ಕನ್ನಡಪ್ರಭ ವಾರ್ತೆ ಹುಬ್ಬಳ್ಳಿ
ಪ್ರಜ್ವಲ್ ರೇವಣ್ಣ ಪ್ರಕರಣದಿಂದ ಬಿಜೆಪಿಗೆ ಹಿನ್ನಡೆಯಾಗಿ, ಕಾಂಗ್ರೆಸ್‌ಗೆ ಲಾಭವಾಗಲಿದೆ ಎಂದು ಇದೇ ವೇಳೆ ಹೇಳಿದರು.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗ ಸತ್ಯ ಹಾಗೂ ಸುಳ್ಳು, ಪ್ರೀತಿ ಮತ್ತು ದ್ವೇಷದ ನಡುವೆ ನಡೆಯುತ್ತಿರುವ ಚುನಾವಣೆ ಇದಾಗಿದೆ. ಪ್ರಧಾನಿ ಮೋದಿ ಅವರು ಚುನಾವಣೆಯಲ್ಲಿ ಸುಳ್ಳಿನ ಆಶ್ರಯ ಪಡೆದಿದ್ದಾರೆ. 10 ವರ್ಷಗಳಲ್ಲಿ ಅವರು ಮಾಡಿದ ಕೆಲಸಗಳ ಬಗ್ಗೆ ಚುನಾವಣೆಯಲ್ಲೇ ಚರ್ಚೆಯನ್ನೇ ಮಾಡಲಿಲ್ಲ. ಬದಲಿಗೆ ಸಮಾಜದಲ್ಲಿ ದ್ವೇಷ ಬಿತ್ತುವ, ಸಮಾಜವನ್ನು ಒಡೆಯುವಂಥ ಮಾತುಗಳನ್ನಷ್ಟೇ ಆಡಿದ್ದಾರೆ. ಆದರೆ ಸಮಾಜವನ್ನು ಒಗ್ಗೂಡಿಸುವ, ಸೌಹಾರ್ದಯುತವಾಗಿ ಬದುಕುವ ಬಗ್ಗೆ ಮಾತನಾಡಿದ್ದೇವೆ. ಹೀಗಾಗಿ ಸುಳ್ಳು ಮತ್ತು ಸತ್ಯದ ನಡುವೆ, ಪ್ರೀತಿ ಮತ್ತು ದ್ವೇಷದ ನಡುವೆ ನಡೆಯುತ್ತಿರುವ ಚುನಾವಣೆ ಇದು ಎಂದರು.ಬಡವರು, ಮಹಿಳೆಯರು, ಮಧ್ಯಮ ವರ್ಗದ ಪರ ಗ್ಯಾರಂಟಿ ಯೋಜನೆಗಳನ್ನು ನೀಡಿರುವ ಕಾಂಗ್ರೆಸ್‌ಗೆ ಜನರಿಂದ ಹೆಚ್ಚಿನ ಬೆಂಬಲ ವ್ಯಕ್ತವಾಗಲಿದೆ. ರಾಜ್ಯದಲ್ಲಿ 20ಕ್ಕೂ ಅಧಿಕ ಸೀಟುಗಳು ಕಾಂಗ್ರೆಸ್‌ಗೆ ಬರಲಿವೆ. ಬಿಜೆಪಿ ಈ ಚುನಾವಣೆಯಲ್ಲಿ ಸಿಂಗಲ್ ಡಿಜಿಟ್ ಕೂಡ ದಾಟುವುದಿಲ್ಲ ಎಂದರು.
ಪ್ರಜ್ವಲ್ ರೇವಣ್ಣ ವಿಡಿಯೋ ಪ್ರಕರಣದಿಂದ ಕಾಂಗ್ರೆಸ್‌ಗೆ ಲಾಭವಾಗುತ್ತದೆಯೇ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಇವರು ವರ್ತಿಸುತ್ತಿರುವ ಬಗೆ, ಗೊಂದಲಗಳ ಹೇಳಿಕೆಯಿಂದ ಜನರಿಗೆ ಮನವರಿಕೆಯಾಗಿದೆ. ಕಾಂಗ್ರೆಸ್‌ಗೆ ಮತ ಚಲಾಯಿಸುವುದು ಉತ್ತಮ ಎಂಬುದು. ಹೀಗಾಗಿ ಸಹಜವಾಗಿ ಲಾಭವಾಗುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷರಾದ ಅನಿಲಕುಮಾರ ಪಾಟೀಲ, ಅಲ್ತಾಫ್ ಹಳ್ಳೂರ, ಸದಾನಂದ ಡಂಗನವರ, ರಾಜೇಶ್ವರಿ ಪಾಟೀಲ ಸೇರಿದಂತೆ ಹಲವರಿದ್ದರು.