- ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಯತ್ನ । ಮಹಿಳಾ ಮೋರ್ಚಾದ ಕೆಲವರ ವಶ, ಬಿಡುಗಡೆ
ಕನ್ನಡಪ್ರಭ ವಾರ್ತೆ ದಾವಣಗೆರೆ
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ದೆಹಲಿಯ ಜೆಎನ್‌ಯು ಪ್ರಾಧ್ಯಾಪಕ, ಕಾಂಗ್ರೆಸ್ ಸಂಸದ ಡಾ.ಬಿಮೋಲ್ ಅಕೋಯಿಜಮ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವ ಜೊತೆಗೆ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.ನಗರದ ಎಸ್.ನಿಜಲಿಂಗಪ್ಪ ಬಡಾವಣೆಯ ಅಮರ್ ಜವಾನ್ ಪಾರ್ಕ್ ವೃತ್ತದ ಬಳಿಯಿಂದ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಚೇತನಾ ಬಾಯಿ ಶಿವಕುಮಾರ, ರಾಜ್ಯ ಉಪಾಧ್ಯಕ್ಷೆ ಎಚ್.ಸಿ.ಜಯಮ್ಮ ಇತರರ ನೇತೃತ್ವದ ಪ್ರತಿಭಟನಾ ಮೆರವಣಿಗೆ ಕಾಂಗ್ರೆಸ್ ಜಿಲ್ಲಾ ಕಚೇರಿಯತ್ತ ತೆರಳುತ್ತಿತ್ತು. ಈ ವೇಳೆ ಸರ್ಕಾರಿ ನೌಕರರ ಸಮುದಾಯ ಭವನ ಬಳಿ ತಿರುವಿನಲ್ಲಿ ಮಹಿಳಾ ಪೊಲೀಸರು ಪ್ರತಿಭಟನಾಕಾರರನ್ನು ತಮ್ಮ ವಶಕ್ಕೆ ಪಡೆದು, ಪೊಲೀಸ್ ಕವಾಯಿತು ಮೈದಾನಕ್ಕೆ ಕರೆದೊಯ್ದರು. ಬಳಿಕ ಕೆಲ ಸಮಯದ ನಂತರ ಬಿಡುಗಡೆ ಮಾಡಿದರು.
ಜೆಡಿಎಸ್ ಜಿಲ್ಲಾಧ್ಯಕ್ಷೆ ಗಾಯತ್ರಿ, ಬಿಜೆಪಿ ಮಹಿಳಾ ಮೋರ್ಚಾದ ಮುಖಂಡರಾದ ದೇವೀರಮ್ಮ, ವೀಣಾ ನಂಜಪ್ಪ, ಭಾಗ್ಯ ಪಿಸಾಳೆ, ರೇಣುಕಾ ಕೃಷ್ಣ, ಗೌರಮ್ಮ ಪಾಟೀಲ, ಮಮತಾ ಗೌಡ, ದಾಕ್ಷಾಯಣಿ ಅಂದಾನಪ್ಪ, ಲಕ್ಷ್ಮೀ ಉಮೇಶ, ಕಮಲ, ಗೀತಾ, ಚಂದ್ರಕಲಾ, ನೀತು ನಂದೀಶ, ಮಾಯಕೊಂಡ ಲತಾ, ಲಕ್ಷ್ಮೀ, ಅಕ್ಕಮ್ಮ, ಸುಶೀಲಮ್ಮ, ಜಿಲ್ಲಾಧ್ಯಕ್ಷ ಮೆಳ್ಳೆಕಟ್ಟೆ ಎ.ಇ.ನಾಗರಾಜ, ಪ್ರಧಾನ ಕಾರ್ಯದರ್ಶಿ ಆರ್.ಲಕ್ಷ್ಮಣ, ಯುವ ಮೋರ್ಚಾ ಅಧ್ಯಕ್ಷ ರಾಕೇಶ ಬಜರಂಗಿ, ಮಟ್ಟಿಕಲ್ಲು ಕರಿಬಸಪ್ಪ, ಎಚ್.ಎನ್.ಹಾಲೇಶ, ತಾರಕೇಶ ನಾಯ್ಕ ಇತರರು ಇದ್ದರು.
(ಟಾಪ್ ಕೋಟ್)
- ಎಚ್.ಸಿ.ಜಯಮ್ಮ, ರಾಜ್ಯ ಉಪಾಧ್ಯಕ್ಷೆ.
-13ಕೆಡಿವಿಜಿ5, 6, 7: