ಕನ್ನಡಪ್ರಭ ವಾರ್ತೆ ಬೆಂಗಳೂರು
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ರಸ್ತೆ ಗುಂಡಿ ಮುಚ್ಚಿ ಬಿಜೆಪಿಯವರು ಪ್ರತಿಭಟನೆ ಮಾಡುತ್ತಿರುವ ಕುರಿತ ಪ್ರಶ್ನೆಗೆ ಇಬ್ಬರೂ ನಾಯಕರು ಪ್ರತ್ಯೇಕ ಪ್ರತಿಕ್ರಿಯೆ ನೀಡಿದರು.
ಮುಖ್ಯಮಂತ್ರಿಯವರು ಮಾತನಾಡಿ, ಪಾಪ ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಗುಂಡಿ ಮುಚ್ಚಲಿಲ್ಲ. ಈಗ ಮುಚ್ಚುತ್ತಿದ್ದಾರೆ ಮುಚ್ಚಲಿ ಎಂದರು.ಉಪ ಮುಖ್ಯಮಂತ್ರಿ ಮಾತನಾಡಿ, ಬಿಜೆಪಿಯವರು ಗುಂಡಿ ಮುಚ್ಚುತ್ತಿರುವುದು ಬಹಳ ಒಳ್ಳೆಯ ಕೆಲಸ. ನನ್ನ ಮನೆಯ ಮುಂದೆಯೂ ಮುಚ್ಚಲಿ. ಆರ್.ಅಶೋಕ್ ಅವರಿಗೆ ಅಧಿಕಾರದಲ್ಲಿದ್ದಾಗ ಬೆಂಗಳೂರಿನಲ್ಲಿ ಸಣ್ಣ ಪಿಲ್ಲರ್ ಕೂಡ ಹಾಕಲು ಆಗಲಿಲ್ಲ, ಒಂದೇ ಒಂದು ಮೇಲ್ಸೇತುವೆಯನ್ನೂ ಮಾಡಲಿಲ್ಲ. ನಿಮ್ಮ ಕೈಯಲ್ಲಿ ಏನೂ ಮಾಡಲು ಆಗಲಿಲ್ಲ ಎಂದೇ ಜನ ನಮ್ಮ ಕೈಗೆ ಅಧಿಕಾರ ಕೊಟ್ಟಿದ್ದಾರೆ ಎಂದು ತಿರುಗೇಟು ನೀಡಿದರು.
ಶಾಸಕರೇ ತಮ್ಮ ಕ್ಷೇತ್ರಗಳಲ್ಲಿ ಪರಿಶೀಲನೆ ನಡೆಸಿ ಗುಂಡಿಗಳನ್ನು ಮುಚ್ಚಿಸಿಕೊಳ್ಳಲಿ. ಅಧಿಕಾರಿಗಳು ಅವರಿಗೂ ಗೌರವ ನೀಡುತ್ತಾರೆ. ನಾವು ಇದಕ್ಕೆ ಬೇಡ ಎಂದು ಹೇಳುತ್ತೇವೆಯೇ? ಗುಂಡಿಗಳನ್ನು ತರಾತುರಿಯಲ್ಲಿ ಮುಚ್ಚಲು ಆಗುವುದಿಲ್ಲ. ಅದಕ್ಕೊಂದು ವೈಜ್ಞಾನಿಕ ನಿಯಮವಿದೆ. ಬಿಜೆಪಿಯವರು ಪ್ರತಿಭಟನೆ ವೇಳೆ ಗುಂಡಿ ತುಂಬಿದಂತೆ ಮಾಡಲು ಆಗುವುದಿಲ್ಲ ಎಂದು ಹೇಳಿದರು.