ಕನ್ನಡಪ್ರಭ ವಾರ್ತೆ ಶಿರಸಿ
ಮಂಗಳವಾರ ನಗರದ ದೀನದಯಾಳ ಸಭಾಭನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ, ಬೇಡ್ತಿ–ವರದಾ, ಅಘನಾಶಿನಿ–ವೇದಾವತಿ ನದಿ ಜೋಡಣೆ ಯೋಜನೆಗಳ ವಿಷಯದಲ್ಲಿ ಸಂಸದರ ಹೆಸರು ಹಾಳು ಮಾಡುವ ಉದ್ದೇಶದಿಂದ ಕೆಲವರು ರಾಜಕೀಯ ಮಾಡುತ್ತಿದ್ದಾರೆ. ಈ ಯೋಜನೆಗಳನ್ನು ಮಾಡೇ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಹೇಳುವಾಗ ಪಕ್ಕದಲ್ಲೇ ಇದ್ದ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರು ಹಾಗೂ ಉಳಿದ ಕಾಂಗ್ರೆಸ್ ಶಾಸಕರು ಯಾಕೆ ಮೌನ ವಹಿಸಿದ್ದರು ಎಂದು ಪ್ರಶ್ನಿಸಿದ ಅವರು, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕರ ನಿಯೋಗ ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಯೋಜನೆ ಕೈಬಿಡುವಂತೆ ಮನವಿ ಮಾಡಿದರೂ, ಡಿಪಿಆರ್‌ಗೆ ಸಹಿ ಹಾಕಿರುವುದು ಯಾಕೆ? ಎಂದು ಆಕ್ಷೇಪ ವ್ಯಕ್ತಪಡಿಸಿದರು.
ಜವಾಬ್ದಾರಿಯುತ ಸಚಿವರಾಗಿ ರಾಜಕಾರಣ ಬಿಟ್ಟು ಜಿಲ್ಲೆಯ ಎಲ್ಲ ತಾಲೂಕುಗಳಿಗೆ ಭೇಟಿ ನೀಡಿ ಜನರ ಸಮಸ್ಯೆ ಆಲಿಸಬೇಕಿತ್ತು. ಆದರೆ ಅವರು ಭಟ್ಕಳ–ಕಾರವಾರದ ನಡುವೆಯೇ ಸೀಮಿತವಾಗಿದ್ದಾರೆ ಎಂದು ಆರೋಪಿಸಿದರು. ಆಸ್ಪತ್ರೆಗಳಲ್ಲಿ ವೈದ್ಯರು ಹಾಗೂ ಉಪಕರಣಗಳ ಕೊರತೆ, ರಸ್ತೆ ಸಮಸ್ಯೆ, ಅಧಿಕಾರಿಗಳ ಅಭಾವ, ಬೆಳೆ ಪರಿಹಾರ ವಿಳಂಬ ಸೇರಿದಂತೆ ಅನೇಕ ಸಮಸ್ಯೆಗಳಿವೆ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸೌಜನ್ಯ ಪ್ರಕರಣದ ಸಂತ್ರಸ್ತರು ಹಾಗೂ ಯಲ್ಲಾಪುರದಲ್ಲಿ ಸಾವನ್ನಪ್ಪಿದ ದಲಿತ ಮಹಿಳೆಯ ಕುಟುಂಬಕ್ಕೂ ಉಸ್ತುವಾರಿ ಸಚಿವರು ಭೇಟಿ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದರು.ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ, ಜಿಲ್ಲಾ ವಕ್ತಾರ ಸದಾನಂದ ಭಟ್ಟ ನಿಡಗೋಡ ಮಾತನಾಡಿದರು.
ಸುದ್ದಿಗೋಷ್ಠಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಉಪಾಧ್ಯಕ್ಷೆ ಆರತಿ ಗೌಡ, ರೈತ ಮೋರ್ಚಾ ಜಿಲ್ಲಾ ಉಪಾಧ್ಯಕ್ಷ ಅನಂತಮೂರ್ತಿ ಹೆಗಡೆ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ ನಾಯ್ಕ ಕುಮಟಾ, ಗುರುಪ್ರಸಾದ ಹೆಗಡೆ ಹರ್ತೆಬೈಲ್, ಜಿಲ್ಲಾ ಎಸ್ಸಿ ಮೋರ್ಚಾ ಅಧ್ಯಕ್ಷ ನಂದನ ಬೋರ್ಕರ್, ಜಿಲ್ಲಾ ಕಾರ್ಯದರ್ಶಿ ಶರ್ಮಿಳಾ ಮಾದನಗೇರಿ ಮತ್ತಿತರರು ಇದ್ದರು.