- ಸಂಡೂರಲ್ಲಿ ಬಿಜೆಪಿ ಪ್ರಚಾರ ಕಾರ್ಯಕ್ರಮದಲ್ಲಿ ಮಾಯಕೊಂಡ ಜಿ.ಎಸ್.ಶ್ಯಾಮ್ ವಿಶ್ವಾಸ
- - - ಕನ್ನಡಪ್ರಭ ವಾರ್ತೆ ದಾವಣಗೆರೆಶಿಗ್ಗಾಂವಿ, ಸಂಡೂರು, ಚನ್ನಪಟ್ಟಣ ಈ ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಪಕ್ಷ ಭರ್ಜರಿ ಜಯಭೇರಿ ಭಾರಸಲಿದೆ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಮಾಯಕೊಂಡದ ಜಿ.ಎಸ್. ಶ್ಯಾಮ್ ವಿಶ್ವಾಸ ವ್ಯಕ್ತಪಡಿಸಿದರು.
ದರೋಜಿ ಗ್ರಾಮದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ನೇತೃತ್ವದಲ್ಲಿ ನಡೆದ ಭೋವಿ, ಉಪ್ಪಾರ ಸಮಾಜ ಬಾಂಧವರರನ್ನು ಉದ್ದೇಶಿಸಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮೂರೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಭಾರಿ ಜನಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಗೆಲ್ಲಲಿದ್ದಾರೆ ಎಂದರು.ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ಅಭಿವೃದ್ಧಿ ಕಾರ್ಯಗಳು ಸಂಪೂರ್ಣ ಕುಂಠಿತಗೊಂಡಿವೆ. ಗ್ಯಾರಂಟಿ ಯೋಜನೆಗಳಡಿ ಜನರಿಗೆ ಹಣ ನೀಡುವುದಕ್ಕೂ ಈ ಸರ್ಕಾರದಿಂದ ಆಗುತ್ತಿಲ್ಲ. 3-4 ತಿಂಗಳಿಗೊಮ್ಮೆ ಗೃಹಲಕ್ಷ್ಮಿ ಹಣ ಹಾಕುತ್ತಿದ್ದಾರೆ. ಶಕ್ತಿ ಯೋಜನೆ ಹೆಸರಿಗಷ್ಟೇ ಇದ್ದು, ರಾಜ್ಯದ ಎಷ್ಟೋ ಗ್ರಾಮಗಳಿಗೆ ಸರ್ಕಾರಿ ಬಸ್ ಸಹ ಇಲ್ಲ. ಒಗ್ಗಟ್ಟಿನಿಂದ ಎಲ್ಲ ನಾಯಕರು ಚುನಾವಣೆಯಲ್ಲಿ ಕೆಲಸ ಮಾಡುತ್ತಿದ್ದು, ಮೂರೂ ಕ್ಷೇತ್ರದಲ್ಲಿ ದಾಖಲೆಗಳ ಅಂತರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂದರು.
ಶಾಸಕ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಬಿ.ಶ್ರೀರಾಮುಲು, ಶಾಸಕ ಆರಗ ಜ್ಞಾನೇಂದ್ರ, ಯುವ ಮೋರ್ಚಾ ರಾಜ್ಯ ಅಧ್ಯಕ್ಷರು, ದೊಡ್ಡಬಳ್ಳಾಪುರ ಶಾಸಕರು ಧೀರಜ್ ಮುನಿರಾಜು ವಿಪ ಸದಸ್ಯ ಕಿಶೋರಕುಮಾರ, ರಾಜ್ಯ ಬಿಜೆಪಿ ಕಾರ್ಯದರ್ಶಿ ದಿವಾಕರ, ಹೊಳಲ್ಕೆರೆ ಶಾಸಕ ಚಂದ್ರಪ್ಪ, ಭೋವಿ ಸಮಾಜದ ಮುಖಂಡರಾದ ಗಂಗಪ್ಪ ಬಳ್ಳಾರಿ ಜಿಲ್ಲೆ ಅಧ್ಯಕ್ಷರಾದ ಅನಿಲ್ ನಾಯ್ಡು, ಹುಲುಗಪ್ಪ, ಸುರೇಶ್ ಬಳ್ಳಾರಿ, ಮಾಜಿ ಮೇಯರ್ ಚಂದ್ರಯ್ಯ, ಅಡವಿ ಸ್ವಾಮಿ, ವೆಂಕಟೇಶ, ಗ್ರಾಪಂ ಸದಸ್ಯರು, ಸಮಾಜದ ಮುಖಂಡರು, ಬಿಜೆಪಿ ಪದಾಧಿಕಾರಿಗಳು, ಮುಖಂಡ ರು, ಕಾರ್ಯಕರ್ತರು ಇದ್ದರು.- - - -10ಕೆಡಿವಿಜಿ4:
ಸಂಡೂರು ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಪರ ಪ್ರಚಾರ ಸಭೆಯಲ್ಲಿ ಬಿ.ವೈ.ವಿಜಯೇಂದ್ರ, ಜನಾರ್ದನ ರೆಡ್ಡಿ, ಶ್ರೀರಾಮುಲು, ಮಾಯಕೊಂಡ ಜಿ.ಎಸ್.ಶ್ಯಾಮ್ ಇತರರು ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು.