ಮುರಿನಕಟ್ಟೆಯ ಕಟ್ಟೆ ಧ್ವಂಸ ಖಂಡಿಸಿ 29ಕ್ಕೆ ಬಿಜೆಪಿಯಿಂದ ಪ್ರತಿಭಟನೆ

KannadaprabhaNewsNetwork |  
Published : May 27, 2026, 02:45 AM IST
ಭಟ್ಕಳದಲ್ಲಿ ಬಿಜೆಪಿ ಜಿಲ್ಲಾಅಧ್ಯಕ್ಷ ಎನ್.ಎಸ್. ಹೆಗಡೆ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. | Kannada Prabha

ಸಾರಾಂಶ

ಪಟ್ಟಣದ ಮುರಿನಕಟ್ಟೆಯಲ್ಲಿ ನಿರ್ಮಿಸಿದ ಕಟ್ಟೆಯನ್ನು ಧ್ವಂಸ ಮಾಡಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವುದನ್ನು ಖಂಡಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಹೆಗಡೆ, ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಮೇ 29ರಂದು ಭಟ್ಕಳದಲ್ಲಿ ಹಿಂದೂ ಸಂಘಟನೆಗಳು, ಬಿಜೆಪಿಯ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಗುವುದು.

ಕಟ್ಟೆ ಮರುನಿರ್ಮಾಣ ಮಾಡಲಿ, ಹಿಂದೂಗಳ ಮೇಲಿನ ಪ್ರಕರಣ ವಾಪಸ್ ಪಡೆಯಲಿ: ಎನ್.ಎಸ್. ಹೆಗಡೆ

ಕನ್ನಡಪ್ರಭ ವಾರ್ತೆ ಭಟ್ಕಳ

ಪಟ್ಟಣದ ಮುರಿನಕಟ್ಟೆಯಲ್ಲಿ ನಿರ್ಮಿಸಿದ ಕಟ್ಟೆಯನ್ನು ಧ್ವಂಸ ಮಾಡಿ ಹಿಂದೂಗಳ ಭಾವನೆಗೆ ಧಕ್ಕೆ ತಂದಿರುವುದನ್ನು ಖಂಡಿಸಿದ ಜಿಲ್ಲಾ ಬಿಜೆಪಿ ಅಧ್ಯಕ್ಷ ಎನ್.ಎಸ್. ಹೆಗಡೆ, ಈ ಬಗ್ಗೆ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಮೇ 29ರಂದು ಭಟ್ಕಳದಲ್ಲಿ ಹಿಂದೂ ಸಂಘಟನೆಗಳು, ಬಿಜೆಪಿಯ ಸಹಯೋಗದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಿದರು.

ಮಂಗಳವಾರ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆ ಮುರಿನಕಟ್ಟೆಯಲ್ಲಿ ನಿರ್ಮಿಸಲಾದ ಕಟ್ಟೆಯನ್ನು ಧ್ವಂಸ ಮಾಡಿದವರ ಮೇಲೆ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುವುದನ್ನು ಬಿಟ್ಟು ನ್ಯಾಯ ಕೇಳಲು ಹೋದ ಹಿಂದೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದೆ. ರಾಜ್ಯದ ಕಾಂಗ್ರೆಸ್ ಸರಕಾರ ಹಿಂದೂ ಕಾರ್ಯಕರ್ತರ ಮೇಲೆ ಕೇಸು ದಾಖಲಿಸುತ್ತಿದೆ. ಕಾಂಗ್ರೆಸ್ ಓಲೈಕೆ ರಾಜಕಾರಣ ಮಾಡುತ್ತಿರುವುದಕ್ಕೆ ಇದೇ ಸಾಕ್ಷಿಯಾಗಿದೆ ಎಂದರು.

ಹಿಂದೂ ಕಾರ್ಯರ್ತರ ಮೇಲಿನ ಪ್ರಕರಣ ವಾಪಸ್ ಪಡೆಯಬೇಕೆಂದು ಆಗ್ರಹಿಸಿ ಮೇ 29ರಂದು ಬೆಳಗ್ಗೆ 10 ಗಂಟೆಗೆ ಭಟ್ಕಳದ ರಿಕ್ಷಾ ಯೂನಿಯನ್ ಗಣೇಶೋತ್ಸವ ಮೈದಾನದಿಂದ ಪ್ರತಿಭಟನಾ ಮೆರವಣಿಗೆ ನಡೆಸಿ ಆಡಳಿತ ಸೌಧಕ್ಕೆ ತೆರಳಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಲಿದ್ದೇವೆ. ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ, ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ರಾಜ್ಯ ಉಪಾಧ್ಯಕ್ಷೆ ರೂಪಾಲಿ ನಾಯ್ಕ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದರು.

ಈ ಸಂದರ್ಭ ಮಾಜಿ ಸಚಿವ ಶಿವಾನಂದ ನಾಯ್ಕ, ಮಾಜಿ ಶಾಸಕ ಸುನೀಲ ನಾಯ್ಕ, ಭಟ್ಕಳ ಬಿಜೆಪಿ ಮಂಡಲಾಧ್ಯಕ್ಷ ಲಕ್ಷ್ಮೀನಾರಾಯಣ ನಾಯ್ಕ, ಹೊನ್ನಾವರ ಮಂಡಲಾಧ್ಯಕ್ಷ ಮಂಜುನಾಥ ನಾಯ್ಕ, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಶಿವಾನಿ ಶಾಂತರಾಮ ಭಟ್ಕಳ, ಪ್ರಮುಖರಾದ ಸುಬ್ರಾಯ ದೇವಡಿಗ, ಖೇದಾರ ಕೊಲ್ಲೆ, ಶ್ರೀಕಾಂತ ನಾಯ್ಕ, ಶ್ರೀನಿವಾಸ ನಾಯ್ಕ, ಶ್ರೀಧರ ನಾಯ್ಕ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರಿಗೆ ಬಿತ್ತನೆ ಬೀಜ, ಗೊಬ್ಬರದ ಕೊರತೆ ಆಗುವುದಿಲ್ಲ
ಪ್ರಯತ್ನವಿಲ್ಲದೇ ಯಾವುದೇ ಸಾಧನೆ ಅಸಾಧ್ಯ: ಡಾ. ಕಲ್ಲನಗೌಡರ