ಬಿಜೆಪಿ ವತಿಯಿಂದ ನಮೋ ಮ್ಯಾರಥಾನ್

KannadaprabhaNewsNetwork |  
Published : Sep 27, 2025, 12:00 AM IST
೨೬ಶಿರಾ೨: ಶಿರಾ ನಗರದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಧುಗಿರಿ ಬಿಜೆಪಿ ಸಂಘಟನಾತ್ಮಕ  ಜಿಲ್ಲೆಯ ವತಿಯಿಂದ ಶುಕ್ರವಾರ ನಗರದಲ್ಲಿ  ನಮೋ ಮ್ಯಾರಥಾನ್  ಓಟವನ್ನು ಹಮ್ಮಿಕೊಳ್ಳಲಾಗಿತ್ತು. ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಸೇರಿದಂತೆ ಹಲವರು ಭಾಗವಹಿಸಿದ್ದರು. | Kannada Prabha

ಸಾರಾಂಶ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಯ ವತಿಯಿಂದ ಶುಕ್ರವಾರ ನಗರದಲ್ಲಿ ನಮೋ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.

ಕನ್ನಡಪ್ರಭ ವಾರ್ತೆ ಶಿರಾ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹುಟ್ಟು ಹಬ್ಬದ ಅಂಗವಾಗಿ ಮಧುಗಿರಿ ಬಿಜೆಪಿ ಸಂಘಟನಾತ್ಮಕ ಜಿಲ್ಲೆಯ ವತಿಯಿಂದ ಶುಕ್ರವಾರ ನಗರದಲ್ಲಿ ನಮೋ ಮ್ಯಾರಥಾನ್ ಓಟವನ್ನು ಹಮ್ಮಿಕೊಳ್ಳಲಾಗಿತ್ತು.

ಶಿರಾ ನಗರದ ಪ್ರಮುಖ ಬೀದಿಗಳಲ್ಲಿ ನಶಾ ಮುಕ್ತ ಭಾರತ ಸ್ವಾವಲಂಬಿ ಭಾರತ ಸಮೃದ್ಧಿ ಭಾರತ ಎಂಬ ಜಯ ಘೋಷಣೆಯನ್ನು ಕೂಗುತ್ತಾ ನೂರಾರು ಕಾರ್ಯಕರ್ತರು ಸಂಚರಿಸಿದರು. ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ ಗೌಡ ಸೇರಿದಂತೆ ಹಲವರು ಭಾಗವಹಿಸಿ ಮಾತನಾಡಿ, ನಶೆ ಮುಕ್ತ ಭಾರತದ ಸಂಕಲ್ಪದೊಂದಿಗೆ ಯುವಕರಲ್ಲಿ ನಡಿಗೆಯ ಮತ್ತು ಓಟದ ಪ್ರಾಮುಖ್ಯತೆಯನ್ನು ತಿಳಿಸುವ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ಭಾರತ ಸ್ವಚ್ಛವಾಗಿ, ಸ್ವಸ್ಥವಾಗಿ ಆರೋಗ್ಯವಾಗಿ ಇರಬೇಕೆಂದರೆ ನಾವೆಲ್ಲಾ ಆರೋಗ್ಯಯುತ ಜೀವನ ನಡೆಸಬೇಕು. ಅದಕ್ಕೆ ರೋಗ ಬಂದಾಗ ಆಸ್ಪತ್ರೆಗೆ ಹೋಗುವ ಬದಲು ಅದಕ್ಕಿಂತ ಮುಂಚಿತವಾಗಿಯೇ ನಮ್ಮ ಆರೋಗ್ಯವನ್ನು ನಾವು ಕಾಪಾಡಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ದಿಶಾ ಸಮಿತಿ ಸದಸ್ಯ ಮದಲೂರು ಮೂರ್ತಿ ಮಾಸ್ಟರ್, ಮಹಿಳಾ ಮೋರ್ಚಾ ಅಧ್ಯಕ್ಷೆ ಉಮಾವಿಜಯ್ ರಾಜ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಯಂಜಲಗೆರೆ ಮೂರ್ತಿ, ನಗರ ಮಂಡಲ ಅಧ್ಯಕ್ಷ ಗಿರಿಧರ್, ಗ್ರಾಮಾಂತರ ಮಂಡಲ ಅಧ್ಯಕ್ಷ ಈರಣ್ಣ ಪಟೇಲ್ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಚಿಕ್ಕಮಗಳೂರು ಗಿರಿಧಾಮಗಳಲ್ಲಿ ಪ್ರವಾಸಿಗರ ಕಾರುಬಾರು
ನಾಲ್ಕೈದು ತಿಂಗಳಲ್ಲಿ ಸ್ಥಳೀಯ ಸಂಸ್ಥೆ ಚುನಾವಣೆ : ಡಿಕೆಶಿ