ಬಿಜೆಪಿ ಗೆಲುವಿನಿಂದ ಅಭಿವೃದ್ಧಿಯ ಹೊಸ ಪರ್ವ: ಅಶೋಕ್‌

KannadaprabhaNewsNetwork |  
Published : Apr 09, 2024, 12:53 AM ISTUpdated : Apr 09, 2024, 08:13 AM IST
ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲದಲ್ಲಿ ನಡೆದ ಬಿಜೆಪಿ ಚುನಾವಣಾ ಪ್ರಚಾರ ಸಭೆಯನ್ನು ಅಭ್ಯರ್ಥಿ ಡಾ.ಕೆ.ಸುಧಾಕರ್ ಉದ್ಘಾಟಿಸಿದರು. ವಿಪಕ್ಷ ನಾಯಕ ಆರ್.ಅಶೋಕ್ ಮತ್ತಿತರರಿದ್ದಾರೆ. | Kannada Prabha

ಸಾರಾಂಶ

ದೇಶದ ಭವಿಷ್ಯ ಮತ್ತಷ್ಟು ಸದೃಢಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಬೇಕಿದೆ. ಮೂರನೇ ಬಾರಿಗೆ ಮೋದಿಯವರನ್ನು ಗೆಲ್ಲಿಸುವ ಮೂಲಕ ವಿಕಸಿತ ಭಾರತದ ಜೊತೆಗೆ ವಿಕಸಿತ ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದು ಆರ್.ಅಶೋಕ್ ಹೇಳಿದರು.

ದೊಡ್ಡಬಳ್ಳಾಪುರ

ರಾಜ್ಯದಲ್ಲಿ ಕಾಂಗ್ರೆಸ್‌ನ ದುರಾಡಳಿತ ಅಂತ್ಯಗೊಳಿಸಲು ಹಾಗೂ ಕಳೆದ 10 ತಿಂಗಳಲ್ಲಿ ಕಾಣದ ಅಭಿವೃದ್ಧಿಯನ್ನು ಮತ್ತೆ ತರಲು ಬಿಜೆಪಿ ಆಡಳಿತ ಅಗತ್ಯವಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಹೇಳಿದರು.

ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಹೋಬಳಿ, ದೊಡ್ಡಬೆಳವಂಗಲ ಹೋಬಳಿ ಮತ್ತು ಸಾಸಲು ಹೋಬಳಿ ವ್ಯಾಪ್ತಿಯ ವಿವಿಧೆಡೆ ಸೋಮವಾರ ನಡೆದ ಬಿಜೆಪಿ-ಜೆಡಿಎಸ್‌ ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ದೇಶದ ಭವಿಷ್ಯ ಮತ್ತಷ್ಟು ಸದೃಢಗೊಳಿಸಲು ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಬೇಕಿದೆ. ಮೂರನೇ ಬಾರಿಗೆ ಮೋದಿಯವರನ್ನು ಗೆಲ್ಲಿಸುವ ಮೂಲಕ ವಿಕಸಿತ ಭಾರತದ ಜೊತೆಗೆ ವಿಕಸಿತ ದೊಡ್ಡಬಳ್ಳಾಪುರ-ಚಿಕ್ಕಬಳ್ಳಾಪುರಕ್ಕೆ ಎಲ್ಲರೂ ಕೈ ಜೋಡಿಸಬೇಕು ಎಂದರು.

ಮೈತ್ರಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಮಾತನಾಡಿ, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗ್ಯಾರಂಟಿಗಳಿಂದ ಜನರನ್ನು ದಿಕ್ಕುತಪ್ಪಿಸಿ ಗೆದ್ದಿದೆ. ಈ ಲೋಕಸಭೆ ಚುನಾವಣೆಯಲ್ಲಿ ಮೋಸಕ್ಕೆ ಅವಕಾಶ ಮಾಡಿಕೊಡದೆ ನರೇಂದ್ರ ಮೋದಿಯವರನ್ನು ಗೆಲ್ಲಿಸಬೇಕು. ಈ ಬಾರಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಮಣ್ಣಿನ ಮಗ ಎಚ್‌.ಡಿ.ದೇವೇಗೌಡರ ಸಮಾಗಮವಾಗಿದ್ದು, ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಕಂಡುಬಂದಿದೆ. ರಾಜ್ಯದ ಆರೂವರೆ ಕೋಟಿ ಜನರ ಏಳಿಗೆಗಾಗಿ ಈ ಸಮಾಗಮ ನಡೆದಿದೆ ಎಂದರು.

ಶಾಶ್ವತ ನೀರಾವರಿಗೆ ಆದ್ಯತೆ:

ದೊಡ್ಡಬಳ್ಳಾಪುರ ಸೇರಿ ಬಯಲುಸೀಮೆ ಭಾಗಕ್ಕೆ ಶಾಶ್ವತ ನೀರಾವರಿ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರುವುದು ತಮ್ಮ ಮೊದಲ ಆದ್ಯತೆಯಾಗಿದೆ. ದೊಡ್ಡಬಳ್ಳಾಪುರಕ್ಕೆ ಈಗಾಗಲೇ ಜಿಲ್ಲಾಸ್ಪತ್ರೆ ನೀಡಲಾಗಿದೆ. ಜಕ್ಕಲಮಡಗು ಜಲಾಶಯದಿಂದ ದೊಡ್ಡಬಳ್ಳಾಪುರದ ಜನರಿಗೆ ಕುಡಿಯುವ ನೀರು ನೀಡಲಾಗುತ್ತಿದೆ ಎಂದು ವಿವರಿಸಿದರು.

ಕಾಂಗ್ರೆಸ್‌ ಕಾಲಿಟ್ಟರೆ ಬರ!:

ಕಾಂಗ್ರೆಸ್‌ ರಾಜ್ಯಕ್ಕೆ ಕಾಲಿಟ್ಟರೆ ಬರಗಾಲ ಬರುತ್ತದೆ, ರೈತರಿಗೆ ಬೆಳೆ ನಷ್ಟವಾದರೂ ಪರಿಹಾರ ನೀಡಿಲ್ಲ. ಬಿಜೆಪಿ ಸರ್ಕಾರವಿದ್ದಾಗ ಪ್ರವಾಹದಿಂದ ಬೆಳೆ ನಷ್ಟವಾದಾಗ, 48 ಗಂಟೆಯಲ್ಲಿ ಅಂದಾಜು ತಿಳಿದು ಒಂದೇ ತಿಂಗಳಲ್ಲಿ ರೈತರ ಬ್ಯಾಂಕ್‌ ಖಾತೆಗೆ ಎರಡು ಪಟ್ಟು ಅಧಿಕ ಪರಿಹಾರ ನೀಡಲಾಗಿತ್ತು. ಕಾಂಗ್ರೆಸ್‌ ಸರ್ಕಾರವನ್ನು ಈ ಬಗ್ಗೆ ಕೇಳಿದರೆ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತಾರೆ ಎಂದರು.

ದಲಿತರ ಹಣ ಗ್ಯಾರೆಂಟಿಗಳಿಗೆ ಬಳಕೆ:

ದಲಿತರಿಗೆ ಮೀಸಲಿಟ್ಟ ಹಣವನ್ನು ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳಿಗೆ ಬಳಸಿದೆ. ಆದರೆ ಪ್ರಧಾನಿ ಮೋದಿ ಮಹಿಳೆಯರು, ಯುವಜನರು, ಮಕ್ಕಳಿಗೆ ಉತ್ತಮ ಯೋಜನೆ ನೀಡಿದ್ದಾರೆ. ಆದ್ದರಿಂದ ಈ ಬಾರಿ ಮೋದಿ ಗ್ಯಾರಂಟಿಗೆ ಮತ ನೀಡಬೇಕೆಂದು ಜನರು ತೀರ್ಮಾನಿಸಿದ್ದಾರೆ. ಪ್ರಧಾನಿ ಮೋದಿಯವರು ಹೇಳುವಂತೆ ರೈತರು, ಮಹಿಳೆಯರು, ಯುವಜನರು ಹಾಗೂ ಕಾರ್ಮಿಕರು ಎಂಬ ನಾಲ್ಕು ವರ್ಗಗಳಿಗೆ ನಾವು ಹೆಚ್ಚು ಗಮನ ನೀಡುತ್ತೇವೆ ಎಂದರು.

ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಶಾಸಕ ಧೀರಜ್ ಮುನಿರಾಜು, ಮಾಜಿ ಶಾಸಕ ನಿಸರ್ಗ ನಾರಾಯಣಸ್ವಾಮಿ, ಜಿ.ಕೆ.ಕೃಷ್ಣಾ ರೆಡ್ಡಿ, ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ, ಜೆಡಿಎಸ್‌ ಜಿಲ್ಲಾಧ್ಯಕ್ಷ ಬಿ.ಮುನೇಗೌಡ ಸೇರಿ ಬಿಜೆಪಿ-ಜೆಡಿಎಸ್ ಪಕ್ಷಗಳ ವಿವಿಧ ಘಟಕಗಳ ಮುಖ್ಯಸ್ಥರು, ಪದಾಧಿಕಾರಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲಿವ್‌-ಇನ್‌ ಸಂಬಂಧಕ್ಕೆ ಜನಿಸಿದ ಮಗುವಿಗೆ ತಾಯಿ ಸರ್‌ನೇಮ್‌!
ಪಿಎಂ ಹೇಳ್ತಿರೋ ಆರೆಂಜ್‌ ಆರ್ಥಿಕತೆ ರಾಜ್ಯದಲ್ಲಿ 2016ಲ್ಲೇ ನೀತಿ ಜಾರಿ: ಡಿಕೆ