ಉಡುಪಿಗೆ ಅನುದಾನ ನೀಡದ ಸರ್ಕಾರದ ವಿರುದ್ಧ ನಾಳೆ ಬಿಜೆಪಿ ಪ್ರತಿಭಟನೆ

KannadaprabhaNewsNetwork |  
Published : Mar 30, 2025, 03:04 AM IST
29ಉಡುಪಿ | Kannada Prabha

ಸಾರಾಂಶ

ರಾಜ್ಯ ಸರ್ಕಾರದ 2025-26 ನೇ ಸಾಲಿನ ಬಜೆಟ್‌ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಶಾಸಕರು ಮನವಿ ನೀಡಿದ್ದರೂ, ಮುಖ್ಯಮಂತ್ರಿ ಅವರು ವಿಶೇಷ ಅನುದಾನ ನೀಡದೇ ಇರುವುದನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆಯನ್ನು ಸಂಘಟಿಸಿದೆ.

ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕ ರಾಜಾಂಗಣ ಪಾರ್ಕಿಂಗ್‌ ವರೆಗೆ ಬೃಹತ್ ಪಾದಯಾತ್ರೆ

ಕನ್ನಡಪ್ರಭ ವಾರ್ತೆ ಉಡುಪಿ

ರಾಜ್ಯ ಸರ್ಕಾರದ 2025-26 ನೇ ಸಾಲಿನ ಬಜೆಟ್‌ನಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡಲು ಶಾಸಕರು ಮನವಿ ನೀಡಿದ್ದರೂ, ಮುಖ್ಯಮಂತ್ರಿ ಅವರು ವಿಶೇಷ ಅನುದಾನ ನೀಡದೇ ಇರುವುದನ್ನು ವಿರೋಧಿಸಿ ನಗರ ಬಿಜೆಪಿ ವತಿಯಿಂದ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆಯನ್ನು ಸಂಘಟಿಸಿದೆ. ಈ ಬಗ್ಗೆ ಶನಿವಾರ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಾದಯಾತ್ರೆಯ ಬಳಿಕ ಪಾರ್ಕಿಂಗ್ ಪ್ರದೇಶದಲ್ಲಿ ಬೃಹತ್ ಪ್ರತಿಭಟನಾ ಸಭೆ ನಡೆಯಲಿದೆ. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ದಿಕ್ಸೂಚಿ ಭಾಷಣ ಮಾಡಲಿದ್ದಾರೆ. ಜಿಲ್ಲೆಯ ಐವರು ಶಾಸಕರು, ಜಿಲ್ಲಾಧ್ಯಕ್ಷ ಸೇರಿದಂತೆ ವಿವಿಧ ಸ್ತರದ ಮುಖಂಡರು ಭಾಗವಹಿಸಲಿದ್ದಾರೆ ಎಂದರು. ಸರ್ಕಾರಿ ಶಾಲೆಗಳ ನಿರ್ವಹಣೆಗೆ ಅಗತ್ಯ ಅನುದಾನ ಮಂಜೂರು ಮಾಡಿಲ್ಲ. ನೂತನ ಜಿಲ್ಲಾಸ್ಪತ್ರೆ ಕಟ್ಟಡಕ್ಕೆ ಪೂರಕವಾದ ಹೆಚ್ಚುವರಿ ಅನುದಾನ ನೀಡದೇ ಕಟ್ಟಡ ಕಾಮಗಾರಿ ಸ್ಥಗಿತಗೊಂಡಿದೆ. ತಾಯಿ ಮತ್ತು ಮಕ್ಕಳ ಆಸ್ಪತ್ರೆ ನಿರ್ವಹಣೆಗೆ ಅನುದಾನ ನೀಡದೇ ಬಡವರು ಸೌಲಭ್ಯ ವಂಚಿತರಾಗುತ್ತಿದ್ದಾರೆ. ಈ ಎಲ್ಲಾ ಕಾರಣಗಳಿಗೆ ಪ್ರತಿಭಟನೆಯನ್ನು ಆಯೋಜಿಸಲಾಗಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ನಗರ ಅಧ್ಯಕ್ಷ ದಿನೇಶ್ ಆಮೀನ್, ಪ್ರ.ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿ.ಬಿ.ಶೆಟ್ಟಿ, ನಗರ ಗ್ರಾಮಾಂತರ ಅಧ್ಯಕ್ಷ ರಾಜೀವ್ ಕುಲಾಲ್ ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಂಭ್ರಮದ ಕ್ರಿಸ್‌ಮಸ್‌ ಆಚರಣೆಗೆ ಕ್ಷಣಗಣನೆ
ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಯಲು ಶ್ರಮಿಸಲಿ: ಮಂಜುನಾಥ ಕಂಬಳಿ