ನಾಗೇಂದ್ರ ವಿರುದ್ಧ ಮುಂದುವರಿದ ಬಿಜೆಪಿ ಧರಣಿ

KannadaprabhaNewsNetwork |  
Published : Aug 20, 2026, 04:15 AM IST
ಬೆಳಗಾವಿ  | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಹೋಬಳಿಗಳಲ್ಲಿ ರಸ್ತೆ ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಎಚ್ಚರಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಪರಿಶಿಷ್ಟ ಪಂಗಡದ ಜನರ ಕಲ್ಯಾಣಕ್ಕಾಗಿ ಮೀಸಲಿಟ್ಟ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪ ಎದುರಿಸುತ್ತಿರುವ ಸಚಿವ ಬಿ.ನಾಗೇಂದ್ರ ಕೂಡಲೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಇಲ್ಲವಾದರೆ ಜಿಲ್ಲೆಯ ಎಲ್ಲ ತಾಲೂಕು ಹಾಗೂ ಹೋಬಳಿಗಳಲ್ಲಿ ರಸ್ತೆ ಬಂದ್ ಮಾಡಿ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ ಎಚ್ಚರಿಸಿದರು.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಬಿಜೆಪಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಬುಧವಾರ ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಈ ವೇಳೆ ಮಾತನಾಡಿದ ಅವರು, ಹಣದ ದುರ್ಬಳಕೆಯ ಪ್ರಕರಣ ರಾಜ್ಯದ ಜನರಿಗೆ ತಿಳಿದಿದೆ. ಪ್ರಕರಣದಲ್ಲಿ ಆರೋಪ ಕೇಳಿಬಂದಿರುವ ನಾಗೇಂದ್ರ ಅವರು ಸಚಿವ ಸ್ಥಾನದಲ್ಲಿ ಮುಂದುವರಿಯಲು ನೈತಿಕವಾಗಿ ಅರ್ಹರಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಾಗೇಂದ್ರರನ್ನು ಸಮರ್ಥಿಸಿಕೊಳ್ಳುವುದನ್ನು ಬಿಟ್ಟು ನೈತಿಕ ಹೊಣೆ ಹೊತ್ತು ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಮಾಜಿ ಶಾಸಕ ಅರವಿಂದ ಪಾಟೀಲ ಮಾತನಾಡಿ, ಸಚಿವ ನಾಗೇಂದ್ರ ಅವರು ₹187 ಕೋಟಿ ಹಗರಣ ಪ್ರಕರಣದಲ್ಲಿ ಜೈಲಿಗೆ ಹೋಗಿ ಬಂದಿದ್ದಾರೆ. ಇಂತಹ ಪ್ರಕರಣದ ಆರೋಪಿಯನ್ನು ಮತ್ತೆ ಸಚಿವರನ್ನಾಗಿ ಮಾಡಿರುವುದು ಕಾಂಗ್ರೆಸ್ ಸರ್ಕಾರದ ಧೋರಣೆಗೆ ಸಾಕ್ಷಿಯಾಗಿದೆ. ಆರೋಪ ಎದುರಿಸುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಸಚಿವ ಸ್ಥಾನ ನೀಡುವ ಮೂಲಕ ಕಾಂಗ್ರೆಸ್ ಕುಮ್ಮಕ್ಕು ನೀಡುತ್ತಿದೆ. ರಾಜ್ಯದಲ್ಲಿ ತುಘಲಕ್ ಆಡಳಿತ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಶಾಸಕ ಅಭಯ ಪಾಟಿಲ, ಮಾಜಿ ಶಾಸಕ ಸಂಜಯ ಪಾಟೀಲ, ನಿತಿನ್ ಚೌಗಲೆ, ಬಸವರಾಜ ಸಾಣಿಕೊಪ್ಪ, ಪ್ರಮೋದ ಕೋಚೇರಿ, ಜಗದೀಶ ಬೂದಿಹಾಳ, ಸಚಿನ್ ಕಡಿ, ಧನಶ್ರೀ ದೇಸಾಯಿ, ಮಲ್ಲಪ್ಪ ಮಾರಿಹಾಳ, ಯುವರಾಜ ಜಾಧವ್, ಯಲ್ಲೇಶ ಕೋಲಕಾರ, ಧನಂಜಯ ಜಾಧವ್, ಸಂತೋಷ ದೇಶನೂರ, ಯುವರಾಜ ಕದಂ, ಚೇತನ್ ಅಂಗಡಿ, ಮನೋಜ ಪಾಟೀಲ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಧರಣಿಯಲ್ಲಿ ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹಾಲುಮತದವರೇ ಜಿಪಂ ಅಧ್ಯಕ್ಷರಾಗಲು ಎಂಬಿಪಾ ಕಾರಣ: ಸೋಮನಾಥ ಕಳ್ಳಿಮನಿ
ಮಾನವೀಯತೆಯೇ ಎಲ್ಲ ಧರ್ಮಗಳ ತಿರುಳು