ಅಗತ್ಯ ವಸ್ತುಗಳ ಬೆಲೆ ಏರಿಕೆಗೆ ಬಿಜೆಪಿ ಕಿಡಿ

KannadaprabhaNewsNetwork |  
Published : Nov 25, 2026, 01:45 AM IST
೨೪ಸಿಎಚ್‌ಎನ್೪ | Kannada Prabha

ಸಾರಾಂಶ

ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಪೆಟ್ರೋಲ್, ಡಿಸೇಲ್ ಸೇರಿದಂತೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ವತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು ಭುವನೇಶ್ವರಿ ವೃತ್ತ, ಬಿ.ರಾಚಯ್ಯ ಜೋಡಿ ರಸ್ತೆ ಮೂಲಕ ಜಿಲ್ಲಾಡಳಿತ ಭವನದ ಮುಖ್ಯದ್ವಾರದ ಮುಂಭಾಗ ಕುಳಿತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿ, ಜಿಲ್ಲಾಡಳಿತದ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ ಮಾಜಿ ಸದಸ್ಯ ಪ್ರೊ.ಕೆ.ಆರ್.ಮಲ್ಲಿಕಾರ್ಜುನಪ್ಪ ನಿತ್ಯದ ಆಹಾರ ಸಾಮಗ್ರಿಗಳು, ಹಾಲು, ಬಸ್ ದರ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಜನಸಾಮಾನ್ಯರು, ಕೂಲಿ ಕಾರ್ಮಿಕರು, ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದರು.

ಅಲ್ಲದೇ, ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ವೇತನ ಹಲವು ತಿಂಗಳಿಂದ ಬಂದಿಲ್ಲ. ಬರ ಪೀಡಿತ ಎಂದು ಘೋಷಿಸಿದರೂ ಪರಿಹಾರ ಕೆಲಸ ಆಗಿಲ್ಲ. ಜಾನುವಾರಿಗೆ ಮೇವು, ರೈತರಿಗೆ ಬಿತ್ತನೆ ಬೀಜ ಸಿಕ್ಕಿಲ್ಲ. ಗೋಶಾಲೆಗಳನ್ನು ತೆರೆಯಲಾಗಿಲ್ಲ ಎಂದು ಕಿಡಿಕಾರಿದರು.

ಕಳೆದ ಮೂರು ವರ್ಷಗಳಿಂದ ಎಸ್.ಸಿ, ಎಸ್.ಟಿ ರೈತರಿಗೆ ಕೃಷಿ ಯಂತ್ರ, ಪರಿಕರಗಳಿಗೆ ಸಹಾಯಧನ ಸಿಕ್ಕಿಲ್ಲ. ಚಾಮರಾಜನಗರ ತಾಲೂಕಿನ ಕೆರೆಗಳು ಬರಿದಾಗಿದ್ದು, ಆಲಂಬೂರು ಯೋಜನೆಯಿಂದ ಕೂಡಲೇ ಕೆರೆಗಳಿಗೆ ನೀರು ತುಂಬಿಸಬೇಕು ಎಂದು ಒತ್ತಾಯಿಸಿದರು.ಹೆಚ್ಚಿಸಿರುವ ಬೆಲೆಗಳನ್ನು ಕೂಡಲೇ ಇಳಿಸಬೇಕು ಎಂದು ಆಗ್ರಹಿಸಿದರು.

ಕ್ಷೇತ್ರಾದ್ಯಂತ ಸರ್ಕಾರಿ ಸಾಮ್ಯದ ಗೋಮಾಳಗಳನ್ನು ಗುರುತಿಸಿ ತೆರವುಗೊಳಿಸಿ ಜಾನುವಾರುಗಳಿಗೆ ಅನುಕೂಲವಾಗುವಂತೆ ಮಾಡಿಕೊಡಬೇಕು ಹಾಗೂ ಇನ್ನು ಮುಂದಿನ ದಿನಗಳಲ್ಲಿ ತೀವ್ರ ಬೇಸಿಗೆ ಕಾಲ ಇರುವುದರಿಂದ ಈಗಲಾದರೂ ಮೇವು ಬ್ಯಾಂಕ್ ಹಾಗೂ ಗೋಶಾಲೆಗಳನ್ನು ತೆರೆಯಬೇಕೆಂದು ಎಂದು ಆಗ್ರಹಿಸಿದರು.

ಚಾಮರಾಜನಗರ ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಸ್ಥಳೀಯ ಶಾಸಕರು ವಿಫಲರಾಗಿದ್ದಾರೆ ಎಂದು ಆರೋಪಿಸಿದರು,

ಕಾರ್ಯದರ್ಶಿಗಳಾದ ವೃಷಭೇಂದ್ರಪ್ಪ, ಮೂಡ್ನಾಕೂಡು ಪ್ರಕಾಶ್, ಆನಂದ್ ಭಗೀರಥ, ಬಸವಣ್ಣ, ಶಿವರಾಜ್, ಬುಲೆಟ್ ಚಂದ್ರು, ಮುಖಂಡರಾದ ನೂರೊಂದುಶೆಟ್ಟಿ, ಡಾ.ಬಾಬು, ಹೊಂಗನೂರು ಮಹದೇವಸ್ವಾಮಿ, ಮನೋಜ್ ಪಟೇಲ್, ಸುರೇಶ್, ಬಾಲಸುಬ್ರಹ್ಮಣ್ಯಂ, ಕೋಡಿಉಗನೇ ಮಂಜು, ಶಿವು ವಿರಾಟ್, ಬಸವರಾಜು, ಸೂರ್ಯಕುಮಾರ್, ಕೇಬಲ್ ರಂಗಸ್ವಾಮಿ, ಮಹೇಶ್, ಕಾಡಳ್ಳಿ ಕುಮಾರ್, ಮಂಜುನಾಥ್, ವಿರೇಂದ್ರ, ಇತರರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜಪಾನಿಂದಲೇ ಆಶಾ ಮನವೊಲಿಕೆಗೆ ಸಿಎಂ ಯತ್ನ
ವೈದ್ಯರ ಚೀಟಿ ಇಲ್ಲದೆ ಗರ್ಭಪಾತ ಮಾತ್ರೆಗಳ ಮಾರಾಟ: ಅಧಿಕಾರಿಗಳ ದಾಳಿ