ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನ ಗೆಲ್ಲಬೇಕು: ಅಂಬರೀಶ್‌ಗೌಡ

KannadaprabhaNewsNetwork |  
Published : Aug 26, 2026, 01:45 AM IST
01 | Kannada Prabha

ಸಾರಾಂಶ

ಬಿಜೆಪಿ ವ್ಯಕ್ತಿ ಪೂಜೆ ಮಾಡದೇ ಪಕ್ಷ ಸಂಘಟನೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ. ಬಿಜೆಪಿಯಲ್ಲೇ ಇದ್ದು ಪಕ್ಷ ವಿರೋಧಿ ಕೆಲಸ ಮಾಡುತ್ತಿರುವವರ ವಿರುದ್ಧ ಉಸ್ತುವಾರಿಗಳಿಗೆ ದೂರು ನೀಡಿದ್ದೇವೆ. ನಮ್ಮ ಮುಂದಿನ ಗುರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ಹಾಗಾಗಿ ಕಾರ್ಯಕರ್ತರು ಹೆಚ್ಚು ಶ್ರಮವಹಿಸಿದರೆ ಮಾತ್ರ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯ, ತಮ್ಮ ಗ್ರಾಮಗಳಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಪಕ್ಷ ಬಲವರ್ಧನೆ ಮಾಡಿ.

ಕನ್ನಡಪ್ರಭ ವಾರ್ತೆ ದೇವನಹಳ್ಳಿ

ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಗಳಲ್ಲಿ ತಾಲೂಕಿನಾದ್ಯಂತ ೧೫೦ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಎನ್.ಎಲ್.ಅಂಬರೀಶ್‌ಗೌಡ ತಿಳಿಸಿದರು.

ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮದಿನೋತ್ಸವದ ಅಂಗವಾಗಿ ಒಂದು ತಿಂಗಳ ಕಾಲ ನಡೆಯುವ ಸೇವಾ ಪಾಕ್ಷಿಕ ಕಾರ್ಯಕ್ರಮ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಗ್ರಾಮ ಪಂಚಾಯಿತಿ ಚುನಾವಣೆಗಳು ಸಮೀಪಿಸಿದ್ದು ಕಾರ್ಯಕರ್ತರು ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು, ಪ್ರತಿ ಗ್ರಾಮದಲ್ಲೂ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕು, ಕೇಂದ್ರ ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ತಿಳಿಸಿ ಪಕ್ಷಕ್ಕೆ ಹೆಚ್ಚು ಮತಗಳು ಬರುವ ಹಾಗೆ ಮಾಡಬೇಕು. ಪ್ರಧಾನಿ ನರೇಂದ್ರ ಮೋದಿ ಹಾಗೂ ದೀನ್‌ದಯಾಳ್ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಸೆ.೧೭ರಿಂದ ಒಂದು ತಿಂಗಳ ಕಾಲ ತಾಲೂಕಿನಲ್ಲಿ ವಿವಿಧ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಹಾಗೂ ಪಕ್ಷದ ಎಲ್ಲಾ ಕಾರ್ಯಕರ್ತರು ಸಕ್ರಿಯವಾಗಿ ಭಾಗವಹಿಸಿ ಸೇವಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಬೇಕು ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ರಾಮಕೃಷ್ಣಪ್ಪ ಮಾತನಾಡಿ, ಬಿಜೆಪಿ ವ್ಯಕ್ತಿ ಪೂಜೆ ಮಾಡದೇ ಪಕ್ಷ ಸಂಘಟನೆಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದೆ. ಬಿಜೆಪಿಯಲ್ಲೇ ಇದ್ದು ಪಕ್ಷ ವಿರೋಧಿ ಕೆಲಸ ಮಾಡುತ್ತಿರುವವರ ವಿರುದ್ಧ ಉಸ್ತುವಾರಿಗಳಿಗೆ ದೂರು ನೀಡಿದ್ದೇವೆ. ನಮ್ಮ ಮುಂದಿನ ಗುರಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನಗಳನ್ನು ಗೆಲ್ಲಬೇಕು. ಹಾಗಾಗಿ ಕಾರ್ಯಕರ್ತರು ಹೆಚ್ಚು ಶ್ರಮವಹಿಸಿದರೆ ಮಾತ್ರ ಹೆಚ್ಚು ಸ್ಥಾನ ಗೆಲ್ಲಲು ಸಾಧ್ಯ, ತಮ್ಮ ಗ್ರಾಮಗಳಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡಿ ಪಕ್ಷ ಬಲವರ್ಧನೆ ಮಾಡಿ ಎಂದು ಹೇಳಿದರು.

ಸೆ.೧೭ರಿಂದ ಒಂದು ತಿಂಗಳು ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಚಾಲ್ತಿಯಲ್ಲಿದ್ದು ಪ್ರದಾನಿ ನರೇಂದ್ರ ಮೋದಿಯವರು ಮನುಕುಲದ ಸೇವೆ ಭಗವಂತನ ಸೇವೆ ಎಂದು ಭಾವಿಸಿ ತಮ್ಮ ಆಡಳಿತಾವಧಿಯಲ್ಲಿ ಮಹತ್ತರವಾದ ಮಾನವೀಯ ಕಾರ್ಯಗಳನ್ನು ಜಾರಿಗೊಳಿಸುತ್ತಿದ್ದಾರೆ. ಸಮಾಜದ ಬಡವರ, ತುಳಿತಕ್ಕೊಳಗಾದ ವಂಚಿತ ವರ್ಗಗಳ ಸಬಲೀಕರಣ, ರೈತರ ಕಲ್ಯಾಣ, ಅವರ ಆಧ್ಯತೆಯಾಗಿದೆ. ಪರಿಶಿಷ್ಟ ಜಾತಿ, ಪಂಗಡಗಳು ಮತ್ತು ಹಿಂದುಳಿದ ವರ್ಗಗಳ ಸಮಗ್ರ ಅಭಿವೃದ್ಧಿಗೆ ಐತಿಹಾಸಿಕ ಕೆಲಸಗಳನ್ನು ಕಾರ್ಯಗತಗೊಳಿಸುತ್ತಿದ್ದಾರೆ. ಸೆ.೨೫ ರಂದು ಪಂಡಿತ್ ದೀನ್‌ದಯಾಳ್ ಉಪಾಧ್ಯಾಯ ಜಯಂತಿಯಂದು ಅವರ ಕೊಡುಗೆಗಳನ್ನು ಜಿಲ್ಲೆಯ ಎಲ್ಲಾ ಬೂತ್‌ಗಳಲ್ಲಿ ಅಭಿಯಾನ ನಡೆಸಬೇಕು. ಅ.೨ ಮಹಾತ್ಮ ಗಾಂಧಿ ಜಯಂತಿಯಂದು ಅವರ ಪ್ರತಿಮೆಗಳ ಸುತ್ತಲೂ ಸ್ವಚ್ಛತಾ ಅಭಿಯಾನ ಮಾಡಿ ಪುಷ್ಪನಮನ ಸಲ್ಲಿಸಬೇಕು ಎಂದರು.

ರಾಜ್ಯ ಪರಿಷತ್ ಸದಸ್ಯ ದೇಸು ನಾಗರಾಜ್, ಪ್ರಭು, ಬುಳ್ಳಳ್ಳಿ ರಾಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಾಗವೇಣಿ, ಉಪಾಧ್ಯಕ್ಷ ಕೇಶವ, ಪ್ರೇಮ, ತಮ್ಮಯ್ಯಣ್ಣ, ಮಹಿಳಾ ಮೋರ್ಚಾ ತಾಲೂಕು ಅಧ್ಯಕ್ಷ ವಿಜಯ, ಪ್ರಧಾನ ಕಾರ್ಯದರ್ಶಿ ನಯನ, ಎಸ್.ಟಿ ಮೋರ್ಚಾ ತಾಲೂಕು ಅಧ್ಯಕ್ಷ ಕದಿರಪ್ಪ, ನಾಗೇಶ್, ಯುವಮೋರ್ಚಾ ಅಧ್ಯಕ್ಷ ಮೋಹನ್ ಗೌಡ, ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಕಲೇಶಪುರ ವಿಧಾನಸಭಾ ಕ್ಷೇತ್ರದಲ್ಲಿ 18 ಸಾವಿರ ಮತದಾರರು ಹೊರಕ್ಕೆ
ಪಡಿತರ ಕಾರ್ಡ್ ಹೊಂದಿರುವ ಸದಸ್ಯರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿ: ಮೂಡ್ಲೀಗೌಡ