ಕನ್ನಡಪ್ರಭ ವಾರ್ತೆ ಗೋಕಾಕ
ನಗರದ ನಗರಸಭೆ ಸಮುದಾಯ ಭವನದಲ್ಲಿ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲದಿಂದ ಮತದಾರರ ಪಟ್ಟಿಯನ್ನು ಪರಿಷ್ಕರಿಸಲು ಕರೆಯಲಾಗಿದ್ದ ಎಸ್‌ಐಆರ್ ವಿಶೇಷ ಸಭೆಯಲ್ಲಿ ಮಾತನಾಡಿದ ಅವರು, ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಜಾಗರೂಕರಾಗಿ ಕಾರ್ಯನಿರ್ವಹಿಸಬೇಕು. ಬಿಎಲ್‌ಒ-2 ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಬ್ಬ ಮತದಾರರ ಮಾಹಿತಿಯನ್ನು ಸಮರ್ಪಕವಾಗಿ ಪರಿಶೀಲಿಸಿ, ಅಗತ್ಯ ತಿದ್ದುಪಡಿಗಳನ್ನು ಮಾಡಿಸಬೇಕು ಎಂದರು.ಪ್ರತಿ ಬೂತ್‌ಮಟ್ಟದಲ್ಲಿ ನೇಮಕ ಗೊಂಡಿರುವ ಬಿಎಲ್‌ಎ-2 ಕಾರ್ಯಕರ್ತರು ಒಂದೇ ಹೆಸರಿನ ಅನೇಕ ವ್ಯಕ್ತಿಗಳು ಒಂದೇ ಗ್ರಾಮ ಅಥವಾ ಪ್ರದೇಶದಲ್ಲಿ ವಾಸಿಸುವ ಸಂದರ್ಭಗಳಲ್ಲಿ ಹೆಸರು, ತಂದೆಯ ಹೆಸರು, ವಿಳಾಸ ಸೇರಿದಂತೆ ಅಗತ್ಯ ಮಾಹಿತಿಗಳನ್ನು ಸರಿಯಾಗಿ ದಾಖಲಿಸದಿದ್ದರೇ ಮತದಾರರ ಪಟ್ಟಿಯಲ್ಲಿ ಗೊಂದಲ ಉಂಟಾಗುವ ಸಾಧ್ಯತೆಗಳಿದ್ದು, ಪ್ರತಿಯೊಬ್ಬ ಅರ್ಹ ಮತದಾರನ ಹೆಸರು ಮತದಾರರ ಪಟ್ಟಿಯಲ್ಲಿ ಸಮರ್ಪಕವಾಗಿ ದಾಖಲಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಪಕ್ಷ ನೀಡಿದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸಬೇಕು ಎಂದು ತಿಳಿಸಿದರು.ವಿಭಾಗ ಪ್ರಭಾರಿ ಸಂಜಯ ಪಾಟೀಲ, ಬಿಜೆಪಿ ರಾಷ್ಟ್ರೀಯ ಒಬಿಸಿ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಶಿ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ, ಬಿಎಲ್‌ಒ-1 ಮಾಣಿಕ ಹಿರಟ್ಟಿ, ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ರಾಜಶ್ರೀ ಒಡೆಯರ್, ಜಿಲ್ಲಾ ಯುವ ಮೋರ್ಚ ಪ್ರಧಾನ ಕಾರ್ಯದರ್ಶಿ ಆನಂದ್ ಅತ್ತುಗೋಳ, ಬಿಜೆಪಿ ಮುಖಂಡ ಪ್ರಮೋದ ಜೋಶಿ, ಡಾ.ಕೆ.ವಿ.ಪಾಟೀಲ, ಸುರೇಶ ಪಾಟೀಲ, ಸುರೇಶ ಪತ್ತಾರ ಸೇರಿದಂತೆ ಹಲವಾರು ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.ಪ್ರಜಾಪ್ರಭುತ್ವದಲ್ಲಿ ಮತದಾನವು ಪ್ರತಿಯೊಬ್ಬ ಭಾರತೀಯ ನಾಗರಿಕನ ಅಮೂಲ್ಯ ಹಕ್ಕಾಗಿದೆ. ಯಾವುದೇ ಕಾರಣಕ್ಕೂ ಅರ್ಹ ಮತದಾರರು ತಮ್ಮ ಹಕ್ಕಿನಿಂದ ವಂಚಿತರಾಗದಂತೆ ಎಲ್ಲರೂ ಜಾಗೃತಿಯಿಂದ ಕಾರ್ಯನಿರ್ವಹಿಸಬೇಕು.
-ರಮೇಶ ಜಾರಕಿಹೊಳಿ, ಶಾಸಕರು.