ಬಿಜೆಪಿ ಸಂಘಟನೆಗೆ ಶಕ್ತಿ ಮೀರಿ ಪ್ರಯತ್ನಿಸುವೆ: ಯಾಳಗಿ

KannadaprabhaNewsNetwork | Published : Jan 30, 2024 2:00 AM

ಸಾರಾಂಶ

ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಿ, ನಾಯಕನನ್ನು ಬೆಳೆಸಲು ಕೇವಲ ವ್ಯಕ್ತಿಯಿಂದ ಸಾಧ್ಯವಿಲ್ಲ. ಅದಕ್ಕೆ ಪಕ್ಷ ಹಾಗೂ ಸಂಘಟನೆ ಮುಖ್ಯ ಎಂದರು.ಪಕ್ಷದಲ್ಲಿ ಕಾರ್ಯಕರ್ತರು ಸಂಘಟನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಿದರೆ ಪಕ್ಷವನ್ನು ಬಲಪಡಿಸಲು ಸಾಧ್ಯ. ನನ್ನ ಮೇಲೆ ವಿಶ್ವಾಸವಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೆನೆ.

ಕನ್ನಡಪ್ರಭ ವಾರ್ತೆ ಶಹಾಪುರ

ಮುಂಬರುವ ಎಲ್ಲ ಚುನಾವಣೆಗಳಲ್ಲಿ ಜಿಲ್ಲೆಯ ನಾಲ್ಕೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಿಸಲು ಪಕ್ಷದ ಕಾರ್ಯಕರ್ತರೊಂದಿಗೆ ಶಕ್ತಿ ಮೀರಿ ಪ್ರಯತ್ನ ಮಾಡುತ್ತೇನೆ ಎಂದು ನೂತನ ಬಿಜೆಪಿ ಜಿಲ್ಲಾಧ್ಯಕ್ಷ ಅಮೀನ್ ರೆಡ್ಡಿ ಯಾಳಗಿ ತಿಳಿಸಿದ್ದಾರೆ.

ನಗರದ ಸಿಪಿಎಸ್ ಶಾಲಾ ಮೈದಾನದಲ್ಲಿ ಬಿಜೆಪಿ ವತಿಯಿಂದ ನಡೆದ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರಿಗೆ ಅಭಿನಂದನಾ ಸಮಾರಂಭ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿ ಅವರು ಮಾತನಾಡಿದರು.

ಯಾವುದೇ ಚುನಾವಣೆಯಲ್ಲಿ ಗೆಲುವು ಸಾಧಿಸಿ, ನಾಯಕನನ್ನು ಬೆಳೆಸಲು ಕೇವಲ ವ್ಯಕ್ತಿಯಿಂದ ಸಾಧ್ಯವಿಲ್ಲ. ಅದಕ್ಕೆ ಪಕ್ಷ ಹಾಗೂ ಸಂಘಟನೆ ಮುಖ್ಯ ಎಂದರು.

ಪಕ್ಷದಲ್ಲಿ ಕಾರ್ಯಕರ್ತರು ಸಂಘಟನೆಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು. ಕಾರ್ಯಕರ್ತರಿಗೆ ಹೆಚ್ಚಿನ ಜವಾಬ್ದಾರಿ ನೀಡಿದರೆ ಪಕ್ಷವನ್ನು ಬಲಪಡಿಸಲು ಸಾಧ್ಯ. ನನ್ನ ಮೇಲೆ ವಿಶ್ವಾಸವಿಟ್ಟು ಬಿಜೆಪಿ ರಾಜ್ಯಾಧ್ಯಕ್ಷರು ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನೇಮಕ ಮಾಡಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೆನೆ ಎಂದರು.

ನನಗೆ ಅಧಿಕಾರಕ್ಕಿಂತ ಪಕ್ಷ ಸಂಘಟನೆ ಮುಖ್ಯ. ಯಾವುದೇ ಸಂದರ್ಭದಲ್ಲಿಯೂ ಪಕ್ಷಕ್ಕೆ ಧಕ್ಕೆ ತರುವ ಕೆಲಸ ಮಾಡವುದಿಲ್ಲ. ಪಕ್ಷದ ಹಿರಿಯರ ಮಾರ್ಗದರ್ಶನ, ಯುವ ಕಾರ್ಯಕರ್ತರ ಪಡೆಯೊಂದಿಗೆ ಜಿಲ್ಲೆಯಲ್ಲಿ ಪಕ್ಷ ಸಂಘಟನೆಗೆ ನಿಷ್ಠೆ ಪ್ರಾಮಾಣಿಕತೆಯಿಂದ ದುಡಿದು ತೋರಿಸುತ್ತೇನೆ ಎಂದರು.

ಸಂಸದ ರಾಜಾ ಅಮರೇಶ್ವರ ನಾಯಕ್, ವಿಧಾನ ಪರಿಷತ್ ಸದಸ್ಯ ಬಿ.ಜಿ. ಪಾಟೀಲ್, ಶಾಸಕ ಬಸವರಾಜ ಮತ್ತಿಮೂಡ್, ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಮಾಜಿ ಶಾಸಕ ವೆಂಕಟರೆಡ್ಡಿ ಮುದ್ನಾಳ, ವಿಧಾನಪರಿಷತ್ ಮಾಜಿ ಸದಸ್ಯ ಅಮರನಾಥ ಪಾಟೀಲ್, ರಾಜ್ಯ ಉಪಾಧ್ಯಕ್ಷರಾದ ಲಲಿತಾ ಅನಪುರ, ರಾಜ್ಯ ಕಾರ್ಯದರ್ಶಿ ಶರಣು ತಳಕೇರಿ, ಮಾಜಿ ಜಿಲ್ಲಾಧ್ಯಕ್ಷ ಡಾ. ಶರಣಭೂಪಾಲರೆಡ್ಡಿ, ಚಂದ್ರಶೇಖರ್, ನಾಗರತ್ನ ಕುಪ್ಪಿ, ಸುರೇಶ್ ಅಂಬಿಗೇರ್, ಗುರು ಕಾಮಾ, ಬಸವರಾಜ್ ವಿಭೂತಿಹಳ್ಳಿ, ಡಾ. ಚಂದ್ರಶೇಖರ್ ಸುಬೇದಾರ, ರಾಜುಗೌಡ ಉಕ್ಕಿನಾಳ, ದೇವೇಂದ್ರ ಕೊನೇರ ಸೇರಿದಂತೆ ಇತರರಿದ್ದರು.

Share this article