ಬಿಜೆಪಿಯಿಂದ ಸರ್ಕಾರದ ಶವಯಾತ್ರೆ

KannadaprabhaNewsNetwork |  
Published : Sep 25, 2026, 02:15 AM IST
ರಾಜ್ಯ ಸರ್ಕಾರದ ಆರ್ಥಿಕ ನೀತಿಗಳು ಹಾಗೂ ರಾಜ್ಯದ ಹಣಕಾಸು ನಿರ್ವಹಣೆ ಖಂಡಿಸಿ ಬಿಜೆಪಿ ಪಕ್ಷದಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸರ್ಕಾರದ ಶವಯಾತ್ರೆ ಮಾಡುವ ಮೂಲಕ  ಪ್ರತಿಭಟನೆ ನಡೆಸಲಾಯಿತು. | Kannada Prabha

ಸಾರಾಂಶ

ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಸರ್ಕಾರ ಜನರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡಬೇಕು.

ಧಾರವಾಡ:

ರಾಜ್ಯ ಸರ್ಕಾರದ ಆರ್ಥಿಕ ನೀತಿಗಳು ಹಾಗೂ ರಾಜ್ಯದ ಹಣಕಾಸು ನಿರ್ವಹಣೆ ಖಂಡಿಸಿ ಬಿಜೆಪಿಯಿಂದ ಗುರುವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸರ್ಕಾರದ ಶವಯಾತ್ರೆ ಮಾಡುವ ಮೂಲಕ ಪ್ರತಿಭಟನೆ ನಡೆಸಲಾಯಿತು.

ಬಿಜೆಪಿ ಮುಖಂಡ ಜಯತೀರ್ಥ ಕಟ್ಟಿ ಮಾತನಾಡಿ, ರಾಜ್ಯದ ಹಣಕಾಸು ಪರಿಸ್ಥಿತಿ ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಸರ್ಕಾರ ಜನರಿಗೆ ಸ್ಪಷ್ಟವಾದ ಮಾಹಿತಿ ನೀಡಬೇಕು. ರಾಜ್ಯದ ಅಭಿವೃದ್ಧಿಗೆ ಅಗತ್ಯವಿರುವ ಅನುದಾನವನ್ನು ಸಮರ್ಪಕವಾಗಿ ಬಳಕೆ ಮಾಡಿ, ಜನರ ಮೂಲಭೂತ ಅಗತ್ಯಗಳಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಮುಖಂಡರಾದ ತಿಪ್ಪಣ್ಣ ಮಜ್ಜಗಿ ಮಾತನಾಡಿ, ರಾಜ್ಯದ ವಿವಿಧ ಭಾಗಗಳಲ್ಲಿ ಅಭಿವೃದ್ಧಿ ಕಾಮಗಾರಿಗಳು ಹಾಗೂ ಜನಪರ ಯೋಜನೆಗಳಿಗೆ ಅಗತ್ಯ ಅನುದಾನ ದೊರೆಯುತ್ತಿಲ್ಲ ಎಂಬ ಆತಂಕ ಜನರಲ್ಲಿ ಮೂಡಿದೆ. ಸರ್ಕಾರವು ಘೋಷಣೆಗಳಿಗೆ ಸೀಮಿತವಾಗದೆ, ಕಾರ್ಯರೂಪದಲ್ಲಿ ಜನರಿಗೆ ಅನುಕೂಲವಾಗುವಂತೆ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದರು.

ಮಾಜಿ ಮೇಯರ್‌ ಈರೇಶ ಅಂಚಟಗೇರಿ ಮಾತನಾಡಿ, ರಾಜ್ಯದ ಆರ್ಥಿಕ ವ್ಯವಸ್ಥೆ ಸದೃಢವಾಗಿದ್ದಾಗ ಮಾತ್ರ ಅಭಿವೃದ್ಧಿ ಕಾರ್ಯಗಳಿಗೆ ವೇಗ ನೀಡಲು ಸಾಧ್ಯ. ಸಾರ್ವಜನಿಕ ಹಣದ ಬಳಕೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕು. ಜನರಿಗೆ ನೀಡಿರುವ ಭರವಸೆಗಳನ್ನು ಆದ್ಯತೆಯ ಮೇರೆಗೆ ಈಡೇರಿಸಬೇಕು ಎಂದು ಆಗ್ರಹಿಸಿದರು.

ನಿಂಗಪ್ಪ ಸುತಕಟ್ಟಿ ಮಾತನಾಡಿದರು. ಪ್ರತಿಭಟನೆಯಲ್ಲಿ ಮಹೀಂದ್ರ ಕೌತಾಳ, ವಸಂತ ನಾಡಜೋಶಿ, ಬಸವರಾಜ ಗರಗ, ಮಂಜುನಾಥ ಮಲ್ಲಿಗವಾಡ, ಸಂಜಯ ಕಪಠಕರ, ರಾಜು ಕಾಳೆ, ವಿಜಯಾನಂದ ಶೆಟ್ಟಿ, ಶಕ್ತಿ ಹಿರೇಮಠ, ಅನುಪ ಬಿಜವಾಡ, ಶಂಕರ ಶೇಳಕೆ, ಮಂಜುನಾಥ ಕಾಠಕರ, ಮೋಹನ ರಾಮದುರ್ಗ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅರಬ್ಬಿ ಸಮುದ್ರದಲ್ಲಿ ಸಾರ್ವಜನಿಕ ಗಣಪತಿಗಳ ಅದ್ಧೂರಿ ವಿಸರ್ಜನೆ
ಕೊಪ್ಪಳದಲ್ಲಿ ಬಿಜೆಪಿಯಿಂದ ರಾಜ್ಯ ಸರ್ಕಾರದ ಶವಯಾತ್ರೆ