----
ಸುವ್ಯವಸ್ಥೆ ಕುಸಿತ
ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಪತನವಾಗಿದೆ. ಒಬ್ಬ ದಲಿತ ಮಹಿಳೆಯನ್ನು ಯಾವುದೇ ಕಾರಣವಿಲ್ಲದೆ ಬೆತ್ತಲೆ ಮೆರವಣಿಗೆ ನಡೆಸಿ, ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಕರ್ನಾಟಕ ಸರ್ಕಾರ ಎಸ್‌ಸಿ, ಎಸ್‌ಟಿ ಮಹಿಳೆಯರಿಗೆ ಭದ್ರತೆ ನೀಡುತ್ತಿಲ್ಲ.- ಡಿ.ವಿ.ಸದಾನಂದಗೌಡ, ಬಿಜೆಪಿ ಸಂಸದ
‘ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಂಪೂರ್ಣ ಪತನವಾಗಿದೆ. ಒಬ್ಬ ದಲಿತ ಮಹಿಳೆಯನ್ನು ಯಾವುದೇ ಕಾರಣವಿಲ್ಲದೆ ಬೆತ್ತಲೆ ಮೆರವಣಿಗೆ ನಡೆಸಿ ಆಕೆಯನ್ನು ಕಂಬಕ್ಕೆ ಕಟ್ಟಿ ಥಳಿಸಲಾಗಿದೆ. ಕರ್ನಾಟಕ ಕಾಂಗ್ರೆಸ್ ಸರ್ಕಾರ ಎಸ್‌ಸಿ, ಎಸ್‌ಟಿ ಮಹಿಳೆಯರಿಗೆ ಯಾವುದೇ ರೀತಿಯ ಭದ್ರತೆಯನ್ನೂ ನೀಡುವುದಿಲ್ಲ’ ಎಂದು ಈ ವೇಳೆ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಕುಟುಕಿದರು.ಬಿಜೆಪಿ ಸತ್ಯಶೋಧನಾ ಸಮಿತಿ:ಕೃತ್ಯವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಶುಕ್ರವಾರ ಖಂಡಿಸಿದ್ದು, ಈ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಯಲು ಐವರು ಮಹಿಳಾ ಸಂಸದರ ಸತ್ಯ ಶೋಧನಾ ಸಮಿತಿಯನ್ನು ರಚಿಸಿದ್ದಾರೆ. ಸಮಿತಿ ಶನಿವಾರ ವಂಟಮೂರಿಗೆ ಭೇಟಿ ನೀಡುವ ನಿರೀಕ್ಷೆಯಿದೆ.ಸಮಿತಿಯ ಐವರು ಮಹಿಳಾ ಸಂಸದೆಯರು ಘಟನಾ ಸ್ಥಳಕ್ಕೆ ತೆರಳಿ ಸತ್ಯಾಸತ್ಯತೆಯನ್ನು ಪರಿಶೀಲಿಸಿ ನಡ್ಡಾ ಅವರಿಗೆ ವರದಿ ಸಲ್ಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ತಿಳಿಸಿದ್ದಾರೆ.ಬಿಜೆಪಿ ಸಂಸದರಾದ ಅಪರಾಜಿತಾ ಸಾರಂಗಿ, ಸುನೀತಾ ದುಗ್ಗಲ್, ಲಾಕೆಟ್ ಚಟರ್ಜಿ, ರಂಜಿತಾ ಕೋಲಿ ಮತ್ತು ಪಕ್ಷದ ರಾಷ್ಟ್ರೀಯ ಕಾರ್ಯದರ್ಶಿ ಆಶಾ ಲಕ್ರಾ ಸತ್ಯ ಶೋಧನಾ ಸಮಿತಿಯಲ್ಲಿದ್ದಾರೆ.‘ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಇಂತಹ ಹೇಯ ಕೃತ್ಯಗಳು ಆಗಾಗ್ಗೆ ಜರುಗುತ್ತಿವೆ ಎಂದು ಕಾಂಗ್ರೆಸ್ ವಿರುದ್ಧ ನಡ್ಡಾ ಕಿಡಿಕಾರಿದ್ದಾರೆ’ ಎಂದು ಅರುಣ್ ಸಿಂಗ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಡಿ.11ರಂದು ಬೆಳಗಾವಿಯ ವಂಟಮೂರಿ ಗ್ರಾಮದಲ್ಲಿ ದಲಿತ ಮಹಿಳೆಯ ಬೆತ್ತಲೆ ಮೆರವಣಿಗೆಯ ಘಟನೆ ನಡೆದಿತ್ತು.