ಮಧುಗಿರಿಯ ನಾಲ್ಕು ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ

KannadaprabhaNewsNetwork |  
Published : Sep 26, 2025, 01:00 AM IST
೨೫ಶಿರಾ೧: ಶಿರಾ ನಗರದ ಸಿರಿಗಂಧ ಪ್ಯಾಲೇಸ್ನಲ್ಲಿ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಪದಾಧಿಕಾರಿಗಳ ಕಾರ್ಯಕರಣಿ ಸಭ ಏರ್ಪಡಿಸಲಾಗಿತ್ತು. ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ, ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಚಿದಾನಂದ್ ಎಂ. ಗೌಡ ಸೇರಿದಂತೆ ಹಲವರು ಹಾಜರಿದ್ದರು. | Kannada Prabha

ಸಾರಾಂಶ

ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ವಾತಾವರಣ ಇದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದರು.

ಕನ್ನಡಪ್ರಭ ವಾರ್ತೆ ಶಿರಾ

ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲೂ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ವಾತಾವರಣ ಇದೆ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿದರು.

ಅವರು ನಗರದಲ್ಲಿ ಏರ್ಪಡಿಸಿದ್ದ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಪದಾಧಿಕಾರಿಗಳ ಕಾರ್ಯಕಾರಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಭಾರತೀಯ ಜನತಾ ಪಾರ್ಟಿಯನ್ನು ಬೂತ್ ಮಟ್ಟದಲ್ಲಿ ಸಂಘಟಿಸಬೇಕು ಹಾಗೂ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ ಚುನಾವಣೆಗೆ ಪಕ್ಷವನ್ನು ಬಲಪಡಿಸಲು ಕಾರ್ಯಕಾರಣಿ ಸಭೆ ನಡೆಸಿದ್ದೇವೆ ಎಂದರು.

ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಬಿಜೆಪಿ ಜಿಲ್ಲಾಧ್ಯಕ್ಷ ಚಿದಾನಂದ್ ಎಂ. ಗೌಡ ಮಾತನಾಡಿ, ಬಿಜೆಪಿ ಪಕ್ಷ ನಂಬಿಕೆ ಇಟ್ಟು ನನಗೆ ಮಧುಗಿರಿ ಸಂಘಟನಾತ್ಮಕ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ನೇಮಿಸಿ ಜವಾಬ್ದಾರಿ ನೀಡಿದೆ. ನಾನು ಅಧಿಕಾರ ಸ್ವೀಕರಿಸಿದ ದಿನದಿಂದ ನಿರಂತರವಾಗಿ ಪ್ರಾಮಾಣಿಕವಾಗಿ ಪಕ್ಷ ಸಂಘಟನೆ ಮಾಡುತ್ತಿದ್ದೇನೆ. ಕಾರ್ಯಕರ್ತರನ್ನು ಒಟ್ಟುಗೂಡಿಸುವ ಕೆಲಸ ಮಾಡುತ್ತಿದ್ದೇನೆ. ರಾಜ್ಯಾಧ್ಯಕ್ಷರ ಆದೇಶದಂತೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಅವರು ಜಿಲ್ಲಾ ಸಮಿತಿ ಮಾಡುವ ಉದ್ದೇಶದಿಂದ ಇಂದು ಎಲ್ಲರ ಅಭಿಪ್ರಾಯ ಪಡೆದಿದ್ದಾರೆ. ಸಧೃಢವಾದ ಜಿಲ್ಲಾ ತಂಡ ಕಟ್ಟಲು ಕಾರ್ಯಕ್ಕೆ ಬದ್ದರಾಗಿದ್ದೇವೆ. ಕಾಂಗ್ರೆಸ್‌ ದುರಾಡಳಿತದಿಂದ ಜನ ಬೇಸತ್ತಿದ್ದಾರೆ. ಮುಂದಿನ ದಿನಗಳು ಬಿಜೆಪಿಯ ದಿನಗಳಾಗಿರುತ್ತೆ. ಮೋದಿಯವರು ಕೇಂದ್ರದಲ್ಲಿ ಕೊಟ್ಟಿರುವ ಸುಭದ್ರ ಆಡಳಿತ ಜನರಿಗೆ ನಂಬಿಕೆ ಬಂದಿದೆ. ಜಿಎಸ್ಟಿ ಸರಳೀಕರಣ ನಮ್ಮ ಆತ್ಮವಿಶ್ವಾಸ ಹೆಚ್ಚಿದೆ ಎಂದರು.

ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಬಿ. ಸಿ ಹನುಮಂತೆ ಗೌಡ ರವರು, ಕೊರಟಗೆರೆ ಬಿಜೆಪಿ ಅಭ್ಯರ್ಥಿ ಅನಿಲ್ ಕುಮಾರ್, ದಿಶಾ ಸಮಿತಿ ಸದಸ್ಯರಾದ ಮೂರ್ತಿ ಮಾಷ್ಟ್ರು, ಜಿಲ್ಲಾ ಪ್ರಧಾನಕಾರ್ಯದರ್ಶಿ ಮೂರ್ತಿ, ಪಾವಗಡ ರವಿ, ಮಹಿಳಾ ಮೋರ್ಚಾ ಅಧ್ಯಕ್ಷರಾದ ಉಮಾವಿಜಯ್ ರಾಜ್, ನಗರ ಮಂಡಲ ಅಧ್ಯಕ್ಷರಾದ ಗಿರಿಧರ್, ಗ್ರಾಮಾಂತರ ಮಂಡಲ ಅಧ್ಯಕ್ಷರರಾದ ಈರಣ್ಣ ಪಟೇಲ್ ಹಾಜರಿದ್ದರು.

PREV

Recommended Stories

ಕಾಸರಗೋಡಲ್ಲಿ ಕನ್ನಡ ಫಲಕ: ಕೇರಳಕ್ಕೆ ಕೇಂದ್ರ ನಿರ್ದೇಶನ
ಒಂದು ತಿಂಗಳಾದ್ರೂ ಬೈಕ್‌ ಟ್ಯಾಕ್ಸಿಗೆ ನೀತಿ ರೂಪಿಸದ ರಾಜ್ಯ ಸರ್ಕಾರದ ವಿರುದ್ಧ ಹೈಕೋರ್ಟ್‌ ಗರಂ