ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರದ ಸೋಮೇಶ್ವರ ದೇವಸ್ಥಾನದಲ್ಲಿ ತಾಲೂಕು ಬಿಜೆಪಿ ಕಾರ್ಯಕರ್ತರೊಂದಿಗೆ ಶಾಸಕ ಡಾ. ಚಂದ್ರು ಲಮಾಣಿ ಅವರು ಸೋಮೇಶ್ವರನಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿದರು.
ಲಕ್ಷ್ಮೇಶ್ವರ: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಬಿ.ವೈ. ವಿಜಯೇಂದ್ರ ಆಯ್ಕೆಯಾಗಿರುವುದರಿಂದ ಯುವಕರಿಗೆ ಪಕ್ಷದಲ್ಲಿ ಹೆಚ್ಚಿನ ಸ್ಥಾನಮಾನ ಸಿಗುವುದರಲ್ಲಿ ಅನುಮಾನವಿಲ್ಲ ಎಂದು ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಶನಿವಾರ ಪಟ್ಟಣದ ಸೋಮೇಶ್ವರ ದೇವಸ್ಥಾನದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಲಕ್ಷ್ಮೇಶ್ವರ ತಾಲೂಕು ಬಿಜೆಪಿ ಕಾರ್ಯಕರ್ತರೊಂದಿಗೆ ಶಾಸಕ ಡಾ. ಚಂದ್ರು ಲಮಾಣಿ ಅವರು ಸೋಮೇಶ್ವರನಿಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಮಾತನಾಡಿದರು. ವಿಜಯೇಂದ್ರ ಅವರು ರಾಜ್ಯಾಧ್ಯಕ್ಷರಾಗಿ ಆಯ್ಕೆಯಾಗಿರುವುದರಿಂದ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ಕೈಬಲಪಡಿಸುವಲ್ಲಿ ಶಕ್ತಿ ಮೀರಿ ಪ್ರಯತ್ನ ಮಾಡಿ ಹೆಚ್ಚಿನ ಸ್ಥಾನ ಗೆಲ್ಲಿಸುವ ಕಾರ್ಯ ಮಾಡುತ್ತಾರೆ. ವಿಜಯೇಂದ್ರ ಅವರು ಯುವಕರಾಗಿರುವುದರಿಂದ ಬಿಜೆಪಿಯಲ್ಲಿ ಯುವಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಇನ್ನಷ್ಟು ಬಲಪಡಿಸುವ ಕಾರ್ಯ ಮಾಡುತ್ತಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮೋದಿ ಅವರ ನಾಯಕತ್ವದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಿಸುವ ಮೂಲಕ ಮತ್ತೊಮ್ಮೆ ದೇಶದ ಚುಕ್ಕಾಣಿ ಹಿಡಿಯುವುದರಲ್ಲಿ ಯಾವುದೇ ಅನುಮಾನ ಬೇಡ ಎಂದು ಹೇಳಿದರು. ಈ ವೇಳೆ ಸುನೀಲ ಮಹಾಂತಶೆಟ್ಟರ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ರಮೇಶ ಹಾಳದೋಟದ, ಭೀಮಣ್ಣ ಯಂಗಾಡಿ, ನಿಂಬಣ್ಣ ಮಡಿವಾಳರ, ಸಿ.ಪಿ. ಮಾಡಳ್ಳಿ, ರಮೇಶ ದನದಮನಿ, ಮಂಜುನಾಥ ಹೊಗೆಸೊಪ್ಪಿನ, ನೀಲಪ್ಪ ಕರ್ಜಕಣ್ಣವರ, ವೀರಣ್ಣ ಅಕ್ಕೂರ, ಅನಿಲ ಮುಳಗುಂದ, ವಿಜಯ ಹತ್ತಿಕಾಳ, ರಾಜಶೇಖರ ಶಿಗ್ಲಿಮಠ, ಸಂಗಮೇಶ ಬೆಳವಲಕೊಪ್ಪ, ಸಿದ್ದನಗೌಡ ಬೊಳ್ಳೊಳ್ಳಿ, ಸೋಮಣ್ಣ ಉಪನಾಳ, ಚಂದ್ರುಗೌಡ ಪಾಟೀಲ, ಶಂಕ್ರಪ್ಪ ಸೊರಟೂರ, ತುಕ್ಕಪ್ಪ ಪೂಜಾರ, ಶಕ್ತಿ ಕತ್ತಿ, ಹನಮಂತ ಜಾಲಿಮರದ, ಪ್ರಕಾಶ ಬೆಂತೂರ, ಯಲ್ಲಪ್ಪ ಬೆಟಗೇರಿ, ಪ್ರಕಾಶ ಮಾದನೂರ, ಮಂಜುನಾಥ ಕೆಂಚನಗೌಡರ, ಉಳವೇಶಗೌಡ ಪಾಟೀಲ, ರುದ್ರಪ್ಪ ಉಮಚಗಿ ಸೇರಿದಂತೆ ಅನೇಕರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.