ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ 79ನೇ ಸ್ವಾತಂತ್ರ್ಯ ದಿನವನ್ನು ಕಡಿಯಾಳಿ ಬಿಜೆಪಿ ಜಿಲ್ಲಾ ಕಚೇರಿಯ ವಠಾರದಲ್ಲಿ ಸಂಭ್ರಮದಿಂದ ಆಚರಿಸಲಾಯಿತು.ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ, ಧ್ವಜಾರೋಹಣ ನೆರವೇರಿಸಿ ಮಾತನಾಡಿ, ಸ್ವಾತಂತ್ರ್ಯ ಸಂಗ್ರಾಮದಲ್ಲಿ ಹೋರಾಡಿ ಹುತಾತ್ಮರಾದ ದಿವ್ಯ ಚೇತನಗಳನ್ನು ನೆನಪಿಸಿಕೊಂಡು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ದೇಶ ಸಾಧಿಸಿರುವ ಅಮೋಘ ಪ್ರಗತಿಯನ್ನು ಉಲ್ಲೇಖಿಸಿ ಮಾತನಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯ ಶೆಟ್ಟಿ, ಉಡುಪಿ ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಪಕ್ಷ ಪ್ರಮುಖರಾದ ರವಿ ಅಮೀನ್, ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿಗಳಾದ ಸತ್ಯಾನಂದ ನಾಯಕ್, ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್ ಡಿಸೋಜ, ಜಿಲ್ಲಾ ಮಾಧ್ಯಮ ಪ್ರಮುಖರಾದ ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ನಗರಸಭೆ ಉಪಾಧ್ಯಕ್ಷೆ ರಜನಿ ಹೆಬ್ಬಾರ್, ಉಡುಪಿ ನಗರ ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಸರೋಜಾ ಶೆಣೈ, ಪ್ರಮುಖರಾದ ಲೋಕಯ್ಯ ಪಣಿಯಾಡಿ, ಗುರುಪ್ರಸಾದ್, ವಿನಯ್ ಕಲ್ಮಾಡಿ, ಪ್ರೀತಿ, ಸುಮಾ ನಾಯ್ಕ್, ಪ್ರಜ್ಞಾ ಶೆಟ್ಟಿ, ವಿದ್ಯಾ, ಶಿವರಾಮ್ ಕಾಡಿಮಾರ್, ಚಂದ್ರಶೇಖರ ಪ್ರಭು, ಸಂತೋಷ್ ಆಚಾರ್ಯ, ಧನುಷ್, ಶ್ಯಾಮ್ ಸುಂದರ್ ಮುಂತಾದವರು ಇದ್ದರು.