ಇಂದು ಹರಿಹರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ರೋಡ್ ಶೋ

KannadaprabhaNewsNetwork |  
Published : Apr 25, 2024, 01:04 AM IST
ಹರಿಹರದಲ್ಲಿ ಬುಧವಾರ ನಡೆದ ಸುದ್ದಿಗೋಷ್ಟಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ಮಾತನಾಡಿದರು. | Kannada Prabha

ಸಾರಾಂಶ

ಲೋಕಸಭಾ ಚುನಾವಣೆ ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರಕ್ಕಾಗಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹರಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎನ್.ರಾಜಶೇಖರ್ ನಾಗಪ್ಪ ಹರಿಹರದಲ್ಲಿ ಹೇಳಿದ್ದಾರೆ.

- ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಮತಯಾಚನೆ: ಜಿಲ್ಲಾಧ್ಯಕ್ಷ ಮಾಹಿತಿ - - - ಕನ್ನಡಪ್ರಭ ವಾರ್ತೆ ಹರಿಹರ

ಲೋಕಸಭಾ ಚುನಾವಣೆ ದಾವಣಗೆರೆ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ ಪರ ಪ್ರಚಾರಕ್ಕಾಗಿ ಗುರುವಾರ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹರಿಹರಕ್ಕೆ ಆಗಮಿಸಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಎನ್.ರಾಜಶೇಖರ್ ನಾಗಪ್ಪ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಸಂಜೆ ೪ ಗಂಟೆಗೆ ನಗರದ ಶಿವಮೊಗ್ಗ ರಸ್ತೆಯ ಪಕ್ಕೀರಸ್ವಾಮಿ ಮಠದ ಮುಂಭಾಗದಿಂದ ರೋಡ್ ಶೋ ಮೂಲಕ ಗಾಂಧಿ ವೃತ್ತಕ್ಕೆ ಆಗಮಿಸುವರು ಎಂದರು.

ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ, ಶಾಸಕ ಬಿ.ಪಿ.ಹರೀಶ್, ಮಾಜಿ ಶಾಸಕ ಎಚ್.ಎಸ್. ಶಿವಶಂಕರ್, ಜೆಡಿಎಸ್ ಜಿಲ್ಲಾಧ್ಯಕ್ಷ ಬಿ.ಚಿದಾನಂದಪ್ಪ, ಮುಖಂಡರಾದ ಎಸ್.ಎಂ. ವೀರೇಶ್ ಹನಗವಾಡಿ, ರೋಡ್‌ ಶೋನಲ್ಲಿ ಭಾಗವಹಿಸುವರು. ತಾಲೂಕಿನ ಬಿಜೆಪಿ, ಜೆಡಿಎಸ್ ಕಾರ್ಯಕರ್ತರು, ಮುಖಂಡರು ಭಾಗವಹಿಸಬೇಕೆಂದು ಮನವಿ ಮಾಡಿದರು.

ದಾವಣಗೆರೆಯಲ್ಲಿ ವೈದ್ಯಕೀಯ ಲಾಬಿ ಕೊನೆಗಾಣಿಸಲು ಸಂಸದ ಜಿ.ಎಂ. ಸಿದ್ದೇಶ್ವರ ಶ್ರಮಿಸುತ್ತಿರುವುದು ಒಂದು ಕುಟುಂಬದವರಿಗೆ ನುಂಗಲಾರದ ತುತ್ತಾಗಿದೆ. ಹರಿಹರದಲ್ಲಿ ರೈಲ್ವೆ ನಿಲ್ದಾಣದ ಅಭಿವೃದ್ಧಿ, ಗ್ರಾಮಗಳಲ್ಲಿನ ಪ್ರತಿ ಮನೆಗೂ ಜಲಜೀವನ್ ಮಿಷನ್ ಯೋಜನೆಯಡಿ ಶುದ್ಧ ಕುಡಿಯುವ ನೀರನ್ನು ಒದಗಿಸುತ್ತಿರುವುದು ಸೇರಿದಂತೆ ಹತ್ತಾರು ಅಭಿವೃದ್ಧಿ ಕೆಲಸಗಳು ನಡೆದಿವೆ ಎಂದರು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿ ಇರುವಾಗ ಭಯೋತ್ಪಾದಕರು ಮೂಲೆಗೆ ಸೇರುತ್ತಾರೆ. ದೇಶದ ಹಾಗೂ ದೇಶವಾಸಿಗಳ ರಕ್ಷಣೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅನಿವಾರ್ಯವಾಗಿದೆ. ಈ ಬಾರಿಯೂ ಮೋದಿ ಅವರು ಪ್ರಧಾನಿ ಆಗಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಐರಣಿ ಅಣ್ಣೇಶ್, ನಗರ ಘಟಕ ಅಧ್ಯಕ್ಷ ಅಜಿತ್ ಸಾವಂತ್, ಗ್ರಾಮಾಂತರ ಅಧ್ಯಕ್ಷ ಲಿಂಗರಾಜ್, ಜೆಡಿಎಸ್ ಯುವ ಘಟಕದ ನಗರಾಧ್ಯಕ್ಷ ಪ್ರೇಮ್ ಕುಮಾರ್ ಅಡಕಿ, ಎಚ್.ಮಂಜನಾಯ್ಕ್, ತುಳಜಪ್ಪ ಭೂತೆ, ರವಿ ರಾಯ್ಕರ್, ಸುನಿಲ್ ಕುಮಾರ್ ಇದ್ದರು.

- - - -೨೪ಎಚ್‌ಆರ್‌ಆರ್೧:

ಹರಿಹರದಲ್ಲಿ ಬುಧವಾರ ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ ನಾಗಪ್ಪ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.

PREV

Recommended Stories

ಭವಿಷ್ಯದಲ್ಲಿ ಆನೇಕಲ್‌ ಭಾಗ ಜಿಬಿಎ ವ್ಯಾಪ್ತಿಗೆ: ಡಿ.ಕೆ.ಶಿವಕುಮಾರ್‌
ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯ ಆಗಲ್ಲ ಎಂಬ ಸಂದೇಶ ರವಾನೆ!