ಕನ್ನಡಪ್ರಭ ವಾರ್ತೆ ಸೊರಬ
ಪಟ್ಟಣದ ಬಸ್ ಸ್ಟ್ಯಾಂಡ್ ವೃತ್ತದಲ್ಲಿ ತಾಲೂಕು ಕಾಂಗ್ರೆಸ್ ವತಿಯಿಂದ ದೇಶದಲ್ಲಿ ನಡೆಯುತ್ತಿರುವ ಮತ ಕಳ್ಳತನ ಪ್ರಕರಣ ತಡೆಯುವಂತೆ ಆಗ್ರಹಿಸಿ ಹಮ್ಮಿಕೊಂಡಿದ್ದ ಸಹಿ ಸಂಗ್ರಹ ಅಭಿಯಾನದಲ್ಲಿ ಭಾಗವಹಿಸಿ ಮಾತನಾಡಿದರು.
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಷ್ಟು ಹಿಂದಿನ ಯಾವ ಸರ್ಕಾರವೂ ಮಾಡಿಲ್ಲ. ಸಿಬಿಐ, ಇ.ಡಿ. ಮತ್ತಿತರ ಸಂಸ್ಥೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ. ನ್ಯಾಯಾಂಗ ವ್ಯವಸ್ಥೆಯನ್ನೂ ಹದಗೆಡಿಸಿದೆ. ಈಗ ಮತಕಳ್ಳತನಕ್ಕೂ ಇಳಿದು ಬಿಟ್ಟಿದೆ ಎಂಬುದನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಾಕ್ಷಿ ಸಮೇತ ಸಾಬೀತುಪಡಿಸಿದ್ದಾರೆ. ಇನ್ನು ಮುಂದಾದರೂ ಮತದಾರರು ಜಾಗೃತರಾಗಬೇಕು ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಣ್ಣಪ್ಪ ಹಾಲಘಟ್ಟ ಮಾತನಾಡಿ, ಮತಕಳ್ಳತನದ ಮೂಲಕ ದೇಶದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ. ಇತ್ತೀಚೆಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಶೂ ಎಸೆಯುವ ಪ್ರಯತ್ನ, ಕೇರಳದಲ್ಲಿ ರಾಹುಲ್‌ಗಾಂಧಿಗೆ ಬೆದರಿಕೆ ಹೀಗೆ ದೇಶದಲ್ಲಿ ಭಯದ ವಾತಾವರಣವನ್ನು ಬಿಜೆಪಿ ಸೃಷ್ಠಿಸುತ್ತಿದೆ ಎಂದು ಆರೋಪಿಸಿದರು.
ನಂತರ ಮುಖಂಡರು ಮತ್ತು ಕಾರ್ಯಕರ್ತರು ಕೇಂದ್ರ ಸರ್ಕಾರ ಮತ್ತು ಚುನಾವಣಾ ಆಯೋಗದ ವಿರುದ್ಧ ಆಕ್ರೋಶ ಹೊರಹಾಕಿದರು. ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ಆನವಟ್ಟಿ ಬ್ಲಾಕ್ ಅಧ್ಯಕ್ಷ ಸದಾನಂದಗೌಡ, ಯುವ ಘಟಕದ ಅಧ್ಯಕ್ಷ ಪ್ರವೀಣ್‌ಕುಮಾರ್ ಶಾಂತಗೆರೆ, ಗ್ಯಾರಂಟಿ ಯೋಜನೆ ಸಮಿತಿ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ, ಬಗರ್‌ಹುಕುಂ ಸಮಿತಿ ಅಧ್ಯಕ್ಷ ಎಂ.ಡಿ. ಶೇಖರ್, ಪುರಸಭೆ ಸದಸ್ಯರಾದ ಅಫ್ರಿನಾ ಬಾನು, ಸುಲ್ತಾನಾ ಬೇಗಂ, ಮುಖಂಡರಾದ ಪ್ರಕಾಶ್ ಹಳೆಸೊರಬ, ಶ್ರೀಕಾಂತ್ ಚಿಕ್ಕಶಕುನ, ಪ್ರಶಾಂತ್ ಮೇಸ್ತಿç, ರಾಘು ಶಿಗ್ಗಾ, ಕಲ್ಲಪ್ಪ ಚಿತ್ರಟ್ಟೆಹಳ್ಳಿ, ಬಸವೇಶ್ವರ, ಅತಿಕುರ್ ರೆಹಮಾನ್, ಕೆ.ಪಿ.ರಾಜೇಶ್, ಸೇವಾದಳದ ಶಿವಣ್ಣ ಮೊದಲಾದವರು ಹಾಜರಿದ್ದರು.