ಬಿಜೆಪಿ ಜೆಡಿಎಸ್ ಮೈತ್ರಿಗೆ ಮುಖಭಂಗ; ಕಾಂಗ್ರೆಸ್ ತೆಕ್ಕೆಗೆ ಪಿಎಲ್ಡಿ ಬ್ಯಾಂಕ್

KannadaprabhaNewsNetwork |  
Published : Jan 24, 2025, 12:45 AM IST
೨೩ಕೆಎಲ್‌ಆರ್-೧ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷರನ್ನು ಕೋಲಾರದ ಪಿಎಲ್‌ಡಿ ಬ್ಯಾಂಕ್ ಕಾರ್ಯಾಲಯದಲ್ಲಿ ಅಭಿನಂದಿಸುತ್ತಿರುವುದು. | Kannada Prabha

ಸಾರಾಂಶ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು, ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಗಳಿಗೂ ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ, ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದು ಚುನಾವಣೆಯಲ್ಲಿ ಸಾಬೀತಾಗಿದೆ.

ಕನ್ನಡಪ್ರಭ ವಾರ್ತೆ ಕೋಲಾರ

ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿಯಮಿತದ ನೂತನ ಅಧ್ಯಕ್ಷರಾಗಿ ಜೆಡಿಎಸ್ ಪಕ್ಷದಿಂದ ಗೆದ್ದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಕೆಂದಟ್ಟಿ ಎ. ಶಿವಕುಮಾರ್, ಉಪಾಧ್ಯಕ್ಷರಾಗಿ ಸರ್ಕಾರದಿಂದ ನಾಮನಿರ್ದೇಶನವಾದ ಜಂಬಾಪುರ ವೆಂಕಟರಾಮ್ ಆಯ್ಕೆಯಾದರು.

ನಗರದ ಪಿಎಲ್‌ಡಿ ಬ್ಯಾಂಕ್ ಕಾರ್ಯಾಲಯದಲ್ಲಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲದಿಂದ ಎ. ಶಿವಕುಮಾರ್, ಜೆಡಿಎಸ್- ಬಿಜೆಪಿ ಮೈತ್ರಿಯಿಂದ ವಿ.ಎಂ ವೆಂಕಟೇಶಪ್ಪ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ನಿಂದ ಜಂಬಾಪುರ ವೆಂಕಟರಾಮ್, ಮೈತ್ರಿಯಿಂದ ಅಂಬಿಕಾ ನಾಮಪತ್ರ ಸಲ್ಲಿಸಿದ್ದರು. ಚುನಾವಣೆ ನಡೆದು ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳಿಗೆ ಕಾಂಗ್ರೆಸ್ ಬೆಂಬಲಿತ ಇಬ್ಬರೂ ಕೇವಲ ಒಂದು ಮತದ ಅಂತರದಲ್ಲಿ ಆಯ್ಕೆಯಾದರು.

ಅಧ್ಯಕ್ಷ- ಉಪಾಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿ ಮಾತನಾಡಿದ ಎಂಎಲ್ಸಿ ಎಂ.ಎಲ್ ಅನಿಲ್ ಕುಮಾರ್, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಸಾಧ್ಯವಿದ್ದು, ಜಿಲ್ಲೆಯ ಎಲ್ಲಾ ನಗರಸಭೆ ಹಾಗೂ ಪುರಸಭೆಗಳಲ್ಲಿ ಕಾಂಗ್ರೆಸ್ ಅಧಿಕಾರ ಹಿಡಿದಿದೆ. ಅದೇ ರೀತಿ ಜಿಲ್ಲೆಯ ಎಲ್ಲಾ ಪಿಎಲ್ಡಿ ಬ್ಯಾಂಕ್ ಆಡಳಿತ ಮಂಡಳಿಗಳಿಗೂ ಕಾಂಗ್ರೆಸ್ ಬೆಂಬಲಿಗರು ಆಯ್ಕೆಯಾಗಲಿದ್ದಾರೆ, ಕಾಂಗ್ರೆಸ್ ಜಿಲ್ಲೆಯಲ್ಲಿ ಬಲಿಷ್ಠವಾಗಿದೆ ಎಂಬುದು ಚುನಾವಣೆಯಲ್ಲಿ ಸಾಬೀತಾಗಿದೆ ಎಂದರು.

ನೂತನ ಅಧ್ಯಕ್ಷ ಎ.ಶಿವಕುಮಾರ್ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದಿಂದ ಬ್ಯಾಂಕ್ ಅಭಿವೃದ್ಧಿ ಸಾಧ್ಯವಿದ್ದು, ಆ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ. ಸರಕಾರದಿಂದ ರೈತರಿಗೆ ಸಿಗುವ ಸಾಲ ಸೌಲಭ್ಯ ಒದಗಿಸುವಲ್ಲಿ ಮತ್ತು ಬ್ಯಾಂಕ್ ಅಭಿವೃದ್ಧಿಗಾಗಿ ಶ್ರಮಿಸುತ್ತೇನೆ. ನನ್ನನ್ನು ಬ್ಯಾಂಕ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ ನಿರ್ದೇಶಕರಿಗೆ ಹಾಗೂ ಕಾಂಗ್ರೆಸ್ ನಾಯಕರಿಗೆ ಕೃತಜ್ಞತೆ ಸಲ್ಲಿಸಿದರು.

ಪಿಎಲ್ಡಿ ಬ್ಯಾಂಕ್ ನಿರ್ದೇಶಕ ಎನ್.ಜಿ ಬ್ಯಾಟಪ್ಪ, ವೆಲಗಲಬುರ್ರೆ ಶಶಿಧರ್, ಟಿ.ಕೆ ಬೈರೇಗೌಡ, ವೆಂಕಟಲಕ್ಷ್ಮಮ್ಮ, ಮುನಿರತ್ನ, ಲಕ್ಷ್ಮಮ್ಮ ನಗರಸಭೆ ಅಧ್ಯಕ್ಷೆ ಲಕ್ಷ್ಮೀದೇವಮ್ಮ, ಉಪಾಧ್ಯಕ್ಷೆ ಸಂಗೀತಾ, ಕುಡಾ ಅಧ್ಯಕ್ಷ ಮಹಮ್ಮದ್ ಹನೀಫ್, ಮುಖಂಡರಾದ ನಾಗನಾಳ ಸೋಮಣ್ಣ, ಖಾಜಿಕಲ್ಲಹಳ್ಳಿ ಮುನಿರಾಜು, ಚಂಜಿಮಲೆ ರಮೇಶ್, ಸೀಸಂದ್ರ ಗೋಪಾಲಗೌಡ, ಮೈಲಾಂಡಹಳ್ಳಿ ಮುರಳಿ,ಷಂಷೀರ್ ಸಿಎಂಎಂ ಮಂಜುನಾಥ್, ಚಂದ್ರಮೌಳಿ ಮುಂತಾದವರು ಇದ್ದರು. ಚುನಾವಣಾಧಿಕಾರಿಯಾಗಿ ಮುಸ್ತಫಾ ಕಾರ್ಯನಿರ್ವಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರಿಂದ ಪುಣೆಗೆ ಹೊಸ ಹೈಸ್ಪೀಡ್‌ ರೈಲು ಘೋಷಣೆ?
ಬೆಂಗಳೂರು ಜನತೆಗೆ ಮತ್ತೊಂದು ಶಾಕ್ : ಮೆಟ್ರೋ ಟಿಕೆಟ್‌ ಮತ್ತೆ ಏರಿಕೆ? ಯಾವ ಮಾರ್ಗದಲ್ಲಿ ಎಷ್ಟು ಹೆಚ್ಚಳ?