17ರಿಂದ ಬಿಜೆಪಿಯಿಂದ ಸೇವಾ ಪಾಕ್ಷಿಕ: ಕಾರ್ಕಳದಲ್ಲಿ ಕಾರ್ಯಾಗಾರ

KannadaprabhaNewsNetwork |  
Published : Sep 14, 2025, 01:06 AM IST
ಕಾರ್ಕಳ ಮಂಡಲದಲ್ಲಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. | Kannada Prabha

ಸಾರಾಂಶ

ಸೇವಾ ಪಕ್ಷಿಕಾ ಅಭಿಯಾನದಡಿಯಲ್ಲಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ತಪಾಸಣೆ ಶಿಬಿರಗಳು, ವೃಕ್ಷಾರೋಪಣಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಜನಸೇವಾ ಕಾರ್ಯಗಳನ್ನು ನಡೆಸಲಾಗುತ್ತದೆ. ಕಾರ್ಕಳ ಮಂಡಲದ ವಿವಿಧ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಕನ್ನಡಪ್ರಭ ವಾರ್ತೆ ಕಾರ್ಕಳ

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನ್ಮದಿನಾಚರಣೆ ಅಂಗವಾಗಿ ಬಿಜೆಪಿಯಿಂದ ‘ಸೇವಾ ಪಾಕ್ಷಿಕ’ ಸಾಮಾಜಿಕ ಸೇವಾ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಪ್ರಧಾನಿಯವರ ಜನ್ಮದಿನವಾದ ಸೆ.17ರಿಂದ ಮಹಾತ್ಮ ಗಾಂಧಿ ಜನ್ಮದಿನವಾದ ಅ.2ರ ವರೆಗೆ ಅನೇಕ ಸಾಮಾಜಿಕ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಅಂಗವಾಗಿ ಕಾರ್ಕಳ ಮಂಡಲದಲ್ಲಿ ಕಾರ್ಯಾಗಾರ ನಡೆಯಿತು.ಸೇವಾ ಪಕ್ಷಿಕಾ ಅಭಿಯಾನದಡಿಯಲ್ಲಿ ರಕ್ತದಾನ ಶಿಬಿರಗಳು, ಸ್ವಚ್ಛತಾ ಅಭಿಯಾನಗಳು, ಆರೋಗ್ಯ ತಪಾಸಣೆ ಶಿಬಿರಗಳು, ವೃಕ್ಷಾರೋಪಣಾ ಕಾರ್ಯಕ್ರಮಗಳು ಸೇರಿದಂತೆ ವಿವಿಧ ಜನಸೇವಾ ಕಾರ್ಯಗಳನ್ನು ನಡೆಸಲಾಗುತ್ತದೆ. ಕಾರ್ಕಳ ಮಂಡಲದ ವಿವಿಧ ಭಾಗಗಳಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಅಧ್ಯಕ್ಷ ನವೀನ್ ನಾಯಕ್ ತಿಳಿಸಿದರು.ಈ ಅಭಿಯಾನವು ‘ಸೇವೆ, ಸುಶಾಸನ ಮತ್ತು ಗರೀಬ್ ಕಲ್ಯಾಣ’ ಎಂಬ ಪಾರ್ಟಿಯ ಪ್ರಮುಖ ತತ್ವದ ಆಧಾರದ ಮೇಲೆ ‘ಸೇವೆ ಪರಮ ಧರ್ಮ’ ಎಂಬ ಮನೋಭಾವದಿಂದ ಸಮಾಜದ ವಿವಿಧ ವರ್ಗಗಳನ್ನು ಸಂಪರ್ಕಿಸಿ, ಜನರ ಹಿತಕ್ಕಾಗಿ ಸೇವೆ ಸಲ್ಲಿಸುವ ಉದ್ದೇಶವನ್ನು ಹೊಂದಿದೆ. ಮುಂದಿನ ದಿನಗಳಲ್ಲಿ ಕಾರ್ಕಳ ಮಂಡಲದ ವಿವಿಧ ಪ್ರದೇಶಗಳಲ್ಲಿ ಸ್ವಚ್ಛತಾ ಅಭಿಯಾನ, ಆರೋಗ್ಯ ತಪಾಸಣೆ ಶಿಬಿರ ಹಾಗೂ ಯುವಜನರನ್ನು ಒಳಗೊಂಡ ಕಾರ್ಯಕ್ರಮಗಳನ್ನು ನಡೆಸಲಾಗುವುದು ಎಂದು ಹೇಳಿದ್ದಾರೆ.ಈ ಕಾರ್ಯಾಗಾರದಲ್ಲಿ ಜಿಲ್ಲಾ ಉಪಾಧ್ಯಕ್ಷ ಮಹಾವೀರ ಹೆಗ್ಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಮುಖಂಡರಾದ ಮಣಿರಾಜ್ ಶೆಟ್ಟಿ, ಸೇವಾ ಪಕ್ಷಿಕಾದ ಮಂಡಲ ಸಂಚಾಲಕರಾದ ಸತೀಶ್ ಬೋಳ, ರವೀಂದ್ರ ಕುಮಾರ್, ಪ್ರವೀಣ್ ಸಾಲಿಯಾನ್, ವಿವಿಧ ಶಕ್ತಿಕೇಂದ್ರಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಮೋರ್ಚಾಗಳ ಅಧ್ಯಕ್ಷರು ಹಾಗೂ ಪ್ರಧಾನ ಕಾರ್ಯದರ್ಶಿಗಳು ಹಾಗೂ ಗ್ರಾಮ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಸತೀಶ್ ಪೂಜಾರಿ ಬೋಳ ಸ್ವಾಗತಿಸಿದರು. ಕಾರ್ಯದರ್ಶಿ ಹರ್ಷವರ್ಧನ್ ನಿಟ್ಟೆ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

PREV

Recommended Stories

ದಸರಾ ಹಬ್ಬ ಅದ್ಧೂರಿ ಆಚರಣೆಗೆ ಎಲ್ಲರೂ ಸಹಕರಿಸಿ: ಏಗಪ್ಪ ಸವದಿ
ಬಿಡಿಸಿಸಿ ಬ್ಯಾಂಕ್‌ ಹಿತರಕ್ಷಣೆಗೆ ನಾವು ಬದ್ಧ