ಕಬ್ಬಿಗೆ ನ್ಯಾಯಯುತ ಬೆಲೆ ನೀಡಲು ಆಗ್ರಹಿಸಿ ಬಿಜೆಪಿ ಮನವಿ

KannadaprabhaNewsNetwork |  
Published : Nov 04, 2026, 01:30 AM IST
3ಎಚ್.ಎಲ್.ವೈ-1: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ, ಸಕ್ಕರೆ ಕಾರ್ಖಾನೆಗಳ ಆರಂಭಿಸಲು ಕ್ರಮ ಕೈಗೊಳ್ಳಬೇಕು ಹಾಗೂ ಹಳಿಯಾಳ ತಾಲೂಕಿನ ರಸ್ತೆಗಳ ದುರಸ್ತಿ ಮಾಡಿಸಬೇಕು,  ಬಹುವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ಕಾಳಿನದಿ ನೀರಾವರಿ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು  ಆಗ್ರಹಿಸಿ ಹಳಿಯಾಳ ಬಿಜೆಪಿ ಘಟಕವು ಎರಡೂ ಪ್ರತ್ಯೇಕ ಮನವಿಯನ್ನು ಮಂಗಳವಾರ ಸಲ್ಲಿಸಿತು.  | Kannada Prabha

ಸಾರಾಂಶ

ಮಂಗಳವಾರ ಹಳಿಯಾಳ ಬಿಜೆಪಿ ಘಟಕದ ವತಿಯಿಂದ ಮಾಜಿ ಶಾಸಕ ಸುನೀಲ ಹೆಗಡೆ ಅವರ ಮುಂದಾಳತ್ವದಲ್ಲಿ ತಾಲೂಕು ಆಡಳಿತ ಸೌಧಕ್ಕೆ ತೆರಳಿ ಗ್ರೇಡ್- 2 ತಹಸೀಲ್ದಾರ್‌ ರವೀಂದ್ರ ನೇಸರಗಿ ಅವರಿಗೆ ಎರಡು ಪ್ರತ್ಯೇಕ ಮನವಿಗಳನ್ನು ಸಲ್ಲಿಸಲಾಯಿತು.

ಹಳಿಯಾಳ: ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿ, ಸಕ್ಕರೆ ಕಾರ್ಖಾನೆಗಳ ಆರಂಭಿಸಲು ಕ್ರಮ ಕೈಗೊಳ್ಳಬೇಕು ಮತ್ತು ತಾಲೂಕಿನ ರಸ್ತೆಗಳ ದುರಸ್ತಿ ಮಾಡಿಸಬೇಕು ಹಾಗೂ ಬಹುವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕಾಳಿನದಿ ನೀರಾವರಿ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಆರಂಭಿಸಲು ಕ್ರಮ ಕೈಗೊಳ್ಳಬೇಕೆಂದು ಹಳಿಯಾಳ ಬಿಜೆಪಿ ಘಟಕವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.

ಮಂಗಳವಾರ ಹಳಿಯಾಳ ಬಿಜೆಪಿ ಘಟಕದ ವತಿಯಿಂದ ಮಾಜಿ ಶಾಸಕ ಸುನೀಲ ಹೆಗಡೆ ಅವರ ಮುಂದಾಳತ್ವದಲ್ಲಿ ತಾಲೂಕು ಆಡಳಿತ ಸೌಧಕ್ಕೆ ತೆರಳಿ ಗ್ರೇಡ್- 2 ತಹಸೀಲ್ದಾರ್‌ ರವೀಂದ್ರ ನೇಸರಗಿ ಅವರಿಗೆ ಎರಡು ಪ್ರತ್ಯೇಕ ಮನವಿಗಳನ್ನು ಸಲ್ಲಿಸಲಾಯಿತು.

ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ಹಾಗೂ ರಾಜ್ಯ ಸರ್ಕಾರದಿಂದ ಪ್ರತಿ ಟನ್‌ಗೆ ₹1,000 ಪ್ರೋತ್ಸಾಹಧನ ನೀಡಬೇಕು. ಎಥೆನಾಲ್ ಪ್ರಮಾಣ, ಕಬ್ಬಿನ ತೂಕ ಮತ್ತು ಸಕ್ಕರೆ ರಿಕವರಿ ಲೆಕ್ಕಾಚಾರದಲ್ಲಿ ಪಾರದರ್ಶಕ ವ್ಯವಸ್ಥೆ ಜಾರಿಗೊಳಿಸಬೇಕು. ಮಳೆ ಕೊರತೆ, ಕುಡಿಯುವ ನೀರು, ವಿದ್ಯುತ್ ಕೊರತೆಯಿಂದ ರೈತರು ಈಗಾಗಲೇ ಸಂಕಷ್ಟದಲ್ಲಿರುವುದರಿಂದ ಕಾರ್ಖಾನೆಗಳ ಆರಂಭ ವಿಳಂಬ ಮಾಡದೆ ಕೂಡಲೇ ಪ್ರಾರಂಭಿಸಬೇಕು.ತಾಲೂಕಿನ ಎಲ್ಲ ಗ್ರಾಮಗಳ ರಸ್ತೆಗಳು ಸಂಪೂರ್ಣ ಹದಗೆಟ್ಟು ದೊಡ್ಡ ಹೊಂಡಗಳು ಬಿದ್ದಿವೆ. ಕಬ್ಬು ಕಟಾವು ಸೀಸನ್ ಆರಂಭವಾಗುತ್ತಿದ್ದು, ತಾಲೂಕಿನಲ್ಲಿ ಟ್ರ್ಯಾಕ್ಟರ್ ಹಾಗೂ ಎರಡು ಟ್ರೇಲರ್ ವಾಹನಗಳ ಸಂಚಾರ ಹೆಚ್ಚಾಗಲಿದೆ. ಹೊಂಡದಿಂದಾಗಿ ಅಪಘಾತದ ಭೀತಿ ಇರುವುದರಿಂದ ಕೂಡಲೇ ಎಲ್ಲ ಕಬ್ಬು ಸಾಗಣೆ ಮಾರ್ಗಗಳನ್ನು ದುರಸ್ತಿ ಮಾಡಬೇಕು. ಇಲ್ಲವಾದಲ್ಲಿ ರಸ್ತೆ ತಡೆ ನಡೆಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಸಿದ್ದಾರೆ.

ಮನವಿ ಸಲ್ಲಿಸುವ ವೇಳೆ ಮಾಜಿ ಶಾಸಕ ಸುನೀಲ ಹೆಗಡೆ, ಬಿಜೆಪಿ ಘಟಕದ ಅಧ್ಯಕ್ಷ ವಿಠ್ಠಲ ಸಿದ್ಧಣ್ಣನವರ, ಜಿಲ್ಲಾ ವಿಶೇಷ ಆಹ್ವಾನಿತ ಮಂಗೇಶ ದೇಶಪಾಂಡೆ, ಪ್ರಧಾನ ಕಾರ್ಯದರ್ಶಿ ಸಂತೋಷ ಘಟಕಾಂಬ್ಳೆ, ಪ್ರಮುಖರಾದ ಬಸಣ್ಣಾ ಕುರುಬಗಟ್ಟಿ, ಸೋನಪ್ಪ ಸುಣಕಾರ, ನಾರಾಯಣ ಕೇಸರೇಕರ, ಸಹದೇವ ಮಿರಾಶಿ, ಮಾರುತಿ ಬೋಸಲೆ, ಉದಯ ಜಾಧವ ಹಾಗೂ ಇತರರು ಇದ್ದರು.ನೀರಾವರಿ ಯೋಜನೆ ವಿಳಂಬವಾದರೆ ದೇಶಪಾಂಡೆ ಮನೆಗೆ ಮುತ್ತಿಗೆನನೆಗುದಿಗೆ ಬಿದ್ದಿರುವ ಕಾಳಿನದಿ ನೀರಾವರಿ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸಮರ್ಪಕವಾಗಿ ಆರಂಭಿಸಬೇಕೆಂದು ಆಗ್ರಹಿಸಲಾಗಿದೆ. ಈ ಹಿಂದೆ ಪ್ರತಿಭಟಿಸಿ ಮನವಿ ಸಲ್ಲಿಸಿದರೂ 2 ತಿಂಗಳಾದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಅಳ್ಳಾವರಕ್ಕೆ 24/7 ಕುಡಿಯುವ ನೀರು ಯೋಜನೆಯನ್ನು ಶಾಸಕ ಆರ್.ವಿ. ದೇಶಪಾಂಡೆ ಉದ್ಘಾಟಿಸಿದ್ದಾರೆ. ಅದೇ ಮಾದರಿಯಲ್ಲಿ ಹಳಿಯಾಳಕ್ಕೂ ಸಮಾನ ಆದ್ಯತೆ ನೀಡಬೇಕು.

ಸಮಸ್ಯೆಗೆ ಸ್ಪಂದಿಸದಿದ್ದಲ್ಲಿ ದೀಪಾವಳಿ ನಂತರ ತಾಲೂಕಿನ 20 ಗ್ರಾಮ ಪಂಚಾಯಿತಿ ವತಿಯಿಂದ ಪ್ರತಿದಿನ ಒಂದೊಂದು ಪಂಚಾಯಿತಿಯಿಂದ ತಹಸೀಲ್ದಾರ್ ಕಚೇರಿ ಮುಂಭಾಗ ಧರಣಿ ಸತ್ಯಾಗ್ರಹ ನಡೆಸಲಾಗುವುದು. 21ನೇ ದಿನದಂದು ಹಳಿಯಾಳದ ಸಮಸ್ತ ರೈತರು ಹಾಗೂ ಸಾರ್ವಜನಿಕರನ್ನು ಒಗ್ಗೂಡಿಸಿ ಶಾಸಕ ದೇಶಪಾಂಡೆ ಅವರ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಎಚ್ಚರಿಸಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಿತ್ತೂರ ಚೆನ್ನಮ್ಮ, ಭುವನೇಶ್ವರಿದೇವಿ ಭಾವಚಿತ್ರದ ಮೆರವಣಿಗೆ
ಫೋಟೋಗಳನ್ನು ಆಧರಿಸಿ ಮಹಿಳೆಯ ಆದಾಯ ನಿರ್ಧರಿಸಲಾಗದು: ಕೋರ್ಟ್‌