ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಪ್ರಶಾಂತ್ ಕುಕ್ಕೆ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಬಿಜೆಪಿ ಕಾರ್ಯಕರ್ತರು ಐವಾನ್ ಡಿಸೋಜಾ ತಮ್ಮ ಕಾರ್ಯಕರ್ತರಿಗೆ ದೇಶ ವಿರೋಧಿ ಚಟುವಟಿಕೆ ನಡೆಸಲು ಕುಮ್ಮಕ್ಕು ನೀಡುತ್ತಿದ್ದಾರೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸುವ ದುರುದ್ದೇಶವಿದೆ. ಅವರ ವಿರುದ್ಧ ತಕ್ಷಣ ಪ್ರಕರಣ ದಾಖಲು ಮಾಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಆಗ್ರಹಿಸಿದರು.
ಬಾಂಗ್ಲಾ ದೇಶದಲ್ಲಿ ಆದ ಹಿಂಸಾಚಾರದ ಸ್ವರೂಪ ಇಲ್ಲೂ ಆಗುತ್ತದೆ ಎಂಬ ಪ್ರಚೋದಕಾರಿ ಹೇಳಿಕೆ ನೀಡಿರುವ ಐವಾನ್ ಡಿಸೋಜಾ ಅವರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲು ಮಾಡಿಕೊಂಡು ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿದರು.ಇದರ ಜೊತೆ ಸಿಎಂ ಸಿದ್ದರಾಮಯ್ಯ ಕೂಡ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಮಾತನಾಡಿದ ಹರಿಕೃಷ್ಣ ಕೈಯಲ್ಲಿ ಸಂವಿಧಾನ ಹಿಡಿದು ಪರಿಪಾಲಕನಂತೆ ಬಿಂಬಿಸಿಕೊಳ್ಳುವ ರಾಹುಲ್ ಗಾಂಧಿ, ಐವಾನ್ ಹೇಳಿಕೆ ಸಂವಿಧಾನ ಬದ್ಧವಾಗಿದೆಯಾ ಅಥವಾ ಇಲ್ಲವಾ ಎಂಬುದನ್ನು ಸ್ಪಷ್ಟಪಡಿಸಲಿ ಎಂದು ಆಗ್ರಹಿಸಿದರು.