ಪಶ್ಚಿಮ ಬಂಗಾಳದಲ್ಲಿನ ಬಿಜೆಪಿ ಜಯಭೇರಿ ಹಿಂದೂ ಧರ್ಮದ ಗೆಲುವು: ಪ್ರಮೋದ್ ಮುತಾಲಿಕ್

KannadaprabhaNewsNetwork |  
Published : May 06, 2026, 01:45 AM IST
5ಕೆಎಂಎನ್ ಡಿ22 | Kannada Prabha

ಸಾರಾಂಶ

ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಹಿಂದು ಧರ್ಮದ ಗೆಲುವು. ಮಹನೀಯರು, ಸಂತರು ಜನಿಸಿದ ನಾಡಿನಲ್ಲಿ ಇಂದು ಧರ್ಮ ಸ್ಥಾಪನೆಯಾಗಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿ ಅಧಿಕಾರಕ್ಕೆ ಬಂದಿರುವುದು ಹಿಂದೂ ಧರ್ಮದ ಗೆಲುವಾಗಿದೆ ಎಂದು ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ಮೈಸೂರಿನಿಂದ ಕಾರ್ಯನಿಮಿತ ಬೆಂಗಳೂರಿಗೆ ತೆರಳುವ ಮಾರ್ಗ ಮಧ್ಯೆ ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಪಶ್ಚಿಮ ಬಂಗಾಳದ ಬಿಜೆಪಿ ಗೆಲುವು ಹಿಂದು ಧರ್ಮದ ಗೆಲುವು. ಮಹನೀಯರು, ಸಂತರು ಜನಿಸಿದ ನಾಡಿನಲ್ಲಿ ಇಂದು ಧರ್ಮ ಸ್ಥಾಪನೆಯಾಗಿದೆ ಎಂದು ಅಭಿಪ್ರಾಯಪಟ್ಟರು.

ಮೂಡಲ ಬಾಗಿಲು ಹನುಮಾನ್ ಸಮಿತಿ ಪ್ರಮುಖ ಚಂದನ್ ಮಾತನಾಡಿ, ಕಾಳಿ ಮಾತೆ ನೆಲೆಸಿದ ನಾಡಿನಲ್ಲಿ ಹಿಂದೂ ಧರ್ಮಕ್ಕೆ ಜಯ ಸಿಕ್ಕಿದೆ, ಪಶ್ಚಿಮ ಬಂಗಾಳದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿದ್ದ ದೌರ್ಜನ್ಯಕ್ಕೆ ಮುಕ್ತಿ ಸಿಕ್ಕಿದ್ದು ಸಂತಸದ ವಿಚಾರ ಎಂದರು.

ಈ ವೇಳೆ ಶ್ರೀರಂಗಪಟ್ಟಣ ನಗರ ಕಾರ್ಯಕರ್ತರಾದ ಗಿರೀಶ್, ಶಿವು, ಶರತ್ ಹರ್ಷ, ಸನತ್ ಶಂಕರ್, ಲಕ್ಷ್ಮೀನಾರಾಯಣ, ಶ್ರೀನಿವಾಸ್, ರಾಜು, ರವಿ ಸೇರಿ ಹಲವು ಕಾರ್ಯಕರ್ತರು ಉಪಸ್ಥಿತರಿದ್ದರು.

-------------

5ಕೆಎಂಎನ್ ಡಿ22

ಶ್ರೀರಂಗಪಟ್ಟಣದ ಕುವೆಂಪು ವೃತ್ತದಲ್ಲಿ ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ ಪ್ರಮೋದ್ ಮುತಾಲಿಕ್ ಅವರನ್ನು ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಅಭಿನಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪಂಚಮಸಾಲಿ ಸಮಾಜದ ಸಂಕಲ್ಪ ಈಡೇರಿಸದ ಟ್ರಸ್ಟ್
ಗುಡಾಳ್‌ನಲ್ಲಿ ನೀರಿನ ಬವಣೆ ನೀಗಿಸಿದ ಶಾಸಕ ಬಸವಂತಪ್ಪ