ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಬಿಜೆಪಿ ಉಪಾಧ್ಯಕ್ಷೆ
ಪಕ್ಷದ ಸಂಘಟನೆಯಲ್ಲಿ ನಾವು ಮುಂಚೂಣಿಯಲ್ಲಿರಬೇಕು. ಪ್ರತಿ ಮನೆಯಲ್ಲಿ ರಾಷ್ಟ್ರಧ್ವಜ ಹಾರಿಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕನಸನ್ನು ನನಸಾಗಿಸಬೇಕು ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ತಿಳಿಸಿದರು.
ಶಿರಸಿಯ ಪಂಡಿತ ದೀನ್ ದಯಾಳ್ ಉಪಾಧ್ಯಾಯ ಸಭಾಭವನದಲ್ಲಿ ನಡೆದ ಬಿಜೆಪಿ ಉತ್ತರ ಕನ್ನಡ ಜಿಲ್ಲಾ ಕಾರ್ಯಕಾರಿಣಿ ಸಭೆಯಲ್ಲಿ ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.ಸಂಘಟನೆಯನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರೂ ಜಾಗೃತರಾಗಬೇಕು. ಏಕ್ ಭಾರತ್ ಶ್ರೇಷ್ಠ ಭಾರತ್ ಎನ್ನುವ ಮೋದಿ ಅವರ ಗುರಿ ಈಡೇರುವಲ್ಲಿ ನಾವೆಲ್ಲ ಕೈಜೋಡಿಸಬೇಕು. ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ನಾವು ಯಶಸ್ವಿಯಾಗಿಸೋಣ ಎಂದು ಹರ್ ಘರ್ ತಿರಂಗಾದ ರಾಜ್ಯ ಸಂಚಾಲಕಿಯೂ ಆಗಿರುವ ರೂಪಾಲಿ ಎಸ್.ನಾಯ್ಕ ತಿಳಿಸಿದರು.
ಅಧ್ಯಕ್ಷತೆ ವಹಿಸಿದ್ದ ಪಕ್ಷದ ಜಿಲ್ಲಾ ಅಧ್ಯಕ್ಷ ಎನ್.ಎಸ್. ಹೆಗಡೆ ಮಾತನಾಡಿದರು.
ಹರ್ ಘರ್ ತಿರಂಗ ಸಂಚಾಲಕ ಸುಬ್ರಾಯ ವಾಳ್ಕೆ ಪ್ರಾಸ್ತಾವಿಕ ಮಾತು ಆಡಿದರು. ಆರ್.ಡಿ. ಹೆಗಡೆ ಎಸ್ ಐ ಆರ್ ಬಗ್ಗೆ ಮಾಹಿತಿ ನೀಡಿದರು.
ಪ್ರತಿ ಮಂಡಲಕ್ಕೆ 500 ಧ್ವಜ ವಿತರಿಸಿದ ರೂಪಾಲಿ
ರಾಜ್ಯದಲ್ಲಿ ಹರ್ ಘರ್ ತಿರಂಗಾ ಅಭಿಯಾನ ಯಶಸ್ವಿಗೊಳಿಸಲು ರೂಪಾಲಿ ಎಸ್.ನಾಯ್ಕ ರಾಜ್ಯದ ವಿವಿಧೆಡೆ ಸಭೆ, ಸಮಾರಂಭಗಳಲ್ಲಿ ಪಾಲ್ಗೊಂಡು ಪಕ್ಷದ ಕಾರ್ಯಕರ್ತರು ಹಾಗೂ ಪದಾಧಿಕಾರಿಗಳಿಗೆ ಅಭಿಯಾನದ ಬಗ್ಗೆ ಸೂಕ್ತ ಮಾಹಿತಿ ನೀಡುತ್ತಿದ್ದಾರೆ.