ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಜಿಲ್ಲಾ ಕಾಂಗ್ರೆಸ್ ಸಮಿತಿ ಆಯೋಜಿಸಿದ್ದ ವೋಟ್ ಬಚಾವೋ-ದೇಶ್ ಬಚಾವೋ ಆಂದೋಲನದಲ್ಲಿ ಪಾಲ್ಗೊಂಡು ಮಾತನಾಡಿದರು.
ಗುಜರಾತ್ ಮಾದರಿ ಅಭಿವೃದ್ಧಿ ಮಾಡುವುದಾಗಿ ಹೇಳಿ ಪ್ರಧಾನಿ ಮೋದಿ ಅಧಿಕಾರಕ್ಕೆ ಬಂದರು. ಕಪ್ಪು ಹಣವನ್ನು ಹೊರತಂದು ದೇಶದ ಪ್ರತಿಯೊಬ್ಬ ಪ್ರಜೆಯ ಬ್ಯಾಂಕ್ ಖಾತೆಗೆ ೧೫ ಲಕ್ಷ ರು. ಹಣ ಹಾಕುವುದಾಗಿ ನಂಬಿಸಿದರು. ೨ ಕೋಟಿ ಉದ್ಯೋಗ ಸೃಷ್ಟಿಸುವ ನಾಟಕವಾಡಿದರು. ಭಾರತವನ್ನು ಪ್ರಕಾಶಮಾನವಾಗಿ ಬೆಳಗಿಸುವುದಾಗಿ ಸುಳ್ಳುಗಳನ್ನೇ ಹೇಳಿಕೊಂಡು ಬಂದರೇ ಹೊರತು ಅಭಿವೃದ್ಧಿಗೆ ಪ್ರಧಾನಿ ಮೋದಿ ಯಾವುದೇ ಕೊಡುಗೆಯನ್ನೂ ನೀಡಲಿಲ್ಲ ಎಂದು ದೂಷಿಸಿದರು.ಹುಸಿ ಭರವಸೆಗಳನ್ನೇ ಜನರ ಮುಂದಿಟ್ಟು ೧೨ ವರ್ಷಗಳಿಂದಲೂ ಅಧಿಕಾರ ನಡೆಸಿಕೊಂಡು ಬಂದಿರುವ ನರೇಂದ್ರ ಮೋದಿ ಅವರು ಮುಂದಿನ ದಿನಗಳಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾದರೆ ಏನಾದರೂ ತಂತ್ರ ಮಾಡಬೇಕೆಂದು ಆಲೋಚಿಸುತ್ತಿರುವಾಗಲೇ ಅವರ ಕಣ್ಣಿಗೆ ಬಿದ್ದದ್ದು ಮತಪಟ್ಟಿ. ಬಿಜೆಪಿ ತಾಳಕ್ಕೆ ಕುಣಿಯುವ ಜ್ಞಾನೇಶ್‌ಕುಮಾರ್‌ನನ್ನು ಚುನಾವಣಾ ಆಯೋಗದ ಮುಖ್ಯ ಆಯುಕ್ತನನ್ನಾಗಿ ಮಾಡಿ ಎಸ್‌ಐಆರ್ ಪ್ರಕ್ರಿಯೆಗೆ ಚಾಲನೆ ಕೊಟ್ಟರು. ಆ ಮೂಲಕ ಕಾಂಗ್ರೆಸ್ ಪರವಾಗಿದ್ದ ಕೋಟ್ಯಂತರ ಮತದಾರರನ್ನು ಮತದಾರರ ಪಟ್ಟಿಯಿಂದ ಕೈಬಿಡುವ ಮೂಲಕ ಪ್ರಜಾಪ್ರಭುತ್ವಕ್ಕೆ ದ್ರೋಹವೆಸಗಿದ್ದಾರೆ. ಅಸಂಖ್ಯಾತ ದಲಿತ ಸಮುದಾಯದವರನ್ನು ಮತಹಕ್ಕಿನಿಂದ ವಂಚಿತರನ್ನಾಗಿದ್ದಾರೆ. ಬಿಜೆಪಿ ನಿಲುವಿನ ವಿರುದ್ಧ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ನಡೆಸಬೇಕಿದೆ ಎಂದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ನಡೆಸಿರುವ ಎಸ್‌ಐಆರ್‌ನ್ನು ರದ್ದುಗೊಳಿಸಬೇಕು. ಎಸ್‌ಐಆರ್ ಸಮರ್ಪಕವಾಗಿ ನಡೆಯದೆ ನೈಜ ಮತದಾರರನ್ನು ಮತಪಟ್ಟಿಯಿಂದ ಕೈಬಿಡಲಾಗಿದೆ. ಮುಂದಿನ ಚುನಾವಣೆಯಲ್ಲಿ ವಿದ್ಯುನ್ಮಾನ ಮತಯಂತ್ರಗಳಿಗೆ ಬದಲಾಗಿ ಬ್ಯಾಲೆಟ್ ಪೇಪರ್‌ಗಳಲ್ಲಿ ಚುನಾವಣೆಯನ್ನು ನಡೆಸಬೇಕು ಎಂದು ಪ್ರತಿಭಟನೆಯಲ್ಲಿ ಒತ್ತಾಯಿಸಿದರು.