ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಕಾಲ್ನಡಿಗೆ ಜಾಥಾದಲ್ಲಿ ವಿಪಕ್ಷ ನಾಯಕ ಆರ್.ಅಶೋಕ್ ಭಾಗವಹಿಸಿ, ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಮೈಸೂರು-ಕೊಡಗು ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಎನ್.ಮಹೇಶ್, ಮಾಜಿ ಶಾಸಕ ಎಸ್.ಬಾಲರಾಜು, ಮಾಜಿ ಎಂಎಲ್‌ಸಿ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ, ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಇಬ್ಬಂದಿ ನೀತಿ ಹಾಗೂ ಸ್ಥಳೀಯ ಶಾಸಕರ ರೈತ ವಿರೋಧಿ ನೀತಿ ಖಂಡಿಸಿ ನ.5 ರಂದು ತಾಲೂಕು ಕಚೇರಿಗೆ ಸಾವಿರಾರು ಮಂದಿ ಮುತ್ತಿಗೆ ಹಾಗೂ ಕಾಲ್ನಡಿಗೆ ಜಾಥಾಕ್ಕೆ ಸಾವಿರಾರು ಬಿಜೆಪಿ ಕಾರ್ಯಕರ್ತರು ಆಗಮಿಸಲಿದ್ದಾರೆ.ರೈತಸಂಘದ ಅಹೋ ರಾತ್ರಿ 21 ದಿನಕ್ಕೆ: ಗುಂಡ್ಲುಪೇಟೆ ತಾಲೂಕಿನ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಆಗ್ರಹಿಸಿ ಕೆ.ಎಸ್.ಪುಟ್ಟಣ್ಣಯ್ಯ ಬಣದ ರೈತಸಂಘದ ಕಾರ್ಯಕರ್ತರು ನಡೆಸುತ್ತಿರುವ ಅಹೋ ರಾತ್ರಿ ಧರಣಿ 21 ದಿನಕ್ಕೆ ಕಾಲಿಟ್ಟಿದೆ.
ಇಂದಿನ ಧರಣಿಯಲ್ಲಿ ತಾಲೂಕು ರೈತಸಂಘದ ಅಧ್ಯಕ್ಷ ಹಂಗಳ ದಿಲೀಪ್, ಮುಖಂಡರಾದ ಮಾಧು, ನಾಗರಾಜಪ್ಪ, ಮಹೇಶ್, ಸುರೇಶ್, ಲೋಕೇಶ್ ಸೇರಿದಂತೆ ಹಲವರಿದ್ದರು.