ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ: ಯಡಿಯೂರಪ್ಪ

KannadaprabhaNewsNetwork |  
Published : May 04, 2024, 12:33 AM IST
ಬೈಂದೂರು3 | Kannada Prabha

ಸಾರಾಂಶ

ವಿಶ್ವವೇ ಮೆಚ್ಚಿದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂದು ಎಲ್ಲರೂ ಬಯಸಿದ್ದಾರೆ. ಹೀಗಾಗಿ ನೂರಕ್ಕೆ ನೂರು ರಾಘವೇಂದ್ರ ಅವರು ಅತ್ಯಧಿಕ ಅಂತರದಲ್ಲಿ ಗೆಲ್ಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಕುಂದಾಪುರ

ಸೂರ್ಯ ಚಂದ್ರರು ಇರುವುದು ಎಷ್ಟು ಸತ್ಯವೋ ಹಾಗೆಯೇ ನರೇಂದ್ರ ಮೋದಿಯವರು ಮೂರನೇ ಬಾರಿಗೆ ಈ ದೇಶದ ಪ್ರಧಾನ ಮಂತ್ರಿಯಾಗುವುದು ಅಷ್ಟೇ ಸತ್ಯ. ದೇಶದಲ್ಲಿ ಎನ್‌ಡಿಎ 400ಕ್ಕೂ ಅಧಿಕ ಸೀಟ್ ಗೆಲ್ಲಲಿದೆ. ಕರ್ನಾಟಕದಲ್ಲಿ 28ಕ್ಕೆ 28 ಸೀಟುಗಳನ್ನು ಗೆಲ್ಲುವ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.

ಅವರು ಬೈಂದೂರಿನಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರ ಪರವಾಗಿ ಬೃಹತ್ ರೋಡ್ ಶೋಗೆ ಚಾಲನೆ ನೀಡಿ ಮಾತನಾಡಿದರು.

ರಾಜ್ಯದ ಉದ್ದಗಲಕ್ಕೂ ಪ್ರವಾಸ ಮಾಡುತ್ತಿದ್ದೇನೆ. ಎಲ್ಲೆಡೆ ಬಿಜೆಪಿ ಅಲೆ, ಮೋದಿ ಅಲೆ ಎದ್ದಿದೆ. ಶಿವಮೊಗ್ಗ ಕ್ಷೇತ್ರದಿಂದ ಬಿ.ವೈ.ರಾಘವೇಂದ್ರ ಕನಿಷ್ಠ 3 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಜಯ ಸಾಧಿಸಲಿದ್ದಾರೆ. ಬೈಂದೂರಿನಿಂದಲೇ 1 ಲಕ್ಷಕ್ಕೂ ಅಧಿಕ ಲೀಡ್ ಬರುವ ವಿಶ್ವಾಸವಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರು ಮಾಡಿರುವ ಅಭಿವೃದ್ಧಿ ಕಾರ್ಯಗಳು ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಸಹಕಾರಿಯಾಗಲಿದೆ. ವಿಶ್ವವೇ ಮೆಚ್ಚಿದ ನರೇಂದ್ರ ಮೋದಿಯವರು ಮತ್ತೊಮ್ಮೆ ಈ ದೇಶದ ಪ್ರಧಾನಿಯಾಗಬೇಕು ಎಂದು ಎಲ್ಲರೂ ಬಯಸಿದ್ದಾರೆ. ಹೀಗಾಗಿ ನೂರಕ್ಕೆ ನೂರು ರಾಘವೇಂದ್ರ ಅವರು ಅತ್ಯಧಿಕ ಅಂತರದಲ್ಲಿ ಗೆಲ್ಲಿದ್ದಾರೆ ಎಂದರು.

* ದಕ್ಷಿಣದಲ್ಲೂ ಟೆಂಪಲ್ ಕಾರೀಡಾರ್

ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ.ಅಣ್ಣಾಮಲೈ ಮಾತ‌ನಾಡಿ, ದಕ್ಷಿಣ ಭಾರತದಲ್ಲಿ ಟೆಂಪಲ್ ಕಾರೀಡಾರ್‌ಗೆ ಆದ್ಯತೆ ನೀಡುತ್ತಿದ್ದೇವೆ. ಈಗಾಗಲೇ ಕಾಶಿ, ವಾರಣಸಿ, ಉಜ್ಜೈನಿ, ಅಯೋಧ್ಯೆ ಕಾರೀಡಾರ್ ಆಗಿದೆ. ಅದೇ ರೀತಿಯಲ್ಲಿ ತಮಿಳುನಾಡಿನಲ್ಲಿ ತಿರುವಅಣ್ಣಾಮಲೈ ಕಾರಿಡಾರ್ ಮಾಡುವುದಾಗಿ ನಾವು ಹೇಳಿದ್ದೇವೆ. ಕರ್ನಾಟಕದಲ್ಲಿ ಮೂಕಾಂಬಿಕಾ ಕಾರೀಡಾರ್ ಮಾಡುವ ಸಮಯ ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರನ್ನು ಇಲ್ಲಿಗೆ ಕರೆದುಕೊಂಡು ಬಂದು, ದೇವಿಯ ದರ್ಶನ ಪಡೆಯಲಿದ್ದಾರೆ. ಕೊಲ್ಲೂರಿನಲ್ಲಿ ಮೂಕಾಂಬಿಕಾ ಕಾರೀಡಾರ್ ಆಗಿಯೇ ಆಗಲಿದೆ. ಈ ಬಗ್ಗೆ ಸ್ಪಷ್ಟ ರೂಪುರೇಷೆ ನಮ್ಮ ಬಳಿಯಿದೆ. ಬೈಂದೂರಿನಿಂದಲೇ 1 ಲಕ್ಷಕ್ಕೂಅಧಿಕ ಲೀಡ್ ನೀಡುವ ವಿಶ್ವಾಸ ವ್ಯಕ್ತವಾಗಿದೆ. ಮೂಕಾಂಬಿಕಾ ಕಾರೀಡಾರ್ ಆದರೆ ಬೈಂದೂರು ಮತ್ತು ಕೊಲ್ಲೂರು ಕ್ಷೇತ್ರ ಅಂತಾರಾಷ್ಟ್ರೀಯ ಮನ್ನಣೆ ಪಡೆಯಲಿದೆ ಎಂದರು. * ಗಂಭೀರವಾಗಿ ತೆಗೆದುಕೊಂಡಿದ್ದೇವೆ

ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಮಾತನಾಡಿ, ಕಾಂಗ್ರೆಸ್‌ನಿಂದ ಯಾರೇ ಪ್ರಚಾರ ಮಾಡಲಿ. ನಾವಂತೂ ಚುನಾವಣೆಯನ್ನು ಅತ್ಯಂತ ಗಂಭೀರವಾಗಿ ತೆಗೆದುಕೊಂಡಿದ್ದೇವೆ. ಅಷ್ಟೇ ಪರಿಣಾಮಕಾರಿಯಾಗಿ ಪ್ರಚಾರ ಪ್ರಕ್ರಿಯೆ ನಡೆಸುತ್ತಿದ್ದೇವೆ. ಬೈಂದೂರು ಕ್ಷೇತ್ರದಿಂದಲೇ ಒಂದು ಲಕ್ಷಕ್ಕೂ ಅಧಿಕ ಲೀಡ್ ನೀಡುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೇಶ ಮತ್ತು ಸ್ವಾಭಿಮಾನದಿಂದ ಇಲ್ಲಿನ ಜನರು ಬಿಜೆಪಿಗೆ ಮತ ನೀಡಲಿದ್ದಾರೆ ಎಂದು ಹೇಳಿದರು. * ಬೃಹತ್ ರೋಡ್ ಶೋ

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಅಣ್ಣಾಮಲೈ ಅವರ ನೇತೃತ್ವದಲ್ಲಿ ಬೃಹತ್ ರೋಡ್ ಶೋ ಬೈಂದೂರಿನಿಂದ ಆರಂಭಗೊಂಡು, ಉಪ್ಪುಂದ ಭಾಗದಲ್ಲಿ ಸಂಚರಿಸಿತು. ಶಾಸಕರಾದ ಗುರುರಾಜ ಗಂಟಿಹೊಳೆ, ಭಾಗೀರಥಿ ಮುರುಳ್ಯ, ಬಿಜೆಪಿ ಜಿಲ್ಲಾಧ್ಯಕ್ಷರ ಕಿಶೋರ್ ಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ್ ಪೂಜಾರಿ, ಪ್ರಮುಖರಾದ ನಟಿ ತಾರಾ, ಬ್ರಿಜೇಶ್ ಚೌಟ, ದೀಪಕ್ ಕುಮಾರ್ ಶೆಟ್ಟಿ ಮೊದಲಾದವರು ಇದ್ದರು. ಬೈಕ್ ರ‍್ಯಾಲಿಯಲ್ಲಿ ಕಾರ್ಯಕರ್ತರು, ಮುಖಂಡರು ಅಪಾರ ಸಂಖ್ಯೆಯಲ್ಲಿ ಸೇರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೆಡಿಯು ನಾಯಕ ನಿತೀಶ್‌ ರಾಜ್ಯಸಭೆಗೆ - ಸಿಎಂ ಸ್ಥಾನಕ್ಕೆ ರಾಜೀನಾಮೆ
ಈ ಸಾಲಲ್ಲಿ ಅಬಕಾರಿ ರಾಜಸ್ವ ಟಾರ್ಗೆಟ್‌ ಕಷ್ಟ? 11 ತಿಂಗಳಲ್ಲಿ ಮದ್ಯ ಮಾರಾಟ ಗಣನೀಯ ಕುಸಿತ