕರ್ನಾಟಕ ಸರ್ಕಾರ ಎಲ್ಲ ವಸ್ತುಗಳ ಬೆಲೆ ಏರಿಸಿದೆ. ಹಾಲು, ಅಲ್ಕೋಹಾಲ್‌, ವಿದ್ಯುತ್‌ ದರ ಸೇರಿದಂತೆ ಎಲ್ಲ ದರ ಬೆಲೆ ಹೆಚ್ಚಳ ಮಾಡಿದೆ. ಸರ್ಕಾರ ದಿವಾಳಿಯಾಗಿದೆ. ಸರ್ಕಾರಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂಬ ಮಾಹಿತಿ ಇದೆ ಎಂದರು.

ವಿದ್ಯುತ್ ಮೀಟರ್ ಅಳವಡಿಕೆಯಲ್ಲಿ ಬಹಳ ದೊಡ್ಡ ಮಟ್ಟದ ಭ್ರಷ್ಟಾಚಾರ ನಡೆದಿದೆ ಅಂತ ಗುತ್ತಿಗೆದಾರರು ದಾಖಲೆ ಸಮೇತ ಹೇಳಿದ್ದಾರೆ. ಬೇರೆ ರಾಜ್ಯಗಳಲ್ಲಿ ಕೇವಲ ₹700 ಇರುವ ಮೀಟರ್‌ಗಳಿಗೆ ರಾಜ್ಯದಲ್ಲಿ ಐದರಿಂದ ಆರು ಸಾವಿರ ರು. ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ಇದೇ ಸಂದರ್ಭದಲ್ಲಿ ಜಾತಿ ಗಣತಿ ವಿಚಾರದ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜಾತಿ ಗಣತಿ ವಿಚಾರದಲ್ಲಿ ರಾಜ್ಯ ಸರ್ಕಾರ ಏನು ಮಾಡುತ್ತದೆ ಮಾಡಲಿ. ಜಾತಿ ಗಣತಿ ವರದಿಯನ್ನು ಕೊಟ್ಟು ಒಂದು ವರ್ಷವಾಯಿತು. ಸಿಎಂ ಸಿದ್ದರಾಮಯ್ಯ ಅವರು ಅದನ್ನು ಯಾಕೆ ಮುಚ್ಚಿಟ್ಟುಕೊಂಡಿದ್ದಾರೊ ಗೊತ್ತಿಲ್ಲ. ಅವರು ಬಿಡುಗಡೆ ಮಾಡಲು ಏನು ಸಮಸ್ಯೆಯಾಗಿದೆ. ಅವರು ಬಿಡುಗಡೆ ಮಾಡಲಿ ಆ ನಂತರ ಮಾತನಾಡುತ್ತೇನೆ ಎಂದರು.12ರಿಂದ ಸೀತಾಸತಿ ಢಾಕು ಮಹಾರಾಜರ ಜಾತ್ರೆ

ಬ್ಯಾಡಗಿ: ತಾಲೂಕಿನ ಕಾಟೇನಹಳ್ಳಿ ಗ್ರಾಮದ(ಮೂಲಸ್ಥಳ) ಸೀತಾಸತಿ ಢಾಕು ಮಹಾರಾಜರ 31ನೇ ವರ್ಷದ ಜಾತ್ರಾ ಮಹೋತ್ಸವ ಏ. 12ರಿಂದ 14ರ ವರೆಗೆ ಜರುಗಲಿದೆ ಎಂದು ಟ್ರಸ್ಟ್ ಅಧ್ಯಕ್ಷ ಗದಿಗ್ಯಾನಾಯ್ಕ ತಿಳಿಸಿದರು.ಗುರುವಾರ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿ, ಏ. 13ರಂದು ಸೀತಾಸತಿ, ವಿಘ್ನೇಶ್ವರ, ಕರಿಯಮ್ಮದೇವಿ. ವೀರಭದ್ರೇಶ್ವರ ದೇವರಿಗೆ ವಿಶೇಷ ಪೂಜೆಗಳು ಜರುಗಲಿವೆ. ಅಂದು ಬೆಳಗ್ಗೆ 8 ಗಂಟೆಗೆ ಸೀತಾಸತಿಗೆ ಉಡಿ ತುಂಬುವುದು, 10 ಗಂಟೆಗೆ ಸೀತಾಸತಿ ಢಾಕು ಮಹಾರಾಜರ ಉತ್ಸವ ಮೂರ್ತಿ ಪಲ್ಲಕ್ಕಿ ಮಹೋತ್ಸವ ಜರುಗಲಿದೆ. ಈ ವೇಳೆ ಮಹಿಳೆಯರು ಪೂರ್ಣಕುಂಭದೊಂದಿಗೆ ಪಾಲ್ಗೊಳ್ಳಲಿದ್ದಾರೆ ಎಂದರು.

ಧಾರ್ಮಿಕ ಕಾರ್ಯಕ್ರಮ: ಏ. 13ರ ಸಂಜೆ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ಸಾನಿಧ್ಯವನ್ನು ಮರಿಯಮ್ಮದೇವಿ ಸಾಲೂರು ಮಠದ ಸೈನಾ ಭಗತ್ ಸ್ವಾಮೀಜಿ, ಬಂಜಾರ ಶಕ್ತಿಪೀಠ ವಿಜಯನಗರದ ಶಿವಪ್ರಕಾಶ ಮಹಾರಾಜರು, ವಿಜಯಪುರ ದುರ್ಗಾದೇವಿ ದೇವಸ್ಥಾನದ ಡಾ. ಜಗನು ಮಹಾರಾಜ್, ಆದರಳ್ಳಿ ಗವಿಸಿದ್ದೇಶ್ವರ ಮಠದ ಡಾ. ಕುಮಾರ ಮಹಾರಾಜ್ ಶ್ರೀಗಳು ಪಾಲ್ಗೊಳ್ಳಲಿದ್ದಾರೆ. ಸಂಜೆ 7 ಗಂಟೆಗೆ ಬೋಗ್ ಕಾರ್ಯಕ್ರಮ ನಡೆಯಲಿದೆ.

ಗಣ್ಯರು ಭಾಗವಹಿಸುವ ನಿರೀಕ್ಷೆ: ಮುಖ್ಯ ಅತಿಥಿಗಳಾಗಿ ಸಂಸದ ಬಸವರಾಜ ಬೊಮ್ಮಾಯಿ, ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ, ಶಾಸಕ ಬಸವರಾಜ ಶಿವಣ್ಣನವರ, ಹಿರೇಕೆರೂರು ಶಾಸಕ ಯು.ಬಿ.ಬಣಕಾರ, ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ‍್ಯಾನಾಯ್ಕ, ಹೂವಿನಹಡಗಲಿ ಶಾಸಕ ಕೃಷ್ಣನಾಯ್ಕ, ಹಗರಿಬೊಮ್ಮನಹಳ್ಳಿ ಶಾಸಕ ನೇಮಿರಾಜ ನಾಯ್ಕ, ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಲ್. ಜಯದೇವ ನಾಯ್ಕ ಪಾಲ್ಗೊಳ್ಳಲಿದ್ದಾರೆ, ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಮಲ್ಲಿಕಾರ್ಜುನ ಕಾರ್ಗಿ, ಗದಿಗೆಯ್ಯ ಹಿರೇಮಠ ಪಾಲ್ಗೊಳ್ಳಲಿದ್ದಾರೆ ಎಂದರು.ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ಶಂಕರ ಡಿ. ಲಮಾಣಿ, ಢಾಕಪ್ಪ ಎಸ್. ನಾಯ್ಕ, ಹನುಮಂತಪ್ಪ ಲಮಾಣಿ, ಸತೀಶನಾಯ್ಕ ಬಿ. ಲಮಾಣಿ, ಜಗದೀಶ ಲಮಾಣಿ ಇತರರಿದ್ದರು.

Share this article