ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಧರಣಿ

KannadaprabhaNewsNetwork |  
Published : Aug 19, 2026, 02:00 AM IST
 | Kannada Prabha

ಸಾರಾಂಶ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಿಂದ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಲಾಯಿತು.

ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಖಂಡರು ಹಾಗೂ ಕಾರ್ಯಕರ್ತರ ಆಕ್ರೋಶ

ಕನ್ನಡಪ್ರಭ ವಾರ್ತೆ ಕಾರವಾರ

ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಿಂದ ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಮಂಗಳವಾರ ಧರಣಿ ನಡೆಸಲಾಯಿತು. ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿದರು.

ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಹಾಗೂ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು, ಪ್ರಕರಣದ ನೈತಿಕ ಹೊಣೆ ಹೊತ್ತು ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು. ಈ ವೇಳೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಹಾಗೂ ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಕಾರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಬೆಳಗ್ಗೆ 10.30ರಿಂದ ಸಂಜೆ 5ರವರೆಗೆ ಧರಣಿ ನಡೆಸಲಾಯಿತು. ಉತ್ತರ ಕನ್ನಡ ಜಿಲ್ಲಾ ಬಿಜೆಪಿಯಿಂದ ಆರಂಭಿಸಲಾಗಿರುವ ಸರಣಿ ಹೋರಾಟದ ಮೊದಲ ದಿನ ಯಲ್ಲಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಮುಖಂಡರು, ಎಸ್ಟಿ ಮೋರ್ಚಾ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಧರಣಿಯಲ್ಲಿ ಮಾಜಿ ಎಂಎಲ್‌ಸಿ ಶಾಂತಾರಾಮ ಸಿದ್ದಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ, ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ, ನಾಗರಾಜ ನಾಯಕ ಸೇರಿದಂತೆ ಬಿಜೆಪಿ ಮುಖಂಡರು, ನಗರಸಭೆ ಮಾಜಿ ಸದಸ್ಯರು ಹಾಗೂ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಂದೇ ಮಾತರಂ ಗೀತೆಗೆ ಅಗೌರವ ತೋರಿದ ಘಟನೆ ಖಂಡನೀಯ
ಕಳಸಾರೋಹಣ, ಸಂಭ್ರಮದ ಪೂರ್ಣಕುಂಭ ಶೋಭಾಯಾತ್ರೆ